ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ತಾಲೂಕು ಮಟ್ಟದಲ್ಲೇ ಪ್ರಶ್ನೆ ಪತ್ರಿಕೆ
Team Udayavani, Feb 2, 2023, 6:45 AM IST
ಬೆಂಗಳೂರು: ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಈ ಬಾರಿ ತಾಲೂಕು ಮಟ್ಟದಲ್ಲಿ ತಯಾರಾಗಲಿದೆ. ಈವರೆಗೆ ರಾಜ್ಯ ಮಟ್ಟದಲ್ಲಿ ನಡೆಯುತ್ತಿದ್ದ ಪ್ರಶ್ನೆ ಪತ್ರಿಕೆ ತಯಾರಿಯ ಜವಾಬ್ದಾರಿಯನ್ನು 2022-23ರ ಸಾಲಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದೆ. ಈ ತಿಂಗಳು ಪರೀಕ್ಷೆ ನಡೆಯಲಿದ್ದು, ವೇಳಾಪಟ್ಟಿ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ.
ಪೂರ್ವ ಸಿದ್ಧತಾ ಪರೀಕ್ಷೆಯನ್ನು ಬಿಇಒಗಳ ಹಂತದಲ್ಲೇ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಅನುಮೋದನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿಯಿಂದ ಮಾದರಿ ಪ್ರಶ್ನೆ ಪತ್ರಿಕೆಯನ್ನು ರಾಜ್ಯದ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ಗೆ ಅಪ್‌ಲೋಡ್ ಮಾಡಲಾಗುವುದು. ಆ ಮಾದರಿ ಪ್ರಶ್ನೆ ಪತ್ರಿಕೆಯನ್ನು ಅನುಸರಿಸಿ ಬಿಇಒಗಳು ತಮ್ಮ ಹಂತದಲ್ಲಿಯೇ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ ಮುದ್ರಣ ಮಾಡಿ ತಾಲೂಕು ಹಂತದ ಸ್ಟ್ರಾಂಗ್ ರೂಂನಲ್ಲಿ ಗೌಪ್ಯವಾಗಿ ಮತ್ತು ಸುರಕ್ಷಿತವಾಗಿ ಇಡಬೇಕು. ಆಯಾ ವಿಷಯದ ಪರೀಕ್ಷಾ ದಿನದಂದು ಅವುಗಳನ್ನು ಬಿಗಿ ಭದ್ರತೆಯಲ್ಲಿ ಶಾಲೆಗಳಿಗೆ ವಿತರಣೆ ಮಾಡಬೇಕು. ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪರೀಕ್ಷೆ ನಡೆಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.
ಪರೀಕ್ಷಾ ಶುಲ್ಕವಾಗಿ ಪ್ರತಿ ವಿದ್ಯಾರ್ಥಿಗಳಿಂದ 60 ರೂ.ಗಳನ್ನು ಮಾತ್ರ ಸಂಗ್ರಹಿಸಲು ಸೂಚಿಸಿದೆ. ಈ ಶುಲ್ಕವನ್ನು ಶಾಲಾ ಮುಖ್ಯೋಪಾಧ್ಯಾಯರು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು. ಬಿಇಒಗಳು ಪರೀಕ್ಷಾ ಶುಲ್ಕ ಸ್ವೀಕರಿಸಿದ ಮತ್ತು ಪರೀಕ್ಷಾ ಖರ್ಚು ವೆಚ್ಚಗಳ ಕುರಿತು ಲೆಕ್ಕಪತ್ರ ನಿರ್ವಹಿಸಿ ತಪಾಸಣ ಸಮಯದಲ್ಲಿ ಹಾಜರುಪಡಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.