ಅನುದಾನಕ್ಕೆ ಕತ್ತರಿ! : 5,495 ಕೋ.ರೂ. ವಿಶೇಷ ಅನುದಾನಕ್ಕೆ ಲಭಿಸದ ಸಮ್ಮತಿ


Team Udayavani, Feb 5, 2020, 7:15 AM IST

central-govt

ಬೆಂಗಳೂರು: ಮುಂದಿನ ಆರ್ಥಿಕ ವರ್ಷದಲ್ಲಿ ರಾಜ್ಯಕ್ಕೆ 5,495 ಕೋ.ರೂ. ವಿಶೇಷ ಅನುದಾನ ನೀಡಬಹುದು ಎಂಬ 15ನೇ ಹಣಕಾಸು ಆಯೋಗದ ಶಿಫಾರಸನ್ನು ತಿರಸ್ಕರಿಸುವ ಮೂಲಕ ಕೇಂದ್ರ ಸರಕಾರ ರಾಜ್ಯಕ್ಕೆ ಆಘಾತ ನೀಡಿದೆ.

ಪ್ರಸಕ್ತ ವರ್ಷಕ್ಕೆ ಹೋಲಿಸಿದರೆ 2020-21ನೇ ಸಾಲಿನಲ್ಲಿ ಕೇಂದ್ರೀಯ ತೆರಿಗೆಯಲ್ಲಿ ರಾಜ್ಯಕ್ಕೆ ಸಿಗುವ ಪಾಲಿನ ಪ್ರಮಾಣದಲ್ಲಿ 5,495 ಕೋಟಿ ರೂ. ಖೋತಾ ಆಗಲಿದೆ. ಈ ಕೊರತೆಯನ್ನು ವಿಶೇಷ ಅನುದಾನದ ರೂಪದಲ್ಲಿ ಭರಿಸಬೇಕು ಎಂಬ ಆಯೋಗದ ಶಿಫಾರಸನ್ನು ಒಪ್ಪದ ಕೇಂದ್ರ, ಈ ಬಗ್ಗೆ ಪುನರ್‌ ಪರಿಶೀಲಿಸುವಂತೆ ಆಯೋಗಕ್ಕೆ ಸೂಚಿಸಿದೆ. ಆ ಹಿನ್ನೆಲೆ ಯಲ್ಲಿ ರಾಜ್ಯ ಸರಕಾರವು ಆಯೋಗದ ಶಿಫಾರಸಿನಂತೆ 5,495 ಕೋಟಿ ರೂ. ವಿಶೇಷ ಅನುದಾನದ ಜತೆಗೆ ರಾಜ್ಯದ ಪಾಲಿನ ಮೊತ್ತ ಹೆಚ್ಚಳ ಮಾಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ನಡೆಸಿದೆ.

14ನೇ ಹಣಕಾಸು ಆಯೋಗದ ಶಿಫಾರಸಿನ ಅವಧಿ ಮುಕ್ತಾಯವಾದ ಬೆನ್ನಲ್ಲೇ 15ನೇ ಹಣಕಾಸು ಆಯೋಗ 2020-21ನೇ ಸಾಲಿಗೆ ಶಿಫಾರಸು ವರದಿ ಸಲ್ಲಿಸಿದೆ. 14ನೇ ಆಯೋಗದ ಅವಧಿಯಲ್ಲಿ ಕೇಂದ್ರೀಯ ತೆರಿಗೆಯಲ್ಲಿ ಶೇ.42ರಷ್ಟು ಪಾಲನ್ನು ರಾಜ್ಯಗಳಿಗೆ ನಿಗದಿಪಡಿಸಲಾಗಿತ್ತು. ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವಾಗಿ ರೂಪಿಸಿರುವುದು ಮತ್ತು ಲಡಾಕ್‌ ಕೇಂದ್ರಾಡಳಿತ ಪ್ರದೇಶ ರಚನೆ ಹಿನ್ನೆಲೆಯಲ್ಲಿ ರಾಜ್ಯಗಳ ಪಾಲನ್ನು ಶೇ. 41ಕ್ಕೆ ಇಳಿಸಲಾಗಿದ್ದು, ಶೇ. 1ರಷ್ಟು ಕಡಿತವಾಗಿದೆ.

3,131 ಕೋ.ರೂ. ಖೋತಾ
14ನೇ ಹಣಕಾಸು ಆಯೋಗದಡಿ ರಾಜ್ಯಗಳಿಗೆ ನಿಗದಿಪಡಿಸಿದ ಶೇ. 42ರಷ್ಟು ಪಾಲಿನಲ್ಲಿ ಕರ್ನಾಟಕಕ್ಕೆ ಶೇ. 4.71ರಷ್ಟು ನಿಗದಿಯಾಗಿತ್ತು. 15ನೇ ಆಯೋಗದಡಿ ಗೊತ್ತುಪಡಿಸಿದ ಶೇ. 41ರಲ್ಲಿ ಕರ್ನಾಟಕಕ್ಕೆ ಶೇ.3.65 ನಿಗದಿಯಾಗಿದ್ದು, ರಾಜ್ಯದ ಪಾಲು ಗಣನೀಯ ಇಳಿಕೆಯಾಗುವುದು ನಿಶ್ಚಿತ. 14ನೇ ಆಯೋಗದ ಕೊನೆಯ ಅವಧಿ, ಎಂದರೆ 2019-20ರಲ್ಲಿ ರಾಜ್ಯಕ್ಕೆ 39,806 ಕೋ.ರೂ. ನಿಗದಿಪಡಿಸಲಾಗಿತ್ತು.

