ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ
ಯಡಿಯೂರಪ್ಪ ಭಾಷಣದ ವೇಳೆ ಮಾಜಿ ಶಾಸಕರ ಮಧ್ಯಪ್ರವೇಶ, ಬಿಜೆಪಿಯಲ್ಲಿನ ಒಗ್ಗಟ್ಟು ಒಡೆಯುವವರಿಗೆ ಏನು ಕ್ರಮ ಆಗಿದೆ?
Team Udayavani, Jan 11, 2025, 7:15 AM IST
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವವರ ವಿರುದ್ಧ ಕ್ರಮ ಜರಗಿಸದೇ ಇದ್ದರೆ ಪಕ್ಷ ದುರ್ಬಲವಾಗಿದೆ ಎಂಬ ಸಂದೇಶ ರವಾನೆಯಾಗುತ್ತದೆ. ಹೀಗಾಗಿ ಅಂತಹವರ ವಿರುದ್ಧ ಕ್ರಮ ಜರಗಿಸಿ ಎಂದು ಬಸವನಗೌಡ ಪಾಟೀಲ್ ಯತ್ನಾಳ್ ಬಣದ ವಿರುದ್ಧ ಮಾಜಿ ಶಾಸಕರು ಮುಗಿಬಿದ್ದಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರ ಸಭೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಒಗ್ಗಟ್ಟಿನ ಭಾಷಣ ಮಾಡುತ್ತಿದ್ದಂತೆ ಕೆಲವರು ಮಧ್ಯಪ್ರವೇಶಿಸಿ, ಒಗ್ಗಟ್ಟು ಒಡೆಯುವ ಕೆಲಸ ಮಾಡುತ್ತಿರುವವರ ಬಗ್ಗೆ ಏನು ಕ್ರಮ ಆಗಿದೆ? ಹಾಗೂ ಏನು ಕ್ರಮ ಆಗಲಿದೆ ಎಂದು ಪ್ರಶ್ನಿಸಿದರು.
ಮಾಜಿ ಸಚಿವ ರೇಣುಕಾಚಾರ್ಯ ನೇರವಾಗಿ ಮಾತಿಗಿಳಿದು, ಕೆಲವರು ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದಾರೆ. ಮುಡಾ ಹಗರಣದ ವಿರುದ್ಧ ಪಕ್ಷ ನಡೆಸಿದ ಹೋರಾಟಕ್ಕೆ ಬಾರದವರು, ವಕ್ಫ್ ವಿರುದ್ಧ ಪ್ರತ್ಯೇಕ ಹೋರಾಟ ನಡೆಸುತ್ತಿದ್ದಾರೆ. ರಾಜ್ಯಾಧ್ಯಕ್ಷರ ವಿರುದ್ಧವೇ ಮಾತನಾಡುತ್ತಾರೆ. ಇದರಿಂದ ಕಾರ್ಯಕರ್ತರು ಗೊಂದಲಕ್ಕೊಳಗಾಗಿದ್ದಾರೆ. ನಾವೂ ರಾಜ್ಯ ಪ್ರವಾಸ ಮಾಡಿದ್ದೇವೆ. ಈ ಸಂದರ್ಭದಲ್ಲಿ ಕಾರ್ಯಕರ್ತರು ನಮ್ಮನ್ನು ಪ್ರಶ್ನಿಸುತ್ತಿದ್ದಾರೆ. ಪಕ್ಷ ವಿರೋಧಿಯಾಗಿ ನಡೆದುಕೊಂಡರೂ ಕ್ರಮ ಆಗದಿದ್ದರೆ ಹೈಕಮಾಂಡ್ ಏನು ಸಂದೇಶ ಕೊಟ್ಟಂತಾಗುತ್ತದೆ ಎಂದು ಪ್ರಶ್ನಿಸಿದರು.
