ಎಸೆಸೆಲ್ಸಿ ಪರೀಕ್ಷೆ ಮಾದರಿ; ಶೇ.98.06ರಷ್ಟು ವಿದ್ಯಾರ್ಥಿಗಳು ಹಾಜರು
Team Udayavani, Jul 4, 2020, 6:00 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ಕೋವಿಡ್ ಆತಂಕದ ನಡುವೆ ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮತ್ತು ಇದಕ್ಕೆ ಸುರಕ್ಷಿತವಾದ ವ್ಯವಸ್ಥೆ ನಿರ್ಮಿಸಿರುವ ರಾಜ್ಯ ಸರಕಾರ ದೇಶಕ್ಕೆ ಮಾದರಿಯಾಗಿದೆ.
ಪರೀಕ್ಷೆ ಶುಕ್ರವಾರ ಕೊನೆಯಾಗಿದ್ದು, ಸರಾಸರಿ ಶೇ.98.06ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಎಲ್ಲ ಸುರಕ್ಷಾ ಕ್ರಮಗಳನ್ನು ಅಚ್ಚು ಕಟ್ಟಾಗಿ ಪಾಲಿಸಿ ಪ್ರೇರಣೆ ಮತ್ತು ಸ್ಫೂರ್ತಿಯಾಗಿದ್ದಾರೆ.ಪರೀಕ್ಷಾ ಕೇಂದ್ರಗಳನ್ನು ಸುರಕ್ಷಾ ಕೇಂದ್ರವಾಗಿ ಬದಲಾಯಿಸಿ, ಸ್ವಲ್ಪವೂ ಲೋಪವಿಲ್ಲದಂತೆ ವ್ಯವಸ್ಥೆ ಮಾಡಿದ ಸರಕಾರ ಸಂಪೂರ್ಣ ಯಶಸ್ಸು ಸಾಧಿಸಿದೆ.
ಎಲ್ಲ ಇಲಾಖೆಗಳ ಸಮನ್ವಯದಿಂದ ಇದು ಸಾಕಾರವಾಗಿದೆ. ಪರೀಕ್ಷಾ ಕೇಂದ್ರ ದಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ಪತ್ತೆ ಯಾದರೂ ಪರೀಕ್ಷಾ ಕೇಂದ್ರದಿಂದ ಯಾರಿಗೂ ಸೋಂಕು ಹರಡಿಲ್ಲ. ನಿತ್ಯ ಸರಾಸರಿ 7.50 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಪರೀಕ್ಷೆಯ ಯಶಸ್ಸಿಗೆ ಸಹಕರಿಸಿ ಸಲಹೆ, ಸೂಚನೆ ನೀಡಿ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಯಡಿಯೂರಪ್ಪ, ಸಂಪುಟ ಸಹೋದ್ಯೋಗಿಗಳು, ಶಿಕ್ಷಣತಜ್ಞರು,ಜನ ಪ್ರತಿನಿಧಿಗಳು, ಅಧಿಕಾರಿಗಳು, ಪೊಲೀಸರು ಹಾಗೂ ಪೋಷಕರಿಗೆ ಸಚಿವ ಸುರೇಶ್ ಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ.
ಆಗಸ್ಟ್‌ನಲ್ಲಿ ಫಲಿತಾಂಶ
ಕೋವಿಡ್ ಸಂದಿಗ್ಧದ ನಡುವೆ ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಎಸೆಸೆಲ್ಸಿ ಪರೀಕ್ಷೆ ಯಶಸ್ವಿಯಾಗಿ ನಡೆ ದಿದ್ದು, ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ನೀಡಲಿದ್ದೇವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದರು.
ಕೋವಿಡ್ ಸಂದರ್ಭ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿರುವ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವನ್ನು ಹಾರೈಸು ತ್ತೇನೆ.ಯಶಸ್ವಿಯಾಗಿ ನಡೆಸಿದ ಸಂಪುಟ ಸಹೋದ್ಯೋಗಿ ಸುರೇಶ್ ಕುಮಾರ್ ಮತ್ತು ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆ ಸೇರಿ ದಂತೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು.
– ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.