Subramanya: ಕುಕ್ಕೆಯಲ್ಲಿ ಸಂಭ್ರಮದ ಲಕ್ಷದೀಪೋತ್ಸವ: ಚಂದ್ರಮಂಡಲ ರಥದಲ್ಲಿ ಶ್ರೀ ದೇವರ ಉತ್ಸವ
ಮಹಾಪೂಜೆಯ ಬಳಿಕ ಶ್ರೀ ದೇವರ ಹೊರಾಂಗಣ ಉತ್ಸವ
Team Udayavani, Dec 1, 2024, 12:48 AM IST
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ರಾತ್ರಿ ಭಕ್ತಿ ಸಡಗರದ ಲಕ್ಷದೀಪೋತ್ಸವ ನೆರವೇರಿತು. ಚಂದ್ರಮಂಡಲ ರಥದಲ್ಲಿ ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಿತು.
ಅರ್ಚಕರು ಉತ್ಸವದ ವಿಧಿ ವಿಧಾನ ನೆರವೇರಿಸಿದರು. ರಥಬೀದಿಯಿಂದ ಕಾಶಿಕಟ್ಟೆ ತನಕ ಬೆಳಗಿದ ಲಕ್ಷ ಹಣತೆ ದೀಪದ ನಡುವೆ ಶ್ರೀ ದೇವರ ಉತ್ಸವ ನೆರವೇರಿತು. ದೀಪಾಲಂಕಾರಗಳ ನಡುವೆ ಭಕ್ತರ ಶ್ರೀ ದೇವರ ಲಕ್ಷದೀಪೋತ್ಸವ ರಥೋತ್ಸವವು ನೆರವೇರಿತು. ಈ ಮೂಲಕ ಶ್ರೀ ದೇವರ ರಥಬೀದಿ ಉತ್ಸವ ಆರಂಭವಾಯಿತು.
ದೇಗುಲದ ಗೋಪುರದಿಂದ ಕಾಶಿಕಟ್ಟೆ ತನಕ, ಅಭಯ ಆಂಜನೇಯ ಗುಡಿ, ಸವಾರಿ ಮಂಟಪ, ಆದಿಸುಬ್ರಹ್ಮಣ್ಯ, ಬೈಪಾಸ್ ರಸ್ತೆ, ಕಾಶಿಕಟ್ಟೆ ಸುತ್ತಲಿನ ಆವರಣ, ಗ್ರಾ.ಪಂ., ಪೊಲೀಸ್ ಠಾಣೆ, ಕಾಶಿಕಟ್ಟೆಯಿಂದ ಅಡ್ಡಬೀದಿ ವೃತ್ತದ ತನಕ ರಸ್ತೆಯ ಇಕ್ಕೆಲದಲ್ಲಿ ಸಾರ್ವಜನಿಕರು, ಸಂಘ ಸಂಸ್ಥೆಗಳ ಸಹಕಾರದಲ್ಲಿ ಕ್ಷೇತ್ರಾದ್ಯಂತ ಲಕ್ಷ ಹಣತೆ ದೀಪ ಬೆಳಗಿತು.
ಮಹಾಪೂಜೆಯ ಬಳಿಕ ಶ್ರೀ ದೇವರ ಹೊರಾಂಗಣ ಉತ್ಸವವು ಆರಂಭವಾಯಿತು. ಪ್ರಥಮವಾಗಿ ಕಾಚುಕುಜುಂಬ ದೈವವು ಶ್ರೀ ದೇವರನ್ನು ಭೇಟಿಯಾಗಿ ನುಡಿಗಟ್ಟು ನಡೆಯಿತು. ಅನಂತರ ಆಕರ್ಷಕ ಸಾಲುದೀಪಗಳ ನಡುವೆ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ಉತ್ಸವ ಮತ್ತು ಪಾಲಕಿ ಉತ್ಸವ ಮತ್ತು ವಿವಿಧ ಸಂಗೀತ ವಾದ್ಯಗಳ ಸುತ್ತುಗಳು ನೆರವೇರಿತು. ಅಂತಿಮವಾಗಿ ಶ್ರೀ ದೇವರು ರಥಬೀದಿ ಪ್ರವೇಶಿಸಿದರು.
ಚಂದ್ರಮಂಡಲ ರಥದಲ್ಲಿ ಆರೂಢರಾಗಿ ಪೂಜೆ ಸ್ವೀಕರಿಸಿದರು. ದೇಗುಲದ ಆಡಳಿತಾಧಿಕಾರಿ ಜುಬಿನ್ ಮೊಹಪಾತ್ರ, ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಯೇಸುರಾಜ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕಳ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Bellary; ಕರ್ನಾಟಕ- ಆಂಧ್ರ ಗಡಿಯಲ್ಲಿ ಭೀಕರ ಅಪಘಾತ: ವೈದ್ಯರು ಸೇರಿ ಮೂವರು ಸಾವು
Maharashtra; ಯಾರು ಮಹಾ ಸಿಎಂ? ಮಹತ್ವದ ಮಾಹಿತಿ ನೀಡಿದ ಅಜಿತ್ ಪವಾರ್
BBK11: ಅರ್ಧದಲ್ಲೇ ಕನ್ನಡ ಬಿಗ್ ಬಾಸ್ ಶೋ ಬಿಟ್ಟು ಬಂದ ಖ್ಯಾತ ಸ್ಪರ್ಧಿ! ವೀಕ್ಷಕರು ಶಾಕ್
Kasaragodu: ಲಂಡನ್ ಚಾರ್ಲ್ಸ್ ದೊರೆಗೆ ಕಾಸರಗೋಡು ಮೂಲದ ಮಹಿಳೆ ಸೆಕ್ರೆಟರಿ
Kerala: ಶಬರಿಮಲೆಯ ಮಾಳಿಗಪುರದಲ್ಲಿ ತೆಂಗಿನ ಕಾಯಿ ಒಡೆಯುವಂತಿಲ್ಲ: ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.