ನವೀನ್‌ ಮೃತದೇಹ ವಾಪಸ್‌ ತರುವ ಬಗ್ಗೆ ಸದನದಲ್ಲಿ ಚರ್ಚೆ

Team Udayavani, Mar 15, 2022, 6:30 AM IST

ನವೀನ್‌ ಮೃತ ದೇಹ ವಾಪಸ್‌ ತರುವ ಬಗ್ಗೆ ಸದನದಲ್ಲಿ ಚರ್ಚೆ

ಬೆಂಗಳೂರು: ಉಕ್ರೇನ್‌ ಯುದ್ಧದಲ್ಲಿ ರಷ್ಯಾ ದಾಳಿಗೆ ಮೃತಪಟ್ಟಿರುವ ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್‌ ಮೃತದೇಹವನ್ನು ರಾಜ್ಯಕ್ಕೆ ತರುವ ಕುರಿತು ಕೇಂದ್ರ ಮತ್ತು ರಾಜ್ಯ ಸರಕಾರದ ಪ್ರಯತ್ನಗಳ ಬಗ್ಗೆ ಸದನದಲ್ಲಿ ವಿಷಯ ಪ್ರಸ್ತಾವವಾಗಿ, ಅದರ ವಿಚಾರವಾಗಿ ವಸ್ತುಸ್ಥಿತಿ ಮಾಹಿತಿ ಸದನದ ಗಮನಕ್ಕೆ ತರುವಂತೆ ಸಭಾಪತಿ ಬಸವರಾಜ ಹೊರಟ್ಟಿ ಸರಕಾರಕ್ಕೆ ಸೂಚನೆ ನೀಡಿದ್ದಾರೆ.

ದಿಲ್ಲಿ ಅಧಿಕಾರಿಗಳ ಜತೆ ಮಾತುಕತೆ ನಡೆಸಿ, ವಿವರಗಳನ್ನು ವಿಧಾನ ಪರಿಷತ್‌ಗೆ ತಿಳಿಸುವಂತೆ ಸೂಚನೆ ನೀಡಿದ್ದಾರೆ.

ಸೋಮವಾರ ಕಲಾಪ ಆರಂಭವಾಗುತ್ತಿದ್ದಂತೆ ಖುದ್ದು ಈ ವಿಷಯ ಪ್ರಸ್ತಾವ ಮಾಡಿದ ಸಭಾಪತಿ ಬಸವರಾಜ ಹೊರಟ್ಟಿ, ನಾನು ನವೀನ್‌ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ್ದೆ. ಅವರು ತುಂಬಾ ನೋವಿನಲ್ಲಿದ್ದಾರೆ. ಮಗನ ಮೃತದೇಹ ಬಂದಿಲ್ಲ. ಅಂತಿಮ ವಿಧಿ, ಅನಂತರದ ಕಾರ್ಯಕ್ರಮಗಳನ್ನು ಮಾಡಲು ಆಗುತ್ತಿಲ್ಲ ಎಂದು ಸಂಕಟ ತೋಡಿಕೊಂಡಿದ್ದಾರೆ. ಮೃತದೇಹ ವಾಪಸ್‌ ತರುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ.

ಆದ್ದರಿಂದ ಈ ಬಗ್ಗೆ ಏನಾಗಿದೆ ಎನ್ನುವ ಬಗ್ಗೆ ದಿಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಸದನಕ್ಕೆ ತಿಳಿಸುವಂತೆ ಹೊರಟ್ಟಿ ಸೂಚನೆ ನೀಡಿದರು.

ಸ್ಥಳೀಯರನ್ನು ಸಂಪರ್ಕಿಸಿ
ಮಧ್ಯಪ್ರವೇಶಿಸಿದ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌, ಉಕ್ರೇನ್‌ನಲ್ಲಿ ಸಿಲುಕಿದ ಭಾರತದ ಮತ್ತು ಕರ್ನಾಟಕದ ವಿದ್ಯಾರ್ಥಿಗಳು ತಾವಾಗಿಯೇ ಗಡಿ ಭಾಗಗಳಿಗೆ ಬಂದ ಮೇಲೆ ಅವರನ್ನು ಅಲ್ಲಿಂದ ಕರೆದುಕೊಂಡು ಬರಲಾಗುತ್ತಿದೆ. ಉಕ್ರೇನ್‌ ಒಳಗೆ ಯಾರೂ ಹೋಗಲು ಆಗುತ್ತಿಲ್ಲ. ಆದ್ದರಿಂದ, ಸ್ಥಳೀಯರನ್ನು ಸಂಪರ್ಕಿಸಿ ಮೃತದೇಹ ವಾಪಸ್‌ ತರಲು ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.

