ಸೋಮೇಶ್ವರ ಬೀಚ್ ಸ್ವಚ್ಛಗೊಳಿಸಿ ಪ್ರಧಾನಿಯ ಮನಸೆಳೆದ ದಂಪತಿಗೆ ಬಿಜೆಪಿ ಸಮ್ಮಾನ
Team Udayavani, Dec 27, 2020, 9:21 PM IST
ಉಡುಪಿ: ಮದುವೆಯಾಗಿ ಹನಿಮೂನ್‌ಗೆ ಹೋಗುವುದನ್ನು ಬಿಟ್ಟು ಸೋಮೇಶ್ವರ ಬೀಚ್ ಸ್ವಚ್ಛಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಶಂಸೆಗೆ ಪಾತ್ರರಾದ ನವದಂಪತಿ ಬೈಂದೂರಿನ ಅನುದೀಪ್ ಹೆಗ್ಡೆ ಹಾಗೂ ಮಿನುಷಾ ಅವರನ್ನು ಬಿಜೆಪಿ ವತಿಯಿಂದ ರವಿವಾರ ಸಮ್ಮಾನಿಸಲಾಯಿತು.
ಅಜ್ಜರಕಾಡು ಸಮೀಪದ ವಸತಿ ಸಮುಚ್ಚಯದಲ್ಲಿರುವ ಅವರ ನಿವಾಸಕ್ಕೆ ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರು ನವದಂಪತಿಗೆ ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದಲೂ ಸಮ್ಮಾನಿಸಲಾಯಿತು.
ಮಾದರಿ ಕೆಲಸ
ಈ ಸಂದರ್ಭ ನಳಿನ್ ಅವರು ಮಾತನಾಡಿ, ಈ ದಂಪತಿಯ ಕೆಲಸ ಯುವಕರಿಗೆ ಮಾದರಿ. ಸ್ವತ್ಛತೆಯನ್ನು ತಪಸ್ಸಿನಂತೆ ಮಾಡಿ ಪ್ರಧಾನಿಯ ಮೆಚ್ಚುಗೆ ಗಳಿಸಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದರು.
ಇದನ್ನೂ ಓದಿ:ಪಕೃತಿಯ ಮಡಿಲಲ್ಲಿ ಕಂಗೊಳಿಸುತ್ತಿದೆ ದೇವರಗುಂಡಿ ಜಲಪಾತ
ಹಳ್ಳಿಗಳಿಗೆ ತೆರಳಿ ಸ್ವಚ್ಛತೆ
ಮುಂದೆ ಶಾಲಾ, ಕಾಲೇಜು, ಹಳ್ಳಿಗಳಿಗೆ ತೆರಳಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಬೇಕೆಂಬ ಆಶಯವಿದೆ. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು ಹಾಗೂ ಸೂಕ್ತ ವಿಲೇವಾರಿಯಿಂದ ಪರಿಸರ ಮಾಲಿನ್ಯ ಸಮಸ್ಯೆಗೆ ಅರ್ಧ ಪರಿಹಾರ ಸಿಗುತ್ತದೆ ಎಂದು ಅನುದೀಪ್ ಹೆಗ್ಡೆ – ಮಿನುಷಾ ದಂಪತಿ ತಿಳಿಸಿದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮೀನುಗಾರಿಕಾ ಪ್ರಕೋಷ್ಠದ ಅಧ್ಯಕ್ಷ ಯಶ್‌ಪಾಲ್ ಎ. ಸುವರ್ಣ, ಪ್ರಮುಖರಾದ ಜಗದೀಶ್ ಅಧಿಕಾರಿ, ಶಿಲ್ಪಾ ಜಿ. ಸುವರ್ಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ
Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.