Sulya: ನಾಯಕತ್ವ ಸಮಸ್ಯೆ ಇರುವುದು ಬಿಜೆಪಿಯಲ್ಲಿ: ದಿನೇಶ್ ಗುಂಡೂರಾವ್
ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಸಮಸ್ಯೆ ಇಲ್ಲ: ಆರೋಗ್ಯ ಸಚಿವ
Team Udayavani, Oct 13, 2024, 2:19 AM IST
![Dinesh-gundurao](https://www.udayavani.com/wp-content/uploads/2024/10/Dinesh-gundurao-620x372.jpg)
![Dinesh-gundurao](https://www.udayavani.com/wp-content/uploads/2024/10/Dinesh-gundurao-620x372.jpg)
ಸುಳ್ಯ: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಮಸ್ಯೆ ಇರುವುದು ಬಿಜೆಪಿಯಲ್ಲಿ. ಅಲ್ಲಿ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನ ನಡೆಯುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ರಾಜ್ಯ ಸರಕಾರದಲ್ಲಿ ನಾಯಕತ್ವ ಬದಲಾವಣೆ ಆಗಲಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ನಮ್ಮವರು ಎಲ್ಲರೂ ಒಗ್ಗಟ್ಟಾಗಿದ್ದೇವೆ. ಸಿಎಂ ನಾಯಕತ್ವದ ವಿರುದ್ಧ ಯಾರೂ ಮಾತನಾಡಿಲ್ಲ. ಆದರೆ ಬಿಜೆಪಿಯಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಒಮ್ಮೆ ತಿಳಿದುಕೊಳ್ಳಿ ಎಂದರು.
ಮುಂಬರುವ ಚುನಾವಣೆಯನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಲಿದೆ.
ಸೋಲು-ಗೆಲುವು ಇದ್ದದ್ದೇ. ಆದರೂ ನಮ್ಮ ಮತದಾರರ ಸಂಖ್ಯೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತೇವೆ. ಫಲಿತಾಂಶ ಏನಾಗಲಿದೆ ಎಂಬುದನ್ನು ಮತ್ತೆ ನೋಡೋಣ. ನಾವು ಶಕ್ತಿಮೀರಿ ಗೆಲುವಿಗೆ ಪ್ರಯತ್ನಿಸುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.