ಕೋವಿಡ್-19 ಭೀತಿ: ಎಪ್ರಿಲ್ 20ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂದೂಡಿ ಆದೇಶ
Team Udayavani, Mar 26, 2020, 12:52 PM IST
ಬೆಂಗಳೂರು: ಕೋವಿಡ್-19 ಭೀತಿ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್ ಡೌನ್ ಆಗಿರುವುದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಹಿತವಾಗಿ ವಿವಿಧ ಶಾಲಾ ಹಂತದ ಪರೀಕ್ಷೆಯನ್ನು ಏಪ್ರಿಲ್ 20ರ ತನಕ ಮುಂದೂಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಕೋವಿಡ್-19 ವೈರಸ್ ಸೋಂಕು ತಡೆಗಟ್ಟುವಿಕೆಯ ಮುನ್ನೆಚ್ಚರಿಕೆ ಕ್ರಮವಾಗಿ ಈಗಾಗಲೇ 10ನೇ ತರಗತಿಯ ಪರೀಕ್ಷೆಗಳನ್ನು ಮಾ.31ರವರೆಗೆ ಮುಂದೂಡಲಾಗಿತ್ತು. ಆದರೆ ರಾಜ್ಯದಲ್ಲಿ ಕೋವಿಡ್-19 ಭೀತಿ ಹೆಚ್ಚುತ್ತಲೇ ಇರುವುದರಿಂದ ಹಾಗೂ ಏ.14ರವರೆಗೆ ಇಡೀ ದೇಶವೇ ಲಾಕ್ ಡೌನ್ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿರುವ ಹಿನ್ನೆಲೆಯಲ್ಲಿ ಏ.20ರವರೆಗೆ ಕೆಳಕಂಡ ಪರೀಕ್ಷೆ ಹಾಗೂ ಇನ್ನಿತರ ಕಾರ್ಯಚಟುವಟಿಕೆಗಳನ್ನು ಮುಂದೂಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
7ರಿಂದ 9ನೇ ತರಗತಿಯ ಪರೀಕ್ಷೆಗಳು, ಎಸ್ಸೆಸ್ಸೆಲ್ಸಿ ಪರೀಕ್ಷೆ, ಆರ್ ಟಿಇ ಅಡಿಯಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆ ಹಾಗೂ ಶಾಲೆಗಳಲ್ಲಿ 2020-21ನೇ ಸಾಲಿಗೆ ದಾಖಲಾತಿ ಪ್ರಕ್ರಿಯೆಯನ್ನು ಮುಂದೂಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಏಪ್ರಿಲ್ 20ರ ನಂತರ ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಈ ವಿಷಯವನ್ನು ವಿದ್ಯಾರ್ಥಿಗಳಿಗೆ ಮತ್ತು ಪಾಲಕ, ಪೋಷಕರಿಗೆ ವಾಟ್ಸಪ್, ಎಸ್ಎಂಎಸ್, ಇ-ಮೇಲ್ ಅಥವಾ ಇತರೆ ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ರವಾನಿಸಲು ಶಾಲಾ ಮುಖ್ಯ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಅವರಿಗೆ ನಿರ್ದೇಶನ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
MUST WATCH
ಹೊಸ ಸೇರ್ಪಡೆ
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Mangaluru: ವೆನ್ಲಾಕ್ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್
Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.