ಭಾರತೀಯ ವಿದ್ಯಾರ್ಥಿನಿಯರ ಅಪಹರಣ?
Team Udayavani, Mar 1, 2022, 7:30 AM IST
ಉಕ್ರೇನ್‌ನಿಂದ ಪೋಲೆಂಡ್, ರೊಮೇನಿಯಾ, ಹಂಗೇರಿ ಮುಂತಾದ ನೆರೆರಾಷ್ಟ್ರಗಳಿಗೆ ಕಾಲ್ನಡಿಗೆಯಲ್ಲಿ ಬರುತ್ತಿರುವ ಅನೇಕ ವಿದ್ಯಾರ್ಥಿನಿಯರನ್ನು ರಷ್ಯನ್ ಸೈನಿಕರು ಅಪಹರಿಸಿದ್ದಾರೆಂಬ ಸ್ಫೋಟಕ ಮಾಹಿತಿಯೊಂದನ್ನು ಉಕ್ರೇನ್‌ನಲ್ಲಿರುವ ಲಕ್ನೋ ಮೂಲದ ಗರ್ವಾಮಿಶ್ರ ಎಂಬ ವಿದ್ಯಾರ್ಥಿನಿಯೊಬ್ಬರು ತಮ್ಮ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.
ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಶೇರ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಹಾಗೂ ಇತರರು ಭಾರತೀಯ ವಿದ್ಯಾರ್ಥಿನಿಯರನ್ನು ರಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರಲ್ಲಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿನಿ ಹೇಳಿದ್ದೇನು?
“ನಾವು ಕೀವ್‌ನಲ್ಲಿ ಸಿಲುಕಿದ್ದೇವೆ. ನಮಗೆ ಯಾರಿಂದಲೂ ಸಹಾಯ ಸಿಗುತ್ತಿಲ್ಲ. ಇಲ್ಲಿನ ಸ್ಥಳೀಯರು ಕೀವ್‌ನಲ್ಲಿ ನಾವಿರುವ ಕಡೆ, ನಾವು ತಂಗಿರುವ ಕೋಣೆಯ ಬಾಗಿಲು ಒಡೆದು ಒಳಬರಲು ಪ್ರಯತ್ನಿಸುತ್ತಿದ್ದಾರೆ. ಹಾಗಾಗಿ, ನಮಗೆ ಯಾವ ಕ್ಷಣದಲ್ಲಿ ಏನಾಗುತ್ತೋ ಎಂಬ ಭೀತಿ ಆವರಿಸಿದೆ.
ಭಾರತೀಯ ದೂತಾವಾಸ ಕಚೇರಿಗೆ ಎಷ್ಟು ಬಾರಿ ಫೋನ್ ಮಾಡಿದರೂ, ಸ್ಪಂದನೆ ಸಿಕ್ಕಿಲ್ಲ. ನಮಗೆ ಸಹಾಯ ಸಿಗುವುದಿಲ್ಲ ಎಂದೆನಿಸತೊಡಗಿದೆ” ಎಂದು ಗಿಡ್ವಾ ತಿಳಿಸಿದ್ದಾರೆ. ಇದಲ್ಲದೆ, “ಬಂಕರ್‌ಗಳಿಂದ ಗಡಿಯ ಕಡೆಗೆ ತೆರಳುವ ಭಾರತೀಯ ವಿದ್ಯಾರ್ಥಿನಿಯರ ಸಮೂಹದ ಮೇಲೆ ರಷ್ಯಾದ ಸೈನಿಕರು, ಕೆಟ್ಟದಾಗಿ ವರ್ತಿಸಿದ್ದಾರೆ. ಇದನ್ನು ವಿರೋಧಿಸಿದ ವಿದ್ಯಾರ್ಥಿಗಳ ಮೇಲೆ ಫೈರಿಂಗ್ ಮಾಡಿ, ವಿದ್ಯಾರ್ಥಿನಿಯರನ್ನು ಅಪಹರಿಸಿದ್ದಾರೆಂದು ಹೇಳಲಾಗಿದೆ. ಆ ವಿದ್ಯಾರ್ಥಿನಿಯರು, ಫೈರಿಂಗ್‌ಗೆ ಒಳಗಾದ ವಿದ್ಯಾರ್ಥಿಗಳು ಎಲ್ಲಿ ಹೋದರು ಎಂಬ ಮಾಹಿತಿಯಿಲ್ಲ” ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.