State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
ಇಲಾಖಾವಾರು ಹೊಸ ಕ್ರಮಗಳ ಪ್ರಾತ್ಯಕ್ಷಿಕೆಗೆ ನಿರ್ದೇಶನ, ಮಾರ್ಚ್ 2 ಅಥವಾ 3ನೇ ವಾರದಲ್ಲಿ ಬಜೆಟ್ ಮಂಡನೆ
Team Udayavani, Jan 7, 2025, 7:35 AM IST
ಬೆಂಗಳೂರು: ಮಾರ್ಚ್ ಎರಡು ಅಥವಾ ಮೂರನೇ ವಾರದಲ್ಲಿ 2025-26ನೇ ಸಾಲಿನ ಬಜೆಟ್ ಮಂಡನೆ ಮಾಡಲು ಉದ್ದೇಶಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರದಿಂದ ಪೂರ್ವಭಾವಿ ಸಭೆಗಳನ್ನು ನಡೆಸಲಿದ್ದಾರೆ.
ಹೊಸ ವರ್ಷದ ಮೊದಲ ದಿನ ತಮ್ಮನ್ನು ಭೇಟಿಯಾದ ಉನ್ನತಾಧಿಕಾರಿಗಳ ಜತೆಗೆ ಸಮಾಲೋಚನೆ ನಡೆಸಿದ್ದ ಅವರು ಮಾರ್ಚ್‌ನಲ್ಲಿ ಬಜೆಟ್ ಮಂಡನೆ ಸುಳಿವು ನೀಡಿದ್ದರು. ಅಲ್ಲದೆ ಜ. 2ರ ಗುರುವಾರವೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆಗಳೊಂದಿಗೆ ಸಭೆ ನಡೆಸಲು ಉದ್ದೇಶಿಸಿದ್ದರು. ಅದೇ ದಿನ ಸಂಪುಟ ಸಭೆಯೂ ಇದ್ದುದರಿಂದ ಇಲಾಖಾವಾರು ಸಭೆಗಳಿಗೆ ಚಾಲನೆ ನೀಡಲಾಗಿರಲಿಲ್ಲ.
ಇದೀಗ ಜ. 7ರ ಮಂಗಳವಾರ ಸರಣಿ ಸಭೆಗಳನ್ನು ಕರೆದಿರುವ ಸಿಎಂ, ಆಯಾ ಇಲಾಖೆಗೆ ಸಂಬಂಧಿಸಿದಂತೆ ಕಳೆದ ಎರಡು ವರ್ಷಗಳ ಆಯವ್ಯಯ ಕಂಡಿಕೆ, ಕೈಗೊಂಡ ಕ್ರಮ, ಆರ್ಥಿಕ ಮತ್ತು ಭೌತಿಕ ಪ್ರಗತಿ, ಇಲಾಖೆಯಿಂದ ಕೈಗೊಳ್ಳಬಹುದಾದ ಹೊಸ ಕ್ರಮಗಳ ಕುರಿತು ಪ್ರಾತ್ಯಕ್ಷಿಕೆ (ಪಿಪಿಟಿ) ಸಿದ್ಧಪಡಿಸಿಕೊಂಡು ಬರುವಂತೆ ನಿರ್ದೇಶನ ನೀಡಿದ್ದಾರೆ.
ತೆರಿಗೇಯತರ ಆದಾಯಕ್ಕೆ ಒತ್ತು
ಹಣಕಾಸು ಇಲಾಖೆಯೊಂದಿಗೆ ಈಗಾಗಲೇ ಮೂರು ಸುತ್ತಿನ ಸಭೆಗಳನ್ನು ನಡೆಸಿರುವ ಸಿದ್ದಾರಾಮಯ್ಯ ಇದುವರೆಗಿನ ಆರ್ಥಿಕ ಮತ್ತು ಭೌತಿಕ ಪ್ರಗತಿಯ ಪಕ್ಷಿನೋಟವನ್ನು ಪಡೆದುಕೊಂಡಿದ್ದಾರೆ. ತೆರಿಗೆ ಗುರಿ ಮತ್ತು ವಾಸ್ತವಿಕ ಸಂಗ್ರಹಣೆಯ ಮಾಹಿತಿಯನ್ನೂ ಕಲೆ ಹಾಕಿದ್ದಾರೆ. ಜಾರಿಯಲ್ಲಿರುವ 5 ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವುದರ ಜತೆಗೆ ಶಾಸಕರಿಗೆ ಪ್ರದೇಶಾಭಿವೃದ್ಧಿ ನಿಧಿ ಸೇರಿದಂತೆ ವಿವಿಧ ಅನುದಾನಗಳ ಹಂಚಿಕೆಯ ದಾರಿಗಳನ್ನು ಹುಡುಕಲಾರಂಭಿಸಿದ್ದಾರೆ. ಇದಕ್ಕಾಗಿ ತೆರಿಗೆಯೇತರ ಆದಾಯ ಮೂಲಗಳನ್ನು ಶೋಧಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.