ಗ್ರಾಮೀಣಾಭಿವೃದ್ಧಿ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆ: ಸಚಿವ ಈಶ್ವರಪ್ಪ
Team Udayavani, Jan 30, 2021, 6:00 AM IST
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಡಿ ಸಿಬಂದಿ ನೇಮಕ ವೇಳೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿಶ್ವವಿದ್ಯಾ ನಿಲಯದ ವಿವಿಧ ಕೋರ್ಸ್‌ಗಳಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆ ನೀಡುವ ಚಿಂತನೆ ಸರಕಾರದ ಮುಂದಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಶುಕ್ರವಾರ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಎಸ್.ವಿ. ಸಂಕನೂರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿವಿಯಲ್ಲಿ ಪದವಿ ಪೂರೈಸಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡುವ ಸಂಬಂಧ ಉನ್ನತ ಮಟ್ಟದ ಅಧಿಕಾರಿಗಳ ಸಮಿತಿ ರಚಿಸಲಾಗಿದೆ. ಅದು ವರದಿ ಸಲ್ಲಿಸಿದ ಅನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ವಿವಿ ಆರಂಭಗೊಂಡು ಈಗಷ್ಟೇ ಮೂರು ವರ್ಷಗಳು ಕಳೆದಿದ್ದು, ಹತ್ತು ವಿವಿಧ ಕೋರ್ಸ್‌ಗಳು ಇಲ್ಲಿವೆ. ಪ್ರಸ್ತುತ ಒಟ್ಟಾರೆ 377 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 53 ಬೋಧಕ ಮತ್ತು 100 ಬೋಧಕೇತರ ಸಿಬಂದಿ ಇದ್ದಾರೆ. ಬಹುತೇಕ ಎಲ್ಲರೂ ಹೊರಗುತ್ತಿಗೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸರಕಾರದ ಆರ್ಥಿಕ ಪರಿಸ್ಥಿತಿ ಸುಧಾರಣೆಯಾದ ಅನಂತರ ಖಾಯಂ ನೌಕರರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.