Ullala ಸೋಮೇಶ್ವರ ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹ*ತ್ಯೆ
Team Udayavani, Dec 12, 2024, 12:45 AM IST
ಉಳ್ಳಾಲ: ಸೋಮೇಶ್ವರ ರುದ್ರಪಾದೆಯಿಂದ ಮದ್ಯಾಹ್ನ ವೇಳೆ ಹಾರಿದ ಮಂಗಳೂರಿನ ಪಡೀಲು ವೀರನಗರ ನಿವಾಸಿ ಉದಯ್ ಕುಮಾರ್ (46) ಅವರ ಮೃತದೇಹ ಸಮೀಪದ ಅಲಿಮಕಲ್ಲು ಎಂಬಲ್ಲಿ ಸಂಜೆ ಹೊತ್ತಿಗೆ ಪತ್ತೆಯಾಗಿದೆ.
ಪದವಿನಂಗಡಿಯಲ್ಲಿ ಕಟ್ಟಡ ಕಾಮಗಾರಿಯ ಬಿಡಿಭಾಗಗಳ ಮಾರಾಟದ ಅಂಗಡಿ ಹೊಂದಿರುವ ಅವರು ಮಧ್ಯಾಹ್ನ ದ್ವಿಚಕ್ರ ವಾಹನ ಸಹಿತ ತನ್ನಲ್ಲಿದ್ದ ಸೊತ್ತುಗಳನ್ನು ತೆಗೆದಿರಿಸಿ ನೀರಿಗೆ ಹಾರಿದ್ದಾರೆ.
ಸಮುದ್ರ ತೀರದಲ್ಲಿದ್ದ ಯುವಕನೋರ್ವ ಈ ವಸ್ತುಗಳನ್ನು ಕಂಡು ಸಮೀಪದ ಅಂಗಡಿಯವರಿಗೆ ನೀಡಿದ್ದು, ಅವರು ಉಳ್ಳಾಲ ಪೊಲೀಸರಿಗೆ ಮಾಹಿತಿ ತಿಳಿಸಿದ್ದರು.
ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬಂದಿ ಸಹಿತ ಸ್ಥಳೀಯ ಈಜುಗಾರರು ಶೋಧ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ, ಪುತ್ರನನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಂಡರ್-19 ವನಿತಾ ಕ್ರಿಕೆಟ್ ಇರಾ ಜಾಧವ್ 346
Chamarajapete: ಹಸುಗಳ ಕೆಚ್ಚಲು ಕೊಯ್ದವರ ವಿರುದ್ಧ ಕಠಿನ ಕ್ರಮ: ಸಿಎಂ ಸಿದ್ದರಾಮಯ್ಯ
BBK11: ಇನ್ಮುಂದೆ ನನ್ನ ಕಿರಿಕಿರಿ ನಿಮಗೆ ಇರಲ್ಲ .. ದೊಡ್ಮನೆಯಿಂದ ಚೈತ್ರಾ ಔಟ್
Udupi; ಗೀತಾರ್ಥ ಚಿಂತನೆ 154: ವೈಯಕ್ತಿಕ ಸುಖ ಬೇಡ, ಲೋಕ ಸುಖ ಬೇಕು
CM Post: ಐದು ವರ್ಷವೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.