ರಾಷ್ಟ್ರಾಧ್ಯಕ್ಷರ ಕಚೇರಿ ಗೇಟ್‌ಗಳು ಬಂದ್! ಶ್ರೀಲಂಕಾದಲ್ಲಿ ತಾರಕಕ್ಕೇರಿದ ಪ್ರತಿಭಟನೆ
ಅಧ್ಯಕ್ಷ ರಾಜಪಕ್ಸ ರಾಜೀನಾಮೆಗೆ ಆಗ್ರಹಿಸುತ್ತಿರುವ ಪ್ರತಿಭಟನಾಕಾರರು
Team Udayavani, Jun 21, 2022, 6:30 AM IST
ಕೊಲಂಬೊ: ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ತೀವ್ರ ಹೋರಾಟ 73 ದಿನಗಳನ್ನು ಪೂರೈಸಿದೆ. ರಾಷ್ಟ್ರಾಧ್ಯಕ್ಷರ ಕಚೇರಿಯ ಎಲ್ಲ ಗೇಟ್‌ಗಳನ್ನು ಬಂದ್ ಮಾಡಿರುವ ಪ್ರತಿಭಟನಾಕಾರರು ತಮ್ಮ ಪಟ್ಟನ್ನು ಇನ್ನಷ್ಟು ಬಿಗಿ ಮಾಡಿದ್ದಾರೆ. ಇದರ ಪರಿಣಾಮ ಪೊಲೀಸರು ಒಬ್ಬ ಬೌದ್ಧ ಭಿಕ್ಷು, ನಾಲ್ವರು ಮಹಿಳೆಯರು ಸೇರಿ ಒಟ್ಟು 21 ಮಂದಿಯನ್ನು ಬಂಧಿಸಿದ್ದಾರೆ.
ಧರಣಿನಿರತರು ಸತತವಾಗಿ ಪ್ರತಿಭಟನೆ ನಡೆಸುತ್ತಿರುವುದರಿಂದ ಸ್ಥಳಕ್ಕೆ ಗೋಟಗೋಗಾಮ ಎಂದೇ ಹೆಸರು ಬಂದಿದೆ. ಅಧ್ಯಕ್ಷರ ಕಚೇರಿಯ ಬಹುತೇಕ ಗೇಟ್‌ಗಳನ್ನು ಈ ಹಿಂದೆಯೇ ಬಂದ್ ಮಾಡಿದ್ದ ಪ್ರತಿಭಟನಾಕಾರರು, ಭಾನುವಾರ ರಾತ್ರಿ ಇನ್ನೆರಡು ಬಾಗಿಲುಗಳನ್ನೂ ಮುಚ್ಚಿದರು. ಶ್ರೀಲಂಕಾಕ್ಕೆ ಆರ್ಥಿಕ ನೆರವು ನೀಡುವ ಕುರಿತು ಚರ್ಚಿಸಲು ಐಎಂಎಫ್ ಅಧಿಕಾರಿಗಳು, ಇದೇ ಬಾಗಿಲುಗಳ ಮೂಲಕ ವಿತ್ತ ಸಚಿವಾಲಯದ ಕಚೇರಿಗೆ ಪ್ರವೇಶಿಸಬೇಕು. ಈ ಹಿನ್ನೆಲೆಯಲ್ಲಿ ಪೊಲೀಸರೂ ಬಿಗಿಯಾದ ಕ್ರಮ ತೆಗೆದುಕೊಂಡಿದ್ದಾರೆ.
ಐಎಂಎಫ್ ಸಭೆ: ಪ್ರತಿಭಟನೆಗಳ ನಡುವೆ ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಸೋಮವಾರ ಐಎಂಎಫ್(ಅಂತಾರಾಷ್ಟ್ರೀಯ ಹಣಕಾಸು ನಿಧಿ) ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಆರ್ಥಿಕತೆಯನ್ನು ಸುಸ್ಥಿತಿಗೆ ತರಲು ಐಎಂಎಫ್ನಿಂದ ಲಂಕಾ 6 ಬಿಲಿಯನ್ ಡಾಲರ್ ನೆರವು ಕೇಳಿದೆ.
ಸೇನಾಬಲವನ್ನು ವಿಪರೀತ ಬಳಸಬೇಡಿ: ಶ್ರೀಲಂಕಾದಲ್ಲಿ ಇಂಧನ, ಆಹಾರಧಾನ್ಯಗಳ ಕೊರತೆ ತೀವ್ರವಾಗಿದೆ. ಜನ ದೀರ್ಘ ಸರತಿ ಸಾಲಿನಲ್ಲಿ ನಿಂತು ಬೇಸತ್ತಿದ್ದಾರೆ. ಅವರನ್ನು ನಿಯಂತ್ರಿಸಲು ಎಲ್ಲ ಕಡೆ ಯೋಧರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಆಕ್ಷೇಪವೆತ್ತಿರುವ ಅಮೆರಿಕ ಮತ್ತು ವಿಶ್ವಸಂಸ್ಥೆ ಜನರ ವಿರುದ್ಧ ಅತಿಯಾಗಿ ಸೇನೆ ಬಳಸುವುದನ್ನು ಕಡಿಮೆ ಮಾಡಿ ಎಂದು ಆಗ್ರಹಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.