ಬಳಿಕ ಕೇಂದ್ರವು ತನ್ನ ಪಾಲಿನ ಮೊತ್ತವನ್ನು 36,675 ಕೋ.ರೂ.ಗೆ ಪರಿಷ್ಕರಿಸಿದೆ. ಹಾಗಾಗಿ ಪ್ರಸ್ತುತ ವರ್ಷದಲ್ಲಿ 3,131 ಕೋ.ರೂ. ಖೋತಾ ಆದಂತಾಗಿದೆ ಎಂದು ಮೂಲಗಳು ಹೇಳಿವೆ.

5,495 ಕೋ.ರೂ. ಅನುದಾನಕ್ಕೆ ಶಿಫಾರಸು
15ನೇ ಹಣಕಾಸು ಆಯೋಗದ ಶಿಫಾರಸಿನಡಿ 2020-21ನೇ ಸಾಲಿಗೆ ಕೇಂದ್ರೀಯ ತೆರಿಗೆಯಲ್ಲಿ ರಾಜ್ಯಕ್ಕೆ 31,180 ಕೋ.ರೂ. ನಿಗದಿಪಡಿಸಲಾಗಿದೆ. ಹಾಗಾಗಿ ಕಳೆದ ಸಾಲಿಗೆ ಮಂಜೂರಾದ ಪಾಲಿಗೆ ಹೋಲಿಸಿದರೆ ಮುಂದಿನ ವರ್ಷದ ಪಾಲಿನಲ್ಲಿ 5,495 ಕೋ.ರೂ. ಕಡಿಮೆಯಾಗಲಿದೆ. ಈ ಕೊರತೆಯನ್ನು ವಿಶೇಷ ಅನುದಾನದ ರೂಪದಲ್ಲಿ 3 ಕಂತಿನಲ್ಲಿ ಬಿಡುಗಡೆ ಮಾಡಬಹುದು ಎಂದು 15ನೇ ಆಯೋಗ ಶಿಫಾರಸು ಮಾಡಿತ್ತು.

ಒಪ್ಪಿಗೆ ನೀಡದ ಕೇಂದ್ರ
ರಾಜ್ಯಕ್ಕೆ 5,495 ಕೋಟಿ ರೂ. ವಿಶೇಷ ಅನುದಾನ ನೀಡಬಹುದೆಂಬ ಶಿಫಾರಸನ್ನು ಕೇಂದ್ರವು ಒಪ್ಪದೆ, ಅದನ್ನು ಪುನರ್‌ ಪರಿಶೀಲಿಸುವಂತೆ ಸೂಚಿಸಿದೆ.

15ನೇ ಹಣಕಾಸು ಆಯೋಗದ ಶಿಫಾರಸನ್ನು ಒಪ್ಪಿ 2020-21ನೇ ಸಾಲಿನಲ್ಲಿ ಕರ್ನಾಟಕಕ್ಕೆ ಸುಮಾರು 5,495 ಕೋಟಿ ರೂ. ವಿಶೇಷ ಅನುದಾನ ನೀಡಬೇಕು. ಜತೆಗೆ ಕೇಂದ್ರೀಯ ತೆರಿಗೆ ಪಾಲಿನಲ್ಲಿ ಕರ್ನಾಟಕದ ಮೊತ್ತ ಕಡಿಮೆಯಾಗಿದ್ದು, ಹೆಚ್ಚುವರಿ ಅನುದಾನ ನೀಡಬೇಕು ಎಂದು ಕೋರಿ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ನಡೆದಿದೆ. ಹಾಗೆಯೇ 15ನೇ ಹಣಕಾಸು ಆಯೋಗವು 2021ರಿಂದ 2025ರ ವರೆಗಿನ ಅವಧಿಗೆ ಕೇಂದ್ರೀಯ ತೆರಿಗೆಯಲ್ಲಿ ರಾಜ್ಯಗಳ ಪಾಲು ನಿಗದಿಪಡಿಸುವ ಮಾನದಂಡ ಬದಲಾವಣೆಗೆ ಕ್ರಮ ಕೈಗೊಳ್ಳುವಂತೆಯೂ ಪ್ರಸ್ತಾಪಿಸಲು ಚಿಂತನೆ ನಡೆದಿದೆ ಎಂದು ಸರಕಾರದ ಮೂಲಗಳು ಹೇಳಿವೆ.

