ಸಿದ್ದುಗೆ ಗುದ್ದು: ಹೈ ತಂತ್ರ
ಹೈಕಮಾಂಡ್ ಅಂಗಳ ತಲುಪಿದ ರಾಜ್ಯ ಕಾಂಗ್ರೆಸ್ ನಾಯಕರ ಗುದ್ದಾಟ
Team Udayavani, Sep 29, 2019, 5:57 AM IST
ಸಿದ್ದು ಕೈತಪ್ಪೀತೆ ವಿಪಕ್ಷ ನಾಯಕ ಸ್ಥಾನ? ಕೆಪಿಸಿಸಿ ಅಧ್ಯಕ್ಷರ ಬದಲಿಗೂ ಚಿಂತನೆ
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಹೈಕಮಾಂಡ್ ಗರಂ ಆಗಿದ್ದು, ಸೋಮವಾರ ಅಥವಾ ದಸರಾ ಅನಂತರ ಕೆಪಿಸಿಸಿ ಅಧ್ಯಕ್ಷ, ವಿಪಕ್ಷ ನಾಯಕ ಸ್ಥಾನ ಸೇರಿ ಉನ್ನತ ಹುದ್ದೆಗಳಿಗೆ ಸಂಬಂಧಿಸಿದಂತೆ ಬದಲಾವಣೆಗಳಾಗುವ ಸಾಧ್ಯತೆಗಳಿವೆ
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಹಿರಿಯ ನಾಯಕರಾದ ಕೆ.ಎಚ್. ಮುನಿಯಪ್ಪ, ಬಿ.ಕೆ. ಹರಿಪ್ರಸಾದ್ ನಡುವಣ ಮಾತಿನ ಚಕಮಕಿ ಕುರಿತು ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಹೈಕಮಾಂಡ್‌ಗೆ ಮಾಹಿತಿ ನೀಡಿದ್ದು, ದಿಲ್ಲಿ ನಾಯಕರು ತೀವ್ರವಾಗಿ ಬೇಸರಗೊಂಡಿದ್ದಾರೆ.
ಮುಸುಕಿನ ಗುದ್ದಾಟದಿಂದ ಪಕ್ಷದ ಮೇಲೆ ಆಗಿರುವ ಪರಿಣಾಮದ ಬಗ್ಗೆಯೂ ತಲೆಕೆಡಿಸಿಕೊಂಡಿರುವ ಹೈಕಮಾಂಡ್, ಹೊಸ ವಿಪಕ್ಷ ನಾಯಕನ ನೇಮಕದ ಜತೆಗೆ ಕೆಪಿಸಿಸಿ ಹುದ್ದೆ ಗಳ ಬದಲಾವಣೆಗೂ ಚಿಂತನೆ ನಡೆಸಿದೆ. ಸಿದ್ದ ರಾಮಯ್ಯ ಅವರಿಗೆ ಪ್ರಮುಖ ಹುದ್ದೆ ತಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಜ್ಯ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬ ಭಾವನೆ, ರಾಜ್ಯ ನಾಯಕರ ನಡುವೆ ಭಿನ್ನಾ ಭಿಪ್ರಾಯ, ಮೂಲ -ವಲಸಿಗ ಎಂಬ ಗುಂಪು ಗಾರಿಕೆ, ಪಕ್ಷವನ್ನು ಹಿಡಿತಕ್ಕೆ ತೆಗೆದುಕೊಳ್ಳಲು ನಾಯಕರ ನಡುವೆ ಗುದ್ದಾಟ ಇರುವುದರಿಂದ ಹೈಕಮಾಂಡ್ ಮಧ್ಯಪ್ರವೇಶಕ್ಕೆ ತೀರ್ಮಾನಿಸಿದೆ. ಮುಂದಿನ ವಾರ ಅಥವಾ ವಿಧಾನಮಂಡಲ ಅಧಿವೇಶನಕ್ಕೆ ಮುನ್ನ ರಾಜ್ಯ ಕಾಂಗ್ರೆಸ್‌ನಲ್ಲಿ ಬದಲಾವಣೆ ಮಾಡುವ ಸಾಧ್ಯತೆಯಿದೆ.
