Study Tour: ದಕ್ಷಿಣ ಕೊರಿಯಾ ಅಧ್ಯಯನ ಪ್ರವಾಸ: ಅಧಿಕಾರಿಗಳ ಭೇಟಿಯಾದ ಸ್ಪೀಕರ್
ಶಿಕ್ಷಣ, ವ್ಯಾಪಾರ, ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬಗ್ಗೆ ಯು.ಟಿ. ಖಾದರ್ ಚರ್ಚೆ
Team Udayavani, Oct 30, 2024, 12:22 AM IST
ಬೆಂಗಳೂರು: ದಕ್ಷಿಣ ಕೊರಿಯಾದ ಅಧ್ಯಯನ ಪ್ರವಾಸದಲ್ಲಿರುವ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ದಕ್ಷಿಣ ಕೊರಿಯಾದ ಸಿಯೋಲ್‌ನಲ್ಲಿ ಭಾರತದ ರಾಯಭಾರಿ, ಹಿರಿಯ ಭಾರತೀಯ ಆಡಳಿತ ಸೇವೆಯ ಅಧಿಕಾರಿ ಅಮಿತ್ ಕುಮಾರ್ ಅವರನ್ನು ಭೇಟಿಯಾಗಿ ಆ ದೇಶದ ಕರ್ನಾಟಕದಲ್ಲಿನ ಹೂಡಿಕೆ ನಿರೀಕ್ಷೆಗಳ ಕುರಿತು ವಿಚಾರ ವಿನಿಮಯ ಮಾಡಿಕೊಂಡರು.
ಭೇಟಿ ಸಂದರ್ಭದಲ್ಲಿ ಉಭಯ ದೇಶಗಳ ಸಂಬಂಧಗಳು, ಶಿಕ್ಷಣ, ವ್ಯಾಪಾರ, ಆರೋಗ್ಯ, ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಕುರಿತು ಅನೌಪಚಾರಿಕವಾಗಿ ಮಾತುಕತೆ ನಡೆಸಿದ ಯು.ಟಿ. ಖಾದರ್, ದಕ್ಷಿಣ ಕೊರಿಯಾದ, ಕರ್ನಾಟಕದಲ್ಲಿ ಹೂಡಿಕೆಯ ನಿರೀಕ್ಷೆಗಳು, ಅವಕಾಶಗಳ ಬಗ್ಗೆ ವಿಚಾರ ಚರ್ಚಿಸಿದರು.
ಇದೇ ವೇಳೆ, ಸಭಾಧ್ಯಕ್ಷ ರಾದ ಯು.ಟಿ. ಖಾದರ್, ಕರ್ನಾಟಕದ ವಿಶ್ವವಿದ್ಯಾನಿಲಯಗಳು ಕೊರಿಯಾದ ವಿಶ್ವವಿದ್ಯಾನಿಲಯಗಳೊಂ ದಿಗೆ ಕಾಲೇಜುಗಳಲ್ಲಿನ ವಿವಿಧ ಕೋರ್ಸ್‌ಗಳ ಮತ್ತು ಉದ್ಯೋಗಾವಕಾಶಗಳ ಕುರಿತು ಪರಸ್ಪರ ಒಪ್ಪಂದಗಳನ್ನು ಮಾಡಿಕೊಳ್ಳುವ ಬಗ್ಗೆ ಭಾರತದ ರಾಯ ಭಾರಿಗಳೊಂದಿಗೆ ಚರ್ಚಿಸಿದರು.
ಅಷ್ಟೇ ಅಲ್ಲ, ಉಭಯ ದೇಶಗಳ ಮೂಲಸೌಲಭ್ಯಗಳು, ಆರ್ಥಿಕತೆ ಕುರಿತಾಗಿ ಚರ್ಚಿಸಿ, ಈ ಭೇಟಿಯು ಫಲಪ್ರದವಾಗಿದ್ದು, ವಿಶೇಷವಾಗಿ ದಕ್ಷಿಣ ಕೊರಿಯಾ ಮತ್ತು ಕರ್ನಾಟಕದ ನಡುವಿನ ಸಂಬಂಧಗಳು ಇನ್ನು ಹೆಚ್ಚಿನ ರೀತಿ ಬೆಳೆಯಲಿ ಎಂದು ಆಶಯ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Guarantee: 1.25 ಕೋಟಿ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಪಾವತಿ
Government Encourge: ಜ.1ರಿಂದ ಕಲಾವಿದರ ಮಾಸಾಶನ 3 ಸಾವಿರ ರೂ. ಏರಿಕೆ: ಸಚಿವ
Waqf Property: ಭೂಗಳ್ಳರಿಗೆ ರಕ್ಷಣೆ ಕೊಟ್ಟರೆ ಬೆಲೆ ತೆರಬೇಕಾದೀತು: ಎಚ್.ಡಿ.ಕುಮಾರಸ್ವಾಮಿ
Shivamogga: ಆತಂಕ ತಂದಿದ್ದ ʼಚೀನಾ ಬೆಳ್ಳುಳ್ಳಿ’; ಸುರಕ್ಷಿತ ಎಂದ ಲ್ಯಾಬ್ ವರದಿ
MUDA Scam Case: 30 ತಾಸು ಇ.ಡಿ. ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
“ಟಾಪ್’ ಕ್ರೀಡಾಪಟುಗಳ ಸಂಖ್ಯೆಗೆ ಕೇಂದ್ರದಿಂದ ಕತ್ತರಿ?
Congress Guarantee: 1.25 ಕೋಟಿ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಪಾವತಿ
Madurai Bench: ಷರಿಯತ್ ಕೌನ್ಸಿಲ್ ಕೋರ್ಟ್ ಅಲ್ಲ: ಮದ್ರಾಸ್ ಹೈಕೋರ್ಟ್
Udupi: ಇಂದ್ರಾಳಿ ಮೇಲ್ಸೇತುವೆ: ಜ. 15 ರೊಳಗೆ ಮುಗಿಸಲು ಗಡುವು
Fake Call: ಹುಸಿ ಬಾಂಬ್ ಕರೆ ಹಿಂದೆ ಭಯೋತ್ಪಾದನೆ ಕುರಿತ ಪುಸ್ತಕ ಬರೆದವನ ಕೈವಾಡ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.