ವರವಾಗುವ ಬದಲು ಶಾಪ!
ಕೇಂದ್ರೀಯ ತೆರಿಗೆಯಲ್ಲಿ ರಾಜ್ಯಗಳಿಗೆ ಪಾಲಿನ ಮೊತ್ತ ನಿಗದಿಗೆ ಹಲವು ಮಾನದಂಡ ಅನುಸರಿಸಲಾಗುತ್ತದೆ. ತಲಾದಾಯ, ಜನಸಂಖ್ಯೆ, ಅರಣ್ಯ ಪ್ರದೇಶ ವಿಸ್ತೀರ್ಣ ಇತ್ಯಾದಿ ಅಂಶಗಳು ಪ್ರಮುಖ. ತಲಾದಾಯ ಹೆಚ್ಚಿರುವ ರಾಜ್ಯಗಳಿಗೆ ಕಡಿಮೆ, ಕಡಿಮೆ ಇರುವ ರಾಜ್ಯಗಳಿಗೆ ಹೆಚ್ಚಿನ ಪಾಲು ನಿಗದಿಯಾಗುತ್ತದೆ. ಹಾಗೆಯೇ ಜನಸಂಖ್ಯೆ ಹೆಚ್ಚು ಇರುವ ರಾಜ್ಯಗಳಿಗೆ ಪಾಲಿನ ಮೊತ್ತವೂ ಅಧಿಕ. ಹಾಗಾಗಿ ಉತ್ತಮ ತಲಾದಾಯ ಮತ್ತು ಜನಸಂಖ್ಯೆ ನಿಯಂತ್ರಣವೂ ಆಶಾದಾಯಕವಾಗಿರುವುದು ಕರ್ನಾಟಕಕ್ಕೆ ಈ ವಿಚಾರದಲ್ಲಿ ಶಾಪವಾಗಿ ಪರಿಣಮಿಸಿದೆ. ರಾಜ್ಯಗಳು ಪಡೆಯುವ ಪಾಲಿನ ಮೊತ್ತವನ್ನು ಸರಿದೂಗಿಸಲು ಕರ್ನಾಟಕ ಸೇರಿದಂತೆ ತೆಲಂಗಾಣ, ಮಿಜೋರಾಂ ರಾಜ್ಯಗಳಿಗೆ ವಿಶೇಷ ಅನುದಾನ ನೀಡುವಂತೆ ಆಯೋಗ ಶಿಫಾರಸು ಮಾಡಿತ್ತು.

ಟಾಪ್ ನ್ಯೂಸ್

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

1-aaa-gggg–rp

Border-Gavaskar Trophy ಆರಂಭಕ್ಕೆ ಮುನ್ನ ಗಂಭೀರ್- ರಿಕಿ ಪಾಂಟಿಂಗ್ ವಾಗ್ಯುದ್ಧ

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

1-qewqe

Ayodhya; ಖಲಿಸ್ಥಾನ್ ನಾಯಕನಿಂದ ಬೆದರಿಕೆ: ರಾಮ ಮಂದಿರದ ಭದ್ರತೆ ಇನ್ನಷ್ಟು ಹೆಚ್ಚಳ

Pakshikere-1

Kinnigoli: ಶೌಚಾಲಯದ ಕಮೋಡ್‌ನ‌ಲ್ಲಿ ಮೊಬೈಲ್‌ ಪತ್ತೆ!, ಅಡವಿಟ್ಟ ಚಿನ್ನಾಭರಣ ಎಲ್ಲಿ ಹೋಯಿತು?

Mangaluru-VV

Mangalore University: ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಹೊರೆ!

Loka-raid

Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Loka-raid

Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!

BJP-JDS-congress-Party

Vote: ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ

Chalavadi-Ashok

Controversy: ಅಂಬೇಡ್ಕರ್‌ ಇಸ್ಲಾಂ ಸ್ವೀಕಾರ ವಿಚಾರ: ಖಾದ್ರಿ ಹೇಳಿಕೆಗೆ ಬಿಜೆಪಿ ಆಕ್ರೋಶ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

Karnataka: ಮೀಸಲು ಪ್ರಸ್ತಾಪ ಇಲ್ಲ: ರಾಜ್ಯ ಸರ್ಕಾರ

Karnataka: ಮೀಸಲು ಪ್ರಸ್ತಾಪ ಇಲ್ಲ: ರಾಜ್ಯ ಸರ್ಕಾರ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

1-vitla

Vitla: ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಕಾರಿನ ಬ್ರೇಕ್ ಫೇಲ್ ಆಗಿ ಪಲ್ಟಿ

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

Bengaluru: ರಸ್ತೆಯಲ್ಲೇ ಜಗಳಕ್ಕಿಳಿದಿದ್ದ ಇಬ್ಬರು ಬಸ್‌ಗೆ ಬಲಿ!

Bengaluru: ರಸ್ತೆಯಲ್ಲೇ ಜಗಳಕ್ಕಿಳಿದಿದ್ದ ಇಬ್ಬರು ಬಸ್‌ಗೆ ಬಲಿ!

1-aaa-gggg–rp

Border-Gavaskar Trophy ಆರಂಭಕ್ಕೆ ಮುನ್ನ ಗಂಭೀರ್- ರಿಕಿ ಪಾಂಟಿಂಗ್ ವಾಗ್ಯುದ್ಧ

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.