ಎರಡೂ ಕೈ ಸೇರಿ ಚಪ್ಪಾಳೆ
ರೇಣುಕಾಚಾರ್ಯ ಮಾತಿಗೆ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ವೈ. ಸಂಪಂಗಿ ಸೇರಿ ಹಲವರು ಧ್ವನಿಗೂಡಿಸಿದರು. ಮಧ್ಯಪ್ರವೇಶಿಸಿದ ವಿಪಕ್ಷ ನಾಯಕ ಆರ್. ಅಶೋಕ್, ಎರಡೂ ಕೈ ಸೇರಿ ಚಪ್ಪಾಳೆ ಆಗಿರುತ್ತದೆ. ಒಂದೇ ಕೈಯಲ್ಲಿ ಚಪ್ಪಾಳೆ ಹೊಡೆಯಲು ಸಾಧ್ಯವಿಲ್ಲ. ಇದನ್ನೆಲ್ಲಾ ಇಲ್ಲಿಗೇ ನಿಲ್ಲಿಸುವುದು ಒಳ್ಳೆಯದು ಎಂದು ಸಲಹೆ ನೀಡಿದರು. ಇದಕ್ಕೆ ಆಕ್ಷೇಪಿಸಿದ ಕಳಕಪ್ಪ ಬಂಡಿ, ಮಾತನಾಡಲು ಮುಂದಾದರೂ ಅದನ್ನು ಪರಿಗಣಿಸದ ಅಶೋಕ್, ಒಗ್ಗಟ್ಟಿನ ಮಂತ್ರ ಜಪಿಸಿದರು.
ಯಾರೂ ತಲೆಕೆಡಿಸಿಕೊಳ್ಳಬೇಡಿ
ಯಡಿಯೂರಪ್ಪ ಹಾಗೂ ವಿಜಯೇಂದ್ರ ಸಹ ಮಧ್ಯಪ್ರವೇಶಿಸಿ, ನಮ್ಮ ವಿರುದ್ಧ ಯಾರು ಏನೇ ಮಾತನಾಡಿದರೂ ತಲೆಕೆಡಿಸಿಕೊಳ್ಳಬೇಡಿ. ನಮ್ಮ ವಿರುದ್ಧ ಮಾತನಾಡುವವರೂ ನಮ್ಮ ಪಕ್ಷದವರೇ ಎಂಬುದನ್ನು ನೆನಪಿನಲ್ಲಿ ಇಟ್ಟುಕೊಳ್ಳಿ. ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕಾಲ ಬರಲಿದೆ. ವರಿಷ್ಠರು ಎಲ್ಲವನ್ನೂ ಗಮನಿಸುತ್ತಾರೆ. ನಮ್ಮ ಗುರಿ ಪಕ್ಷ ಸಂಘಟನೆಯೇ ಆಗಿರಬೇಕು. ಅದಕ್ಕಾಗಿ ಒಗ್ಗಟ್ಟಿನಿಂದ ಹೋಗಲೇಬೇಕು ಎಂದು ಪ್ರತಿಪಾದಿಸಿದರು.
ವಿಜಯೇಂದ್ರ ಪರ ಬ್ಯಾಟಿಂಗ್
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವಧಿ ಪೂರ್ಣಗೊಂಡಿರುವುದರಿಂದ ಅವರನ್ನು ಅಧಿಕಾರದಿಂದ ಕೆಳಗಣಿಸಲಾಗುತ್ತದೆ ಎಂಬ ವದಂತಿಗಳ ನಡುವೆಯೇ ಮಾಜಿ ಶಾಸಕರು ವಿಜಯೇಂದ್ರರ ಸಾರಥ್ಯವನ್ನು ಬೆಂಬಲಿಸಿದ್ದಾರೆ. ಅಧ್ಯಕ್ಷರು ಎಲ್ಲ ಸಮುದಾಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಅವರ ಬದಲಾವಣೆ ಬಗ್ಗೆ ಹೊರಗೆ ಚರ್ಚೆಗಳು ನಡೆಯುತ್ತಿವೆ. ಇದಕ್ಕೆಲ್ಲಾ ಕಡಿವಾಣ ಹಾಕಬೇಕು. ಅವರನ್ನೇ ಅಧ್ಯಕ್ಷರಾಗಿ ಮುಂದುರಿಸಬೇಕು, ಮುಂದಿನ ವಿಧಾನಸಭೆ ಚುನಾವಣೆಯನ್ನೂ ಅವರ ನೇತೃತ್ವದಲ್ಲೇ ನಡೆಸುವ ಭರವಸೆ ನೀಡಬೇಕು ಎಂದು ಕೆಲವರು ಪಟ್ಟು ಹಿಡಿದ ಪ್ರಸಂಗವೂ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್’!
MUST WATCH
ಹೊಸ ಸೇರ್ಪಡೆ
Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.