Court: ಅತ್ಯಾಚಾರಕ್ಕೊಳಗಾದ 14 ವರ್ಷದ ಅಪ್ರಾಪ್ತೆಯ ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ಅನುಮತಿ
ಲೋಕಮಾನ್ಯ ತಿಲಕ್ ಆಸ್ಪತ್ರೆಯ ಡೀನ್ ಅವರಿಗೆ ನಿರ್ದೇಶನ ನೀಡಿರುವುದಾಗಿ ವರದಿ ವಿವರಿಸಿದೆ.
Team Udayavani, Apr 22, 2024, 2:58 PM IST
ನವದೆಹಲಿ: ಅತ್ಯಾಚಾರಕ್ಕೊಳಗಾದ 14 ವರ್ಷದ ಅಪ್ರಾಪ್ತೆಗೆ ಗರ್ಭಪಾತ(30ವಾರ) ಮಾಡಿಸಿಕೊಳ್ಳಲು ಸುಪ್ರೀಂಕೋರ್ಟ್ ಸೋಮವಾರ (ಏ.22) ಮಹತ್ವದ ಆದೇಶವನ್ನು ನೀಡಿದೆ.
ಇದನ್ನೂ ಓದಿ:Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್‌ವೀರ್
ಈ ಮೊದಲು ಗರ್ಭಪಾತಕ್ಕೆ ಅವಕಾಶ ನೀಡಬೇಕೆಂದು ಕೋರಿ ಅಪ್ರಾಪ್ತ ಬಾಲಕಿಯ ಮನವಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿತ್ತು. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿದ್ದ ಪೀಠ, ಅರ್ಜಿಯ ವಿಚಾರಣೆ ನಡೆಸಿ, ತಜ್ಞ ವೈದ್ಯರ ತಂಡದ ಮೂಲಕ ಗರ್ಭಪಾತ ಮಾಡಿಸುವಂತೆ ಮುಂಬೈನ ಲೋಕಮಾನ್ಯ ತಿಲಕ್ ಆಸ್ಪತ್ರೆಯ ಡೀನ್ ಅವರಿಗೆ ನಿರ್ದೇಶನ ