ಸ್ಟೇಟ್‌ಬ್ಯಾಂಕ್‌ ಸರ್ವಿಸ್‌ ಬಸ್‌ ನಿಲ್ದಾಣ : 4.2 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿಗೆ ಯೋಜನೆ

Team Udayavani, Feb 26, 2022, 5:45 AM IST

ಸ್ಟೇಟ್‌ಬ್ಯಾಂಕ್‌ ಸರ್ವಿಸ್‌ ಬಸ್‌ ನಿಲ್ದಾಣ : 4.2 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿಗೆ ಯೋಜನೆ

ಸ್ಟೇಟ್‌ಬ್ಯಾಂಕ್‌: ನಗರದ ಪ್ರಮುಖ ಬಸ್‌ ನಿಲ್ದಾಣ ಗಳಲ್ಲೊಂದಾಗ ಸ್ಟೇಟ್‌ಬ್ಯಾಂಕ್‌ನ ಸರ್ವಿಸ್‌ ಬಸ್‌ ನಿಲ್ದಾಣ ಮತ್ತಷ್ಟು ವಿಸ್ತಾರಗೊಳ್ಳಲಿದೆ. ಹಲವು ವರ್ಷಗಳಿಂದ ದುರಸ್ತಿಗಾಗಿ ಕಾಯು ತ್ತಿರುವ ಬಸ್‌ ಸ್ಟ್ಯಾಂಡ್ ಅಭಿವೃದ್ಧಿಗೆ ಪಾಲಿಕೆ, ಸ್ಮಾರ್ಟ್‌ಸಿಟಿ, ಮುಡಾ ಮುಂದಾಗಿದ್ದು, ಸದ್ಯ ಸುಮಾರು 4.2 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿದೆ.

ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣ ಸಂಪರ್ಕಿತ ಸರ್ವಿಸ್‌ ರಸ್ತೆ ಸದ್ಯ ಇದ್ದು, ಅದನ್ನು ಕೆಡಹಿ ಆ ಪ್ರದೇಶಕ್ಕೂ ಬಸ್‌ ನಿಲ್ದಾಣ ವಿಸ್ತರಣೆಯಾಗಲಿದೆ. ಪೂರ್ಣ ಮಟ್ಟದ ಅಭಿವೃದ್ಧಿಗೆಂದು 15ನೇ ಹಣಕಾಸು ನಿಧಿಯಲ್ಲಿ 1 ಕೋಟಿ ರೂ., ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ 2.2 ಕೋಟಿ ರೂ. ಮತ್ತು ಮುಡಾದಿಂದ 1 ಕೋಟಿ ರೂ. ಭರಿಸಲು ಈಗಾಗಲೇ ನಿರ್ಧಾರ ಮಾಡಲಾಗಿದೆ. ಸದ್ಯದಲ್ಲಿಯೇ ಟೆಂಡರ್‌ ಪ್ರಕ್ರಿಯೆ ನಡೆಯಲಿದ್ದು, ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತದೆ.

ಇಲ್ಲಿನ ಬಸ್‌ ನಿಲ್ದಾಣದಲ್ಲಿ ಮೂಲ ಸೌಕರ್ಯ ವ್ಯವಸ್ಥೆಗಳು ಸಮರ್ಪಕವಾಗಿ ಲ್ಲದ ಕಾರಣ ದಿಂದ ಪ್ರಯಾಣಿಕರಿಗೆ ನಿತ್ಯ ಸಮಸ್ಯೆ ಆಗುತ್ತಿತ್ತು. ಈ ಬಗ್ಗೆ “ಸರ್ವಿಸ್‌ ಬಸ್‌ ನಿಲ್ದಾಣ; ಪ್ರಯಾಣಿಕರ ಬವಣೆ ಪರಿಹರಿಸಿ’ ಎಂಬ ಶೀರ್ಷಿಕೆಯಲ್ಲಿ “ಉದಯವಾಣಿ ಸುದಿನ’ ಕೆಲವು ಸಮಯದ ಹಿಂದೆ ವಿಶೇಷ ವರದಿಯನ್ನೂ ಪ್ರಕಟಿಸಿತ್ತು.

