“ವಾಹನ ವೇಗದ ಮಿತಿ ಪತ್ತೆಗೆ ಅತ್ಯಾಧುನಿಕ ಕೆಮರಾ’
Team Udayavani, Mar 18, 2021, 5:45 AM IST
ಸ್ಟೇಟ್‌ಬ್ಯಾಂಕ್: ದ.ಕ. ಜಿಲ್ಲೆಯಲ್ಲಿ ಕಳೆದ 3-4 ವರ್ಷಗಳಲ್ಲಿ ಹೆಚ್ಚು ಅಪಘಾತವಾಗಿರುವ ಸ್ಥಳಗಳನ್ನು ಗುರುತಿಸಿ ಅಪಘಾತ ರಹಿತ ಸ್ಥಳಗಳನ್ನಾಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯವಿದ್ದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸುವುದರ ಜತೆಗೆ ಅಪಘಾತ ವಲಯ ಪ್ರದೇಶವೆಂದು ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಕೆಮರಾಗಳನ್ನು ಅಳವಡಿಸಿ ವಾಹನದ ವೇಗದ ಮಿತಿಯನ್ನು ಕಂಡು ಹಿಡಿಯುವುದರೊಂದಿಗೆ ಸಂಚಾರ ನಿಯಮವನ್ನು ಉಲ್ಲಂಘಿಸಿದರೆ ದಂಡವಿಧಿಸಲು ಮುಂದಾಗಬೇಕು ಎಂದು ಪೊಲೀಸ್ ಅಧೀಕ್ಷಕ ಲಕ್ಷ್ಮೀ ಪ್ರಸಾದ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗಳೂರಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಬುಧವಾರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಜಿಲ್ಲಾಮಟ್ಟದ ರಸ್ತೆ ಸುರಕ್ಷ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರ ವ್ಯಾಪ್ತಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗದ ಸ್ಥಳಗಳಲ್ಲಿ ಆಟೋರಿಕ್ಷಾಗಳ ತಂಗುದಾಣ, ಬಸ್ ಬೇಗಳನ್ನು ನಿರ್ಮಿಸಲು ಗುರುತಿಸಲಾಗಿರುವ ಜಾಗದಲ್ಲಿ ಸ್ಮಾರ್ಟ್‌ಸಿಟಿ ಅಡಿಯಲ್ಲಿ ಅವುಗಳನ್ನು ನಿರ್ಮಾಣ ಮಾಡಬೇಕು ಎಂದರು.
ಜಿಲ್ಲೆಯಲ್ಲಿ ರಸ್ತೆ ವಿಸ್ತರಣೆ, ಕಾಂಕ್ರೀಟ್ ಕಾಮಗಾರಿಗಳು ಪ್ರಗತಿಯಲ್ಲಿರುವುದರಿಂದ ರಸ್ತೆ ಅಪಘಾತಗಳು, ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಆದ್ದರಿಂದ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸುರಕ್ಷ ನಿಯಮ ಪಾಲಿಸಿ
ರಾಷ್ಟ್ರೀಯ ಹೆದ್ದಾರಿ, ಸಾಮಾನ್ಯ ರಸ್ತೆಗಳಲ್ಲಿ ರಸ್ತೆ ವಿಭಾಜಕಗಳನ್ನು ನಿರ್ಮಿಸಬೇಕು ಮತ್ತು ಪಾದಚಾರಿಗಳು ರಸ್ತೆ ದಾಟಲು ಬಳಸುವ ಝೀಬ್ರಾ ಕ್ರಾಸಿಂಗ್‌ಗಳಿಗೆ ಬಣ್ಣ ಬಳಿಯುವುದರಿಂದ ರಸ್ತೆ ಅಪಘಾತಗಳನ್ನು ತಪ್ಪಿಸಬಹುದು. ಚಾಲಕರು ಕಡ್ಡಾಯವಾಗಿ ರಸ್ತೆ ಸುರಕ್ಷ ನಿಯಮಗಳನ್ನು ಪಾಲಿಸುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ರಸ್ತೆ ಸುರಕ್ಷ ಮಾಸಾಚರಣೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು.
ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶದ ಒಳಗೆ ಹಾಗೂ ಗ್ರಾಮೀಣ ಭಾಗಕ್ಕೆ ಸಂಚರಿಸುವ ಖಾಸಗಿ, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಅಪಘಾತ ಸಂಭವಿಸುತ್ತಿರುವುದು ಕಂಡುಬರುತ್ತಿದೆ. ಬಸ್‌ಗಳಲ್ಲಿ ಸರಿಯಾದ ವೇಗದ ಮಿತಿಯನ್ನು ಅಳವಡಿಸದೇ ಇರುವುದರಿಂದ ಬಸ್‌ಗಳು ಅತಿ ವೇಗವಾಗಿ ಸಂಚರಿಸಿ ಅಪಘಾತಗಳು ನಡೆಯುತ್ತಿವೆ. ಇಂತಹ ಬಸ್‌ಗಳ ಸಂಚಾರವನ್ನು ನಿಲ್ಲಿಸುವಂತೆ ಅಧಿಕಾರಿಗಳು ಕಾರ್ಯಪ್ರವೃತರಾಗಬೇಕು ಎಂದರು.
ಸಾರಿಗೆ ಇಲಾಖೆಯ ಪ್ರಾದೇಶಿಕ ಅಧಿಕಾರಿ ವರ್ಣೇಕರ್, ಪುತ್ತೂರು ವಿಭಾಗೀಯ ಕೆಎಸ್‌ಆರ್‌ಟಿಸಿ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ, ಮಂಗಳೂರು ವಿಭಾಗೀಯ ಕೆ.ಎಸ್.ಆರ್. ಟಿ.ಸಿ. ನಿಯಂತ್ರಣಾಧಿಕಾರಿ ಕಮಲ್ ಕುಮಾರ್ ಎಚ್.ಆರ್. ಉಪಸ್ಥಿತರಿದ್ದರು.
ಘನ ವಾಹನ ಸಂಚಾರಕ್ಕೆ ಸಮಯ ನಿಗದಿ
ಲಕ್ಷ್ಮೀ ಪ್ರಸಾದ್ ಮಾತನಾಡಿ, ನವ ಮಂಗಳೂರು ಬಂದರಿನಿಂದ ಪ್ರತೀ ದಿನ ಅಧಿಕ ಭಾರದ ವಾಹನಗಳು ಸಂಚರಿಸುತ್ತಿದ್ದು, ಈ ಭಾಗದಲ್ಲಿ ಸಂಚರಿಸುವ ಇತರ ವಾಹನ ಸವಾರರಿಗೆ ಅಡ್ಡಿಯಾಗುತ್ತಿದೆ. ಜತೆಗೆ ವಾಹನ ದಟ್ಟಣೆಯಾಗುತ್ತದೆ. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಅವುಗಳಿಗೆ ಸಂಚಾರ ಸಮಯವನ್ನು ನಿಗದಿಪಡಿಸಬೇಕು. ಭಾರೀ ವಾಹನಗಳ ತಪಾಸಣೆ ನಡೆಸಬೇಕು. ಮಣ್ಣಗುಡ್ಡ ಮತ್ತು ನಂತೂರಿನಲ್ಲಿ ವಾರಸುದಾರರಿಲ್ಲದ ವಾಹನಗಳು ರಸ್ತೆಯ ಬದಿಯಲ್ಲಿ ನಿಂತಿರುವುದು ಕಂಡುಬರುತ್ತಿದ್ದು, ಆ ವಾಹನಗಳನ್ನು ಅದಷ್ಟು ಬೇಗ ತೆರವುಗೊಳಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.