![rahul-gandhi](https://www.udayavani.com/wp-content/uploads/2025/02/rahul-gandhi-2-415x281.jpg)
![rahul-gandhi](https://www.udayavani.com/wp-content/uploads/2025/02/rahul-gandhi-2-415x281.jpg)
Team Udayavani, Jan 29, 2025, 11:36 PM IST
ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ರಾಜ್ಯದ ನಾಲ್ವರು ಮೃತಪಟ್ಟಿದ್ದು, ಹಿರಿಯ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ನೇತೃತ್ವದಲ್ಲಿ ಅಧಿಕಾರಿಗಳ ತಂಡವನ್ನು ಉತ್ತರ ಪ್ರದೇಶಕ್ಕೆ ಕಳುಹಿಸಲಾಗಿದೆ. ಅಲ್ಲದೆ ಈ ಬಗ್ಗೆ ರಾಜ್ಯದಿಂದ ಸಹಾಯವಾಣಿ (080-22340676) ಯನ್ನು ತೆರೆಯಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಬೆಳಗಾವಿ ತಾಲೂಕಿನ ನಾಲ್ವರು ಮೃತಪಟ್ಟಿರುವ ಸಾಧ್ಯತೆ ಇದೆ ಎಂಬ ಮಾಹಿತಿ ನಮಗೆ ಖಾಸಗಿ ಮೂಲಗಳಿಂದ ಲಭ್ಯವಾಗಿದ್ದು ಉತ್ತರಪ್ರದೇಶ ಸರಕಾರ ಇದುವರೆಗೆ ಯಾವುದೇ ಮಾಹಿತಿಯನ್ನು ನಮ್ಮ ಜತೆ ಹಂಚಿಕೊಂಡಿಲ್ಲ ಎಂದರು.
ರಾಜ್ಯದ ವಿಪತ್ತು ನಿರ್ವಹಣ ತಂಡ ಉತ್ತರ ಪ್ರದೇಶ ಸರಕಾರದ ಜತೆ ನಿರಂತರ ಸಂಪರ್ಕದಲ್ಲಿದೆ. ಆದರೆ, ಉತ್ತರಪ್ರದೇಶ ಸರಕಾರ ಪ್ರಯಾಗ್‌ರಾಜ್ ಕುಂಭಮೇಳ ದುರಂತದಲ್ಲಿ ರಾಜ್ಯದ ಎಷ್ಟು ಜನ ಮೃತಪಟ್ಟಿದ್ದಾರೆ? ಎಷ್ಟು ಜನ ಗಾಯಾಳುಗಳಾಗಿದ್ದಾರೆ ಎಂಬ ಕುರಿತು ಯಾವುದೇ ಮಾಹಿತಿ ನೀಡುತ್ತಿಲ್ಲ.
ಬೆಳಗಾವಿ ಜಿಲ್ಲಾಧಿಕಾರಿ ಸ್ವತಃ ಕುಂಭಮೇಳಕ್ಕೆ ತೆರಳಿದವರ ಕುಟುಂಬದವರನ್ನು ಸಂಪರ್ಕಿಸಿ 4 ಮಂದಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಮಾಹಿತಿ ಸಂಗ್ರಹಿಸಿದ್ದಾರೆ ಎಂದರು. ಬಿಜೆಪಿ ನಾಯಕರ ಸಹಾಯದಿಂದ ಬೆಳಗಾವಿ ಜಿಲ್ಲೆಯ 300ಕ್ಕಿಂತ ಹೆಚ್ಚು ಜನ ಕುಂಭಮೇಳಕ್ಕೆ ಪ್ರಯಾಣ ಮಾಡಿದ್ದಾರೆ ಎಂಬ ಮಾಹಿತಿ ಇದೆ.
ಮೃತಪಟ್ಟವರ ಕುಟುಂಬಕ್ಕೆ ಸಿಎಂ ಸಂತಾಪ
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿ ಜಿಲ್ಲೆಯ ನಾಲ್ವರು ಮೃತಪಟ್ಟಿರುವ ಸುದ್ದಿ ಕೇಳಿ ಬೇಸರವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಕುಂಭಮೇಳ ಕಾಲ್ತುಳಿತ ದುರಂತ ಸಂಬಂಧ ರಾಜ್ಯ ಸರ್ಕಾರ ಕನ್ನಡಿಗರ ನೆರವಿಗೆ ಧಾವಿಸಿದೆ.
ನಿಮ್ಮ ಕುಟುಂಬದವರು ಕುಂಭಮೇಳಕ್ಕೆ ತೆರಳಿದ್ದು, ಅವರು ನಿಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲವೇ?. ಹಾಗಾದ್ರೆ, ನಾವು ನಿಮಗಾಗಿಯೇ ಸಹಾಯವಾಣಿ ತೆರೆದಿದ್ದೇವೆ. ಸಹಾಯವಾಣಿ ಸಂಖ್ಯೆ 080-22340676 ಗೆ ಸಂಪರ್ಕ ಮಾಡಬಹುದು.
#kumbhmela2025prayagraj… pic.twitter.com/c18owTr6OV
— CM of Karnataka (@CMofKarnataka) January 29, 2025
Dharawad: ಜಲ ಜೀವನ್ ಮಿಷನ್ ಕಳಪೆ ಕಾಮಗಾರಿಗೆ ಗರಂ; ಕೆಟ್ಟ ಯೋಜನೆ ಎಂದ ವಿನಯ್ ಕುಲಕರ್ಣಿ
GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ
ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಆರ್.ಪಾಟೀಲ್‌ಗೆ ಹೊಸ ಹುದ್ದೆ!
ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ
Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ
You seem to have an Ad Blocker on.
To continue reading, please turn it off or whitelist Udayavani.