ಈ ಮಧ್ಯೆ ಹಿರಿಯರು ಮತ್ತು ಅನರ್ಹಗೊಂಡ ಶಾಸಕರ ಮಾತುಗಳಿಂದ ದಿನೇಶ್ ಗುಂಡೂರಾವ್ ಕೂಡ ಬೇಸರಗೊಂಡಿದ್ದು, ತನಗೆ ಅಧ್ಯಕ್ಷಗಿರಿ ಉಸಾಬರಿ ಬೇಡ, ಯಾರಾದರೂ ವಹಿಸಿಕೊಂಡು ಮುನ್ನಡೆಸಲಿ ಎಂದು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್. ಮುನಿಯಪ್ಪ, ವೀರಪ್ಪ ಮೊಲಿ, ಬಿ.ಕೆ. ಹರಿಪ್ರಸಾದ್ ಸೂಚಿಸಿದವರಿಗೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಮೂಲ ಕಾಂಗ್ರೆಸಿಗರಿಗೆ ನಾಯಕತ್ವ ನೀಡ ಬೇಕು ಎಂಬ ಒಂದಂಶದ ಕಾರ್ಯಕ್ರಮದಡಿ ಸಿದ್ದರಾಮಯ್ಯ ಅವರನ್ನು ಬದಿಗೆ ಸರಿಸಲು ಹಿರಿಯರು ಒಂದಾಗಿದ್ದಾರೆ. ಸೋನಿಯಾ ಮತ್ತು ರಾಹುಲ್ ಮಧ್ಯಪ್ರವೇಶಕ್ಕೆ ಒತ್ತಾಯಿಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.
ಖರ್ಗೆ ಮತ್ತು ಹಿರಿಯ ನಾಯಕರು ಸಿದ್ದ ರಾಮಯ್ಯ, ದಿನೇಶ್ ಗುಂಡೂರಾವ್ ವರ್ತನೆ ಯಿಂದ ಬೇಸರಿಸಿ ಹೈಕಮಾಂಡ್‌ಗೆ ದೂರು ನೀಡಿದ್ದಾರೆ. ಪ್ರತಿಯಾಗಿ ಸಿದ್ದರಾಮಯ್ಯ, ದಿನೇಶ್ ಬಣದವರೂ ದೂರು ನೀಡಿದ್ದಾರೆ ಎನ್ನಲಾಗಿದೆ.
ಬದಲಾಯಿಸಿದರೆ ಕಷ್ಟ
ಉಪ ಚುನಾವಣೆಗೆ ದಿನಾಂಕ ಘೋಷಣೆ ಮಾಡಿರುವ ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರನ್ನು ಬಿಟ್ಟು ಬೇರೊಬ್ಬರನ್ನು ಶಾಸಕಾಂಗ ಪಕ್ಷದ ನಾಯಕ ಅಥವಾ ವಿಪಕ್ಷ ನಾಯಕನಾಗಿ ಮಾಡಿದರೂ ಕಷ್ಟ. ದಿನೇಶ್ ಗುಂಡೂರಾವ್ ಅವರನ್ನು ಬದ ಲಿಸಿದರೂ ಬೇರೆ ರೀತಿಯ ಸಂದೇಶ ರವಾನೆ ಯಾಗುತ್ತದೆ. ಸಿದ್ದರಾಮಯ್ಯ ಅವರನ್ನು ನಿರ್ಲಕ್ಷ್ಯ ಮಾಡಿದರೆ ಬೇರೆ ರೀತಿಯ ಪರಿಣಾಮ ಆಗಬಹುದು ಎಂಬುದು ಸಿದ್ದರಾಮಯ್ಯ ಬೆಂಬಲಿಗರ ವಾದ.
ಎಸ್. ಲಕ್ಷ್ಮೀನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.