ಒಬ್ಬ ವಿದ್ಯಾಥಿ೯ಗೂ ಸೋಂಕು ತಗುಲದಂತೆ ಎಚ್ಚರವಹಿಸಿ : ಸಚಿವ ಸುಧಾಕರ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನಲೆಯಲ್ಲಿ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿ ಸೂಚನೆ

Team Udayavani, Jun 24, 2020, 6:29 PM IST

ಒಬ್ಬ ವಿದ್ಯಾಥಿ೯ಗೂ ಸೋಂಕು ತಗುಲದಂತೆ ಎಚ್ಚರವಹಿಸಿ : ಸಚಿವ ಸುಧಾಕರ್‌

ಬೆಂಗಳೂರು : ಒಬ್ಬ ವಿದ್ಯಾಥಿ೯ಗೂ ಕೋವಿಡ್ ಸೋಂಕು ತಗುಲದಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಎಚ್ಚರಿಕೆಯಿಂದ ನಡೆಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪರೀಕ್ಷೆ ನಡೆಸುವ ರಾಜ್ಯ ಸಕಾ೯ರದ ನಿಧಾ೯ರವನ್ನು ಇಡೀ ದೇಶವೇ ಎದುರು ನೋಡುತ್ತಿದೆ. ಹೀಗಾಗಿ ಇದನ್ನು ಸವಾಲಾಗಿ ಸ್ವೀಕರಿಸಿ ಜಾಗರೂಕತೆಯಿಂದ ಪರೀಕ್ಷೆಯನ್ನು ನಡೆಸಬೇಕು. ರಾಜ್ಯದ 2879 ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ಆರಂಭವಾಗುವ ಪರೀಕ್ಷೆಯಲ್ಲಿ 8,48,203 ವಿದ್ಯಾಥಿ೯ಗಳು ಪಾಲ್ಗೊಳ್ಳಲಿದ್ದಾರೆ. ಯಾವುದೇ ಗೊಂದಲಗಳಿಗೆ ಅವಕಾಶಗಳಿಲ್ಲದಂತೆ ಸಕಾ೯ರ ನೀಡಿರುವ ಸೂಚನೆಗಳನ್ನು ಜಾರಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಅವರು ತಿಳಿಸಿದರು.

ಕುಟುಂಬ ಸದಸ್ಯರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸ್ವಯಂ ಗೃಹಬಂಧನದಲ್ಲಿರುವ ಕೋವಿಡ್‌ – 19 ಉಸ್ತುವಾರಿ ನೋಡಿಕೊಳ್ಳುತ್ತಿರುವ ಸಚಿವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಕೈಗೊಂಡಿರುವ ಸಿದ್ಧತೆ,ಮುನ್ನೇಚ್ಚರಿಕೆ ಕ್ರಮಗಳ ಬಗ್ಗೆ ತಮ್ಮ ನಿವಾಸದಿಂದಲೇ ವಿಡಿಯೋ ಸಂವಾದ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಿದರು.

ಮನೆಯಿಂದ ಬರುವ ಪ್ರತಿಯೊಬ್ಬ ವಿದ್ಯಾಥಿ೯ ಪರೀಕ್ಷೆ ಬರೆದು ಮನೆಗೆ ಹಿಂತಿರುಗುವತನಕ ಕ್ಷೇಮವಾಗಿ ನೋಡಿಕೊಳ್ಳುವ ಜವಾಬ್ದಾರಿಯನ್ನು ಎಲ್ಲ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಸಮನ್ವಯದಿಂದ ಕಾಯ್ದುಕೊಳ್ಳಬೇಕು. ಸಾವ೯ಜನಿಕ ಸಾರಿಗೆ ಲಭ್ಯವಿಲ್ಲದ ಕಡೆ ಮಕ್ಕಳನ್ನು ಕರೆತರುವ ವಾಹನ, ಪರೀಕ್ಷಾ ಕೇಂದ್ರಗಳ ಬಳಿ, ಪರೀಕ್ಷಾ ಕೊಠಡಿ, ಶೌಚಾಲಯ ಇತ್ಯಾದಿ ಸ್ಥಳಗಳನ್ನು ಸ್ಯಾನಿಟೈಸ್‌ ಮಾಡಬೇಕು. ಪ್ರತಿ ವಿದ್ಯಾಥಿ೯ಗೆ ಮಾಸ್ಕ್‌ ನೀಡಿ ಪರೀಕ್ಷೆ ಬರೆಯುವ ಕೊಠಡಿಯಲ್ಲೂ ಅಂತರ ಇರುವಂತೆ ನೋಡಿಕೊಳ್ಳಬೇಕು ಎಂದರು.

ಬೆಳಗ್ಗೆ 7.30 ಕ್ಕೆ ಬರುವುದರಿಂದ ಪರೀಕ್ಷೆ ಬರೆದು ಹಿಂತಿರುಗುವತನಕ ಹಸಿವಿನಿಂದ ಬಳಲದಂತೆ ನೋಡಿಕೊಳ್ಳಲು ಪ್ರತಿ ಮಗುವಿಗೂ ಚಿಕ್ಕ ಬಿಸ್ಕೆಟ್‌ ಪ್ಯಾಕ್‌ ನೀಡಬೇಕು. ಇದಕ್ಕಾಗಿ ಜಿಲ್ಲಾಡಳಿತದಿಂದ ಹಣ ಭರಿಸುವಂತೆ ಸೂಚಿಸಿದರು. ಪ್ರತಿ ವಿದ್ಯಾಥಿ೯ಯನ್ನೂ ಥಮ೯ಲ್‌ ಸ್ಕ್ಯಾನಿಂಗ್‌ ಮೂಲಕ ಪರೀಕ್ಷೆ ನಡೆಸಿ ಒಳಬಿಡಬೇಕು. ಒಂದು ವೇಳೆ ಜ್ವರ ಸಹಿತ ಇತರೆ ಸೋಂಕುಗಳಿದ್ದಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲು ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದರು.

