ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ತಡೆ
Team Udayavani, May 5, 2020, 9:02 PM IST
ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮಾದರಿಯಲ್ಲಿಯೇ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ತಡೆ ಹಿಡಿದಿದೆ.
ಕೇಂದ್ರ ಸರ್ಕಾರ ಜುಲೈ 2021 ರ ವರೆಗೆ ತನ್ನ ನೌಕರರ ತುಟ್ಟಿ ಭತ್ಯೆಯನ್ನು ತಡೆ ಹಿಡಿದಿದ್ದು ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರವೂ ತನ್ನ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ನೌಕರರು, ಪಿಂಚಣಿದಾರರು, ಅನುದಾನಿತ ಸಂಸ್ಥೆಗಳು, ನಿಗಮ ಮಂಡಳಿಗಳ ನೌಕರರು, ಸರ್ಕಾರಿ ಸ್ವಾಮ್ಯದ ಸ್ವಾಯತ್ತ ಸಂಸ್ಥೆಗಳು, ಯುಜಿಸಿ, ಐಸಿಎಆರ್ , ಎಐಸಿಟಿಇ ಹಾಗೂ ಎನ್ ಜೆಪಿಸಿ ಗಳಿಗೂ ಈ ಆದೇಶ ಅನ್ವಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ನೌಕರರ ಗಳಿಕೆ ರಜೆಗೆ ಕತ್ತರಿ
ಸರ್ಕಾರಿ ನೌಕರರ ಗಳಿಕೆ ರಜೆಗೆ ಸರ್ಕಾರ ಕತ್ತರಿಹಾಕಿದೆ. ಸರ್ಕಾರಿ ನೌಕರರು ಗಳಿಕೆ ರಜೆಯನ್ನು ಸಂಬಳವಾಗಿ ಪರಿವರ್ತಿಸಲು ಇರುವ ಅವಕಾಶ ರದ್ದುಪಡಿಸಿದೆ.
ಕೋವಿಡ್ – 19ರ ಹಿನ್ನೆಲೆಯಲ್ಲಿ ಸರ್ಕಾರವು ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಹಿನ್ನೆಲೆಯಲ್ಲಿ 2020ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಬದಲಾಯಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ರದ್ದುಗೊಳಿಸಿ ಆದೇಶಿಸಿದೆ.
ಆದರೆ, ಜನವರಿ 2020 ರಿಂದ ಡಿಸೆಂಬರ್ 2020 ರಲ್ಲಿ ನಿವೃತ್ತಿ ಹೊಂದುವ ಎಲ್ಲಾ ಅರ್ಹ ನೌಕರರು, ಅಧಿಕಾರಿಗಳು ನಿವೃತ್ತಿ ಹೊಂದುವ ತಿಂಗಳಲ್ಲಿ ಗಳಿಕೆ ರಜೆ ನಗದೀಕರಣ ಪ್ರಯೋಜನ ಪಡೆಯಲು ಅರ್ಹರಾಗಿರುತ್ತಾರೆ . ಈ ಆದೇಶವು ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಸಂಸ್ಥೆಗಳ ನೌಕರರಿಗೂ ಅನ್ವಯಿಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ರಾಜೀನಾಮೆ ಕೊಟ್ಟು ವಜ್ರವೆಂದು ಸಾಬೀತುಪಡಿಸಲಿ: ಈಶ್ವರಪ್ಪ
Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.