ಉಕ್ರೇನ್‌ನಲ್ಲಿದ್ದಾರೆ 22 ಸಾವಿರ ಭಾರತೀಯರು!
ಸರಕಾರದ ಪರ ಉತ್ತರಿಸಿದ ಆರೋಗ್ಯ ಸಚಿವ ಡಾ| ಸುಧಾಕರ್‌, ಯುದ್ಧ ಪ್ರದೇಶ ಹೇಗಿರುತ್ತದೆ ಎಂದು ನಮಗೆಲ್ಲರಿಗೂ ಗೊತ್ತಿದೆ. 22 ಸಾವಿರ ಭಾರತೀಯರು ಉಕ್ರೇನ್‌ನಲ್ಲಿದ್ದಾರೆ. ಒಬ್ಬ ಕನ್ನಡಿಗ ಮೃತಪಟ್ಟಿದ್ದಾರೆ. ಭಾರತೀಯರನ್ನು ಸುರಕ್ಷಿತವಾಗಿ ವಾಪಸ್‌ ಕರೆತರಲು ಪ್ರಧಾನಿ ಮೋದಿಯವರ ಮಾರ್ಗದರ್ಶನಲ್ಲಿ ಕೇಂದ್ರ ಸರಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಅದೇ ರೀತಿ ನವೀನ್‌ ಮೃತದೇಹ ವಾಪಸ್‌ ತರಲಾಗುವುದು. ಪ್ರಧಾನಿ ಮನವಿಯವಂತೆ ಕೆಲವು ಗಂಟೆ ಯುದ್ಧ ವಿರಾಮ ಘೋಷಿಸಿದ್ದರಿಂದ ಭಾರತೀಯರು ಸುರಕ್ಷಿವಾಗಿ ಅಲ್ಲಿಂದ ಹೊರಬರಲು ಸಾಧ್ಯವಾಯಿತು ಎಂದರು.

ಸರ್ವಪಕ್ಷದವರ ಸಾಥ್‌
ಕಾಂಗ್ರೆಸ್‌ ಸದಸ್ಯ ಸಲೀಂ ಅಹ್ಮದ್‌, ಬಿಜೆಪಿ ಸದಸ್ಯ ಪ್ರದೀಪ್‌ ಶೆಟ್ಟರ್‌, ಜೆಡಿಎಸ್‌ನ ಕೆ.ಟಿ. ಶ್ರೀಕಂಠೇಗೌಡ ಸೇರಿದಂತೆ ಅನೇಕ ಸದಸ್ಯರು ನವೀನ್‌ ಮೃತದೇಹ ವಾಪಸ್‌ ತರುವ ಬಗ್ಗೆ ಧ್ವನಿಗೂಡಿಸಿದರು. ದಿಲ್ಲಿ ಅಧಿಕಾರಿಗಳಿಂದ ವಿವರ ಪಡೆದು ಸದನಕ್ಕೆ ಮಾಹಿತಿ ನೀಡುವಂತೆ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಸೂಚಿಸಿದ ಸಭಾಪತಿಯವರು ಚರ್ಚೆಗೆ ತೆರೆ ಎಳೆದರು.

ಟಾಪ್ ನ್ಯೂಸ್

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

R Ashok (2)

BPL ಕಾರ್ಡ್‌ನಿಂದ ಎಪಿಎಲ್‌ಗೆ 6ನೇ ಗ್ಯಾರಂಟಿ: ಅಶೋಕ್‌ ಲೇವಡಿ

renukaacharya

Waq ಹೋರಾಟಕ್ಕೆ ವಿಜಯೇಂದ್ರ ತಂಡಗಳೇ ಅಧಿಕೃತ: ರೇಣುಕಾಚಾರ್ಯ

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.