ರಮೇಶ್ ಜಾರಕಿಹೊಳಿ, ಆರ್. ಶಂಕರ್ ಮತ್ತು ಮಹೇಶ್ ಕುಮಟಳ್ಳಿ ಶಾಸಕತ್ವ ಅನರ್ಹ
ಅತಂತ್ರಗೊಂಡ ಮೂವರು ಅತೃಪ್ತ ಶಾಸಕರ ರಾಜಕೀಯ ಭವಿಷ್ಯ ; ಶೀಘ್ರದಲ್ಲೇ ಉಳಿದ ಅತೃಪ್ತ ಶಾಸಕರ ರಾಜೀನಾಮೆ ಅರ್ಜಿ ತೀರ್ಮಾನ
Team Udayavani, Jul 25, 2019, 7:59 PM IST
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ನಿರ್ಧಾರವನ್ನು ಪ್ರಕಟಿಸಲು ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರು ಇಂದು ಸಂಜೆ ತಮ್ಮ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಕರೆದಿದ್ದರು.
ತಮ್ಮ ಇಂದಿನ ಪತ್ರಿಕಾಗೋಷ್ಠಿಯಲ್ಲಿ ಮೂವರು ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣವನ್ನು ವಿಧಾನಸಭಾಧ್ಯಕ್ಷರು ಇತ್ಯರ್ಥಗೊಳಿಸಿರುವುದಾಗಿ ತಿಳಿಸಿದರು. ಆ ಮೂಲಕ ಕಾಂಗ್ರೆಸ್ ಪಕ್ಷದ ಅತೃಪ್ತ ಶಾಸಕರಾಗಿರುವ ಆರ್. ಶಂಕರ್, ರಮೇಶ್ ಜಾರಕಿಹೊಳಿ ಮತ್ತು ಮಹೆಶ್ ಕುಮಟಳ್ಳಿ ಅವರ ಶಾಸಕತ್ವವನ್ನು ಅನರ್ಹಗೊಳಿಸಿ ಸ್ಪೀಕರ್ ರಮೇಶ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಈ ಅನರ್ಹತೆ 15ನೇ ವಿಧಾನಸಭೆ ಅಸ್ತಿತ್ವದಲ್ಲಿ ಇರುವವರೆಗೆ ಈ ಅನರ್ಹತೆ ಊರ್ಜಿತದಲ್ಲಿರಲಿದೆ ಎಂಬುದನ್ನೂ ಸ್ಪೀಕರ್ ಅವರು ಸ್ಪಷ್ಟಪಡಿಸಿದ್ದಾರೆ.
ಸ್ಪೀಕರ್ ಇಂದು ನೀಡಿರುವ ಮೂವರು ಶಾಸಕರ ಅನರ್ಹತೆಯ ತೀರ್ಪನ್ನು ಅನರ್ಹಗೊಂಡಿರುವ ಶಾಸಕರು ನ್ಯಾಯಾಲಯದಲ್ಲಿ ಪ್ರಶ್ನಿಸಲು ಸ್ವತಂತ್ರರು ಎಂದೂ ಸ್ಪೀಕರ್ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
15ನೇ ವಿಧಾನಸಭೆಯ ಅವಧಿ ಮುಕ್ತಾಯಗೊಳ್ಳುವವರೆಗೆ ಈ ಮೂವರು ಶಾಸಕರ ಅನರ್ಹತೆ ಊರ್ಜಿತದಲ್ಲಿರಲಿದೆ. ಇದರನ್ವಯ ಈ ಮೂವರು ಶಾಸಕರು ಉಪಚುನಾವಣೆಗಳಲ್ಲಿ ಸ್ಪರ್ಧಿಸುವಂತಿಲ್ಲ. ಹಾಗೂ ಯಾವುದೇ ರೀತಿಯ ಲಾಭದಾಯಕ ರಾಜಕೀಯ ಹುದ್ದೆಗಳನ್ನು ಹೊಂದುವಂತಿಲ್ಲ.
ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು:
– ರಾಜೀನಾಮೆಯನ್ನು ಸಲ್ಲಿಸಿರುವ ಇನ್ನುಳಿದ ಅತೃಪ್ತ ಶಾಸಕರ ರಾಜೀನಾಮೆ ವಿಚಾರವನ್ನು ಕೆಲವೇ ದಿನಗಳಲ್ಲಿ ನಿರ್ಧರಿಸಲಿದ್ದೇನೆ ಎಂದು ಹೆಳಿದ ಸ್ಪೀಕರ್ ರಮೇಶ್ ಕುಮಾರ್.
– ಗೋಕಾಕ್ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿ ಹೊಳಿ ಮತ್ತು ಅಥಣಿ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ್ ಕುಮಟಹಳ್ಳಿ ಅವರ ಶಾಸಕತ್ವವೂ ಅನರ್ಹಗೊಂಡಿದೆ.
