ಫೆಬ್ರವರಿ 17ರಂದು ಬಜೆಟ್ ಮಂಡನೆ ಸಾಧ್ಯತೆ; ಈ ಬಾರಿ ಹೆಚ್ಚುವರಿ ಆಯವ್ಯಯ ಮಂಡನೆ ಮಾಡಲು ಸಿ.ಎಂ. ಸಿದ್ದತೆ
Team Udayavani, Jan 4, 2023, 1:11 PM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 17ರಂದು ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡಿಸಲು ನಿರ್ಧರಿಸಿದ್ದು, ಜನಪ್ರಿಯ ಯೋಜನೆಗಳ ಘೋಷಣೆ ಸಾಧ್ಯತೆ ಇದೆ.
ಈ ತಿಂಗಳ 2ನೇ ವಾರದ ನಂತರ ಇಲಾಖಾವಾರು ಸಚಿವರು ಮತ್ತು ಅಧಿಕಾರಿಗಳ ಪ್ರಗತಿ ಪರಿಶೀಲನೆ ಆರಂಭವಾಗಲಿದೆ. ಜ.1ರಂದು ಹೊಸ ವರ್ಷದ ಶುಭಾಷಯ ಕೋರಲು ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಮತ್ತಿತರರಿಗೆ ಬಜೆಟ್ ಮಂಡನೆಯ ಪೂರ್ವ ಸಿದ್ದತೆಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆಂದು ತಿಳಿದು ಬಂದಿದೆ.
ಸಾಮಾನ್ಯವಾಗಿ ಪ್ರತಿ ವರ್ಷ ಜನವರಿ ತಿಂಗಳ 2ನೇ ವಾರದಲ್ಲಿ ಪ್ರಸಕ್ತ ವರ್ಷದ ಜಂಟಿ ಅಧಿವೇಶನ ನಂತರ ಬಜೆಟ್ ಮಂಡನೆಯಾಗುತ್ತಿತ್ತು. ಆದರೆ ಕಳೆದೆರಡು ವರ್ಷಗಳಿಂದ ಈ ಸಂಪ್ರದಾಯಕ್ಕೆ ತಿಲಾಂಜಲಿ ಹಾಡಿರುವ ಸರ್ಕಾರ ಜಂಟಿ ಅಧಿವೇಶನ ಮತ್ತು ಬಜೆಟ್ ಮಂಡನೆಯನ್ನು ಏಕಕಾಲದಲ್ಲಿ ನಡೆಸಲು ಮುಂದಾಗಿದೆ.
ಫೆ16ರಂದು ಗುರುವಾರ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬಳಿಕ ಸಿಎಂ ಬೊಮ್ಮಾಯಿ ಅವರು ಶುಕ್ರವಾರ ಬಜೆಟ್ ಮಂಡಿಸಿ ನಂತರ ಸೋಮವಾರದಿಂದ ಬಜೆಟ್ ಮೇಲೆ ಚರ್ಚೆ ಆರಂಭವಾಗಲಿದೆ.
ಆದಾಯ ಸಂಗ್ರಹ ಉತ್ತಮವಾಗಿರುವುದರಿಂದ ಚುನಾವಣಾ ಬಜೆಟ್ ಮಂಡನೆಗೆ ಹಾದಿ ಸುಗಮಗೊಳಿಸಿದೆ.
ಹೆಚ್ಚುವರಿ ಬಜೆಟ್ ಮಂಡನೆಗೆ ತಯಾರಿ: ಈ ಬಾರಿ ಸಿಎಂ ಬೊಮ್ಮಾಯಿ ಹೆಚ್ಚುವರಿ ಬಜೆಟ್ ಮಂಡನೆಗೆ ಸಜ್ಜಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೋವಿಡ್ ಲಾಕ್‍ಡೌನ್ ಹಿನ್ನೆಲೆ ಆದಾಯ ಕೊರತೆಯ ಬಜೆಟ್ ಮಂಡನೆಯಾಗಿತ್ತು. ಈ ಬಾರಿ ಹೆಚ್ಚುವರಿ ಆಯವ್ಯಯ ಮಂಡನೆ ಮಾಡಲು ಸಿಎಂ ಸಿದ್ಧತೆ ನಡೆಸಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.
ರಾಜ್ಯದ ಆರ್ಥಿಕತೆ ಚೇತರಿಕೆ ಕಂಡಿದ್ದು, ತೆರಿಗೆ ಮೂಲಗಳು ಗುರಿ ಮೀರಿ ಆದಾಯ ಸಂಗ್ರಹ ಮಾಡುತ್ತಿವೆ. 2022-23 ಸಾಲಿನ ಮೊದಲಾರ್ಧ ವರ್ಷದಲ್ಲಿ ರಾಜ್ಯದ ಬೊಕ್ಕಸಕ್ಕೆ 1 ಲಕ್ಷ ಕೋಟಿಗೂ ಅಧಿಕ ರಾಜಸ್ವ ಸ್ವೀಕೃತಿಯಾಗಿದೆ. ಇದರಲ್ಲಿ ಕೇಂದ್ರದ ಸಹಾಯಾನುದಾನ, ತೆರಿಗೆ ಪಾಲು ಸೇರಿದೆ. ಇತ್ತ ಜಿಎಸ್‍ಟಿ ಸಂಗ್ರಹ ನಿರೀಕ್ಷೆಗೂ ಮೀರಿ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹಿಸುವ ಎಲ್ಲ ಇಲಾಖೆಗಳು ಬಜೆಟ್ ಗುರಿ ಮೀರಿ ಆದಾಯ ಸಂಗ್ರಹಿಸುತ್ತಿರುವುದು ಸಿಎಂ ಬೊಮ್ಮಾಯಿ ಅವರನ್ನು ನಿರಾಳರನ್ನಾಗಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.