ವೈದ್ಯ ಪರೀಕ್ಷೆ ಶೀಘ್ರ ನಡೆಸಿ: ಕೇಂದ್ರಕ್ಕೆ ಐಎಂಎ ಆಗ್ರಹ
Team Udayavani, Apr 20, 2021, 7:10 AM IST
ಹೊಸದಿಲ್ಲಿ: ಪ್ರಸ್ತುತ ಉದ್ಭವಿಸಿರುವ ಕೊರೊನಾ ಬಿಕ್ಕಟ್ಟನ್ನು ನಿಭಾಯಿಸುವುದಕ್ಕಾಗಿ ವೈದ್ಯ ಸಂಪನ್ಮೂಲವನ್ನು ಬಲಪಡಿಸಲು ಎಂಬಿಬಿಎಸ್, ನೀಟ್ ಪಿಜಿ ಮತ್ತು ವಿದೇಶೀ ಮೆಡಿಕಲ್ ಗ್ರಾಜ್ಯುಯೇಟ್ ಪರೀಕ್ಷೆ (ಎಫ್ಎಂಜಿಇ) ಪ್ರಕ್ರಿಯೆಗಳ ವೇಗ ಹೆಚ್ಚಿಸುವಂತೆ ಅಖೀಲ ಭಾರತ ವೈದ್ಯರ ಸಂಘಟನೆ (ಐಎಂಎ) ಸರಕಾರವನ್ನು ಒತ್ತಾಯಿಸಿದೆ. ಸ್ನಾತಕೋತ್ತರ ಪದವೀಧರ ಮತ್ತು ಕಿರಿಯ ವೈದ್ಯರ ಸಂಖ್ಯೆ ಹೆಚ್ಚಿಸುವುದಕ್ಕಾಗಿ ಈ ಕ್ರಮ ಕೈಗೊಳ್ಳಬೇಕು ಎಂದು ಐಎಂಎಯ ಮಹಾ ಕಾರ್ಯದರ್ಶಿ ಜಯೇಶ್ ಎಂ. ಲೇಲೆ ಹೇಳಿದ್ದಾರೆ.
ದೇಶದಲ್ಲಿ ಪ್ರಸ್ತುತ ಈ ವರ್ಷದ ನೀಟ್ ಪಿಜಿ ಬರೆಯಲು 1,74,886 ಅಭ್ಯರ್ಥಿಗಳು ನೋಂದಾಯಿಸಿ ಕೊಂಡಿದ್ದಾರೆ. ಪರೀಕ್ಷೆ ಮುಗಿದೊಡನೆ ಇವರಲ್ಲಿ ಸ್ನಾತಕೋತ್ತರ ಪದವಿಗೆ ಆಯ್ಕೆಯಾಗದವರು ವಿವಿಧ ಆಸ್ಪತ್ರೆಗಳಲ್ಲಿ ಜೂನಿಯರ್ ರೆಸಿಡೆಂಟ್‌ಗಳಾಗಿ ಸೇರಿಕೊಳ್ಳುತ್ತಾರೆ. ಆದರೆ ಪ್ರಸ್ತುತ ನೀಟ್ ಪಿಜಿ ಮುಂದೂಡಿಕೆ ಯಾಗಿರುವುದರಿಂದ ಇವರು ಪರೀಕ್ಷಾ ಸಿದ್ಧತೆಯಲ್ಲೇ ಮುಳುಗಿದ್ದು, ಆಸ್ಪತ್ರೆಯಲ್ಲಿ ಸೇವೆ ಒದಗಿಸುವ ಸಾಧ್ಯತೆ ಇಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pune: ಪಿಜ್ಜಾ ಆರ್ಡರ್ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು
Kerala: ದೇಗುಲ ಸಂಪ್ರದಾಯ ಬದಲು ಹಕ್ಕು ತಂತ್ರಿಗಳದ್ದು, ಸರ್ಕಾರದಲ್ಲ: ಕೇರಳ ಸಚಿವ
Abujhmad: ಗುಂಡಿನ ಕಾಳಗದಲ್ಲಿ ನಾಲ್ವರು ನಕ್ಸಲೀಯರ ಹತ್ಯೆ; ಓರ್ವ ಪೊಲೀಸ್ ಹುತಾತ್ಮ
UP: ವಿವಾಹದ ಮಧ್ಯೆ ಬಾತ್‌ರೂಮ್ ಹೋಗಿ ಬರುವುದಾಗಿ ಹೇಳಿ ಚಿನ್ನ – ನಗದು ಜತೆ ವಧು ಪರಾರಿ
ISRO: ಅಂತರಿಕ್ಷದಲ್ಲಿ ಅಲಸಂದೆ ಬೀಜ ಮೊಳಕೆ: ಇಸ್ರೋ ಪ್ರಯೋಗಕ್ಕೆ ಯಶಸ್ಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.