ಇದನ್ನೂ ಓದಿ : ರಷ್ಯಾ-ಉಕ್ರೇನ್ ನಡುವೆ ಯುದ್ಧ: ಮಾಹಿತಿ ಕಲೆ ಹಾಕಲು ಕಂಟ್ರೋಲ್ ರೂಂ ಸ್ಥಾಪನೆ

ಅವ್ಯವಸ್ಥೆಯ ಆಗರ ಬಸ್‌ ನಿಲ್ದಾಣ
ಸದ್ಯ ಬಸ್‌ನಿಲ್ದಾಣದ ಒಳಭಾಗದಲ್ಲಿ ರುವ ಛಾವಣಿ ಸಮರ್ಪಕ ನಿರ್ವಹಣೆ ಇಲ್ಲದೆ ತುಕ್ಕು ಹಿಡಿದಿದೆ. ಜತೆಗೆ ಬಸ್‌ಗಾಗಿ ಕಾಯುವ ಪ್ರಯಾಣಿಕರಿಗೆ ಕುಳಿತು ಕೊಳ್ಳಲು ಸೂಕ್ತ ವ್ಯವಸ್ಥೆಯಿಲ್ಲ. ಈ ಮಧ್ಯೆ ಇರುವ ಕೆಲವು ಆಸನದಲ್ಲಿ ಕೆಲವರು ಮಲಗಿರುವುದರಿಂದ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಅವಕಾಶವಿಲ್ಲ. ಇದರಿಂದ ವೃದ್ಧರು, ಮಕ್ಕಳು, ಮಹಿಳೆ ಯರ ಸಮಸ್ಯೆ ಹೇಳತೀರದಾಗಿದೆ. ದೂರದೂರಿನಿಂದ ಬರುವ ಬಹುತೇಕ ಪ್ರಯಾಣಿಕರು ಇದೇ ನಿಲ್ದಾಣವನ್ನು ಅವಲಂಬಿಸಿರುವ ಕಾರಣದಿಂದ ನಿತ್ಯ ಸಮಸ್ಯೆ ಪರಿಹಾರವಾಗದೆ ಪ್ರಯಾಣಿಕರಿಗೆ ತಲೆನೋವಾಗಿತ್ತು.

ಇದೀಗ ಅಭಿವೃದ್ಧಿಪಡಿಸಲು ನಿರ್ಧರಿ ಸಲಾಗಿದ್ದು, ಬಸ್‌ ನಿಲ್ದಾಣ ಪೂರ್ತಿ ಕಾಂಕ್ರೀಟ್‌ ಅಳವಡಿಸಲಾಗುತ್ತದೆ. ಬಸ್‌ಗಳು ತಂಗಲು ವ್ಯವಸ್ಥಿತ ಬಸ್‌ ಬೇ ಕಲ್ಪಿಸಲಾಗುತ್ತದೆ. ಈಗಾಗಲೇ ಶಿಥಿಲ ಗೊಂಡಿರುವ ಮೇಲ್ಛಾ ವಣಿಗಳನ್ನು ಬದಲಾಯಿಸಲಾಗುತ್ತದೆ. ಪ್ರಯಾಣಿಕರಿಗೆ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಸುಸಜ್ಜಿತ ಶೌಚಾಲಯ ವ್ಯವಸ್ಥೆ ಒಳಗೊಳ್ಳಲಿದೆ.

ಅಭಿವೃದ್ಧಿಗೆ ಆದ್ಯತೆ
ಸ್ಟೇಟ್‌ಬ್ಯಾಂಕ್‌ ಸರ್ವಿಸ್‌ ಬಸ್‌ ನಿಲ್ದಾಣದ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಸುಮಾರು 4.2 ಕೋಟಿ ರೂ. ವೆಚ್ಚದಲ್ಲಿ ಬಸ್‌ ನಿಲ್ದಾಣ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ನಿಲ್ದಾಣದಲ್ಲಿ ಮೇಲ್ಛಾವಣಿ ವ್ಯವಸ್ಥೆ, ಸುಸಜ್ಜಿತ ಶೌಚಾಲಯ, ಕುಳಿತುಕೊಳ್ಳಲು ಆಸನ ಸೇರಿದಂತೆ ಅಭಿವೃದ್ಧಿ ಕಾರ್ಯ ಸದ್ಯದಲ್ಲೇ ಆರಂಭಗೊಳ್ಳಲಿದೆ.
– ಪ್ರೇಮಾನಂದ ಶೆಟ್ಟಿ, ಮನಪಾ ಮೇಯರ್‌

ಟಾಪ್ ನ್ಯೂಸ್

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.