ಕ್ವಾರಂಟೈನ್‌ ಪ್ರದೇಶಗಳ ಮಕ್ಕಳಿಗೆ ಪ್ರತ್ಯೇಕ ಕೇಂದ್ರಗಳನ್ನು ಮೀಸಲಿಟ್ಟು ಒಂದು ವೇಳೆ ಅವರು ಪರೀಕ್ಷೆ ಬರೆಯಲು ಸಾಧ್ಯವಾಗದಿದ್ದಲ್ಲಿ ಆಗಸ್ಟ್‌ನಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂಬುದನ್ನು ಖಚಿತ ಪಡಿಸಿಕೊಂಡ ಸಚಿವರು, ಪೋಷಕರಿಗೆ ಆತಂಕಗಳಿಲ್ಲದಂತೆ ಜಿಲ್ಲಾಡಳಿತಗಳು ಮಾಧ್ಯಮಗಳ ಮೂಲಕ ಸಕಾ೯ರ ಕೈಗೊಂಡಿರುವ ಕ್ರಮಗಳ ಮಾಹಿತಿ ನೀಡಬೇಕು ಎಂದರು.

ಶಿಕ್ಷಣ ಇಲಾಖೆ ಇತರೆ ಇಲಾಖೆಗಳ ಸಮನ್ವಯದೊಂದಿಗೆ ಮಾಡಿಕೊಂಡಿರುವ ಸಿದ್ದತೆ, ವಿದ್ಯಾಥಿ೯, ಪರೀಕ್ಷಾ ಸಿಬ್ಬಂದಿ ಮತ್ತು ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲರಿಗೆ ನೀಡಿರುವ ಮಾಗ೯ಸೂಚಿಗಳ ಮಾಹಿತಿ ಪಡೆದ ಸಚಿವರು, ಎಲ್ಲವೂ ಯೋಜನಾಬದ್ಧವಾಗಿ, ವೈಜ್ಞಾನಿಕ ಆಲೋಚನೆ ಹಿನ್ನಲೆಯಲ್ಲಿ ತೀಮಾ೯ನಗಳನ್ನು ಕೈಗೊಳ್ಳಲಾಗಿದೆ. ಆದರೆ ಅವುಗಳನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಆ ಮೂಲಕ ರಾಜ್ಯ ಸಕಾ೯ರದ ನಿಧಾ೯ರದ ಜತೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ 458 ಕ್ವಾರಂಟೈನ್‌ ಪ್ರದೇಶಗಳಿವೆ. ಅಲ್ಲಿ ಪರೀಕ್ಷೆ ಬರೆಯುವ ಮಕ್ಕಳ ಬಗ್ಗೆ ಗರಿಷ್ಠ ಪ್ರಮಾಣದ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಒಂದು ವೇಳೆ ಆ ಮಕ್ಕಳಲ್ಲಿ ಯಾರಿಗಾದರೂ ಸೋಂಕಿನ ಸೂಚನೆ ಕಂಡು ಬಂದಲ್ಲಿ ತಕ್ಷಣವೇ ಪರೀಕ್ಷಾಕೇಂದ್ರದ ಬಳಿಯಿರುವ ಆರೋಗ್ಯ ಇಲಾಖೆ ಸಿಬ್ಬಂದಿ ಹತ್ತಿರದ ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಕರೆದೊಯ್ದು ಪರೀಕ್ಷೆ ನಡೆಸಬೇಕು. ಅದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶಿಕ್ಷಣ ಸಚಿವ ಸುರೇಶ್‌ ಕುಮಾರ್‌, ಹೆಚ್ಚುವರಿ ಮುಖ್ಯ ಕಾಯ೯ದಶಿ೯ ಜಾವೇದ್‌ ಅಖ್ತರ್‌, ಶಿಕ್ಷಣ ಇಲಾಖೆ ಕಾಯ೯ದಶಿ೯ ಉಮಾಶಂಕರ್‌, ವೈದ್ಯಕೀಯ ಶಿಕ್ಷಣ ಇಲಾಖೆ ಕಾಯ೯ದಶಿ೯ ಅನಿಲ್‌ಕುಮಾರ್‌, ಬಿಬಿಎಂಪಿ ಉಸ್ತುವಾರಿ ಮಂಜುನಾಥ್‌, ನಿದೇ೯ಶಕಿ ಸುಮಂಗಲ, ತಜ್ಞರಾದ ಡಾ. ಸುದಶ೯ನ್‌, ಡಾ. ಗಿರಿಬಾಬು ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.

ʼಪರೀಕ್ಷೆಗಳನ್ನು ಸಮಪ೯ಕವಾಗಿ ನಡೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪೋಷಕರು ಯಾವುದೇ ಆತಂಕಗಳಿಲ್ಲದೆ ಮಕ್ಕಳನ್ನು ಕಳುಹಿಸಿಕೊಡಿ. ಇಡೀ ದೇಶವೇ ಎದುರುನೋಡುತ್ತಿರವ ಈ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಅಧಿಕಾರಿ ಸಿಬ್ಬಂದಿಗಳು ಶ್ರಮಿಸುತ್ತಿದ್ದಾರೆ. ಒಬ್ಬ ವಿದ್ಯಾಥಿ೯ಗೂ ಸೋಂಕು ತಗುಲದಂತೆ ಜಾಗೃತೆವಹಿಸಲಾಗಿದೆʼ

– ಡಾ. ಕೆ. ಸುಧಾಕರ್‌, ವೈದ್ಯಕೀಯ ಶಿಕ್ಷಣ ಸಚಿವರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.