– 3 ವರ್ಷ 10 ತಿಂಗಳ ಕಾಲ ಆರ್ ಶಂಕರ್ ಅನರ್ಹಗೊಂಡಿದ್ದಾರೆ. 2023 ಮೇ ತಿಂಗಳವರೆಗೆ ಶಂಕರ್ ಅವರ ಅನರ್ಹತೆ ಊರ್ಜಿತದಲ್ಲಿರುತ್ತದೆ.
– ಅನರ್ಹಗೊಂಡಿರುವ ಶಾಸಕರು ಸುಪ್ರೀಂಕೋರ್ಟ್ ನ ಮೊರೆ ಹೋಗಲು ಸ್ವತಂತ್ರರಿದ್ದಾರೆ.
– ರಾಜೀನಾಮೆ ನೀಡಿರುವ ಶಾಸಕರು ತಮ್ಮ ರಾಜೀನಾಮೆಯನ್ನು ವಾಪಾಸು ಪಡೆದುಕೊಂಡರೆ ಅವರ ಅನರ್ಹತೆಯ ವಿಚಾರದ ಕುರಿತು ಮಾತನಾಡಲು ಒಪ್ಪದ ಸ್ಪೀಕರ್.
– ಶಾಸಕರೊಬ್ಬರಿಗೆ ತಮ್ಮ ಪಕ್ಷದ ನಿರ್ಧಾರಗಳ ಕುರಿತಾಗಿ ಭಿನ್ನಾಭಿಪ್ರಾಯಗಳಿದ್ದಲ್ಲಿ ಅದನ್ನು ಪಕ್ಷದ ವೇದಿಕೆಯಲ್ಲಿಯೇ ಚರ್ಚಿಸಬೇಕು.
– ಇದು ಶರದ್ ಯಾದವ್ ಪ್ರಕರಣದಲ್ಲೇ ಸಾಬೀತಾಗಿದೆ. ಶರದ್ ಯಾದವ್ ಅವರು ಆರ್.ಜೆ.ಡಿ. ಪಕ್ಷದ ವೇದಿಕೆಯಲ್ಲಿ ಕಾಣಿಸಿಕೊಂಡ ಕಾರಣಕ್ಕಾಗಿ ಅವರ ಜೆಡಿಯು ಪಕ್ಷದಿಂದ ಉಚ್ಛಾಟನೆಗೊಳ್ಳುತ್ತಾರೆ.
– ಅತೃಪ್ತ ಶಾಸಕರು ಕರ್ನಾಟಕ ವಿಧಾನ ಸಭಾ ನಿಯಮಾವಳಿಗೆ ಅನುಗುಣವಾಗಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿರಲಿಲ್ಲ.
– ಬಳಿಕ ಅವರೆಲ್ಲಾ ವಿಶೇಷ ವಿಮಾನದಲ್ಲಿ ಮುಂಬಯಿಯಿಂದ ಆಗಮಿಸಿ ನನ್ನ ಎದುರಿನಲ್ಲೇ ಸರಿಯಾದ ಮಾದರಿಯಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ಮರಳಿ ಸಲ್ಲಿಸಿದ್ದಾರೆ.
1. ಆರ್. ಶಂಕರ್ ಶಾಸಕತ್ವ ಅನರ್ಹ
ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದಿಂದ (KPJP) ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಆಗಿದ್ದ ಆರ್. ಶಂಕರ್. ಬಳಿಕ ಆರ್. ಶಂಕರ್ ಅವರು ತಮ್ಮ ಕೆ.ಪಿ.ಜೆ.ಪಿ. ಪಕ್ಷವನ್ನು ಕಾಂಗ್ರೆಸ್ ಪಕ್ಷವನ್ನು ವಿಲೀನಗೊಳಿಸಿದ್ದರು.
ಇದೀಗ ಅವರು ತಮ್ಮ ರಾಜೀನಾಮೆಯನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದರು. ಬಳಿಕ ಶಂಕರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದರು. ಅವರ ರಾಜೀನಾಮೆಯನ್ನು ಪರಿಶೀಲಿಸಿದ ಬಳಿಕ ಆರ್. ಶಂಕರ್ ಅವರ ಶಾಸಕತ್ವವನ್ನುಈಗ ಪಕ್ಷಾಂತರ ನಿಷೇಧ ಕಾಯ್ದೆಯ ಅಡಿಯಲ್ಲಿ ವಿಧಾನಸಭಾದ್ಯಕ್ಷರು ಅನರ್ಹಗೊಳಿಸಿದ್ದಾರೆ. 3 ವರ್ಷ 10 ತಿಂಗಳ ಕಾಲ ಆರ್ ಶಂಕರ್ ಅನರ್ಹಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.