ಭೀಕರ ರಸ್ತೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 9 ಮಂದಿಗೆ ಗಾಯ ; ಗ್ರಾಮದಲ್ಲಿ ನೀರವ ಮೌನ
Team Udayavani, Apr 13, 2022, 3:22 PM IST
ಸೊರಬ: ಟಾಟಾಏಸ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಚಿತ್ರಟ್ಟಹಳ್ಳಿ ಗ್ರಾಮದ ಬಳಿ ತಡ ರಾತ್ರಿ ನಡೆದಿದೆ.
ತವನಂದಿ ಗ್ರಾಮದ ಯೋಗರಾಜಪ್ಪ ನಿಂಗಪ್ಪ (57), ತಿಮ್ಮಪ್ಪ ಈರಪ್ಪ (45) ಹಾಗೂ ಆಕಾಶ್ ಹನುಮಂತಪ್ಪ (13) ಮೃತ ದುರ್ಧೈವಿಗಳು. ಅಪಘಾತದಿಂದ ತೀವ್ರವಾಗಿ ಗಾಯಗೊಂಡಿರುವ ಬಸವರಾಜ್, ಹುಚ್ಚರಾಯಪ್ಪ, ಪರಶುರಾಮ, ಕೃಷ್ಣಪ್ಪ, ಜಗದೀಶ, ಚಂದ್ರಪ್ಪ, ಭೀಮಪ್ಪ, ಹನುಮಂತಪ್ಪ ಹಾಗೂ ಮಹಾದೇವಪ್ಪ ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಾಗಿದ್ದು, ವಾಹನ ಚಾಲಕ ಹನುಮಂತಪ್ಪ ಮತ್ತು ನಿರಂಜನ ಅವರಿಗೆ ಸೊರಬ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಾಗರ ಸಮೀಪದ ಗುತ್ತನಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮಕ್ಕೆ ತೆರಳಿದ್ದವರು ಭೋಜನ ಸ್ವೀಕರಿಸಿ ತವನಂದಿ ಗ್ರಾಮಕ್ಕೆ ವಾಪಾಸ್ಸಾಗುವ ವೇಳೆ ಆನವಟ್ಟಿ-ಸೊರಬ ರಸ್ತೆಯ ಚಿತ್ರಟ್ಟಹಳ್ಳಿ ಗ್ರಾಮದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ವಾಹನವು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ 112 ಪೊಲೀಸ್ ಸಿಬ್ಬಂದಿ ತೆರಳಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಇದನ್ನೂ ಓದಿ : ಆರೋಪಿಗಳ ಬಂಧನವಾಗದ ಹೊರತು ತಮ್ಮನ ಮೃತದೇಹವನ್ನು ಕೊಂಡೊಯ್ಯಲ್ಲ
ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಎಲ್. ರಾಜಶೇಖರ್ ಹಾಗೂ ಪಿಎಸ್‍ಐ ದೇವರಾಯ ಅವರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಅಪಘಾತದಲ್ಲಿ ಗಾಯಗೊಂಡವರು ಹಾಗೂ ಮೃತರು ತವನಂದಿ ಗ್ರಾಮದವರಾಗಿದ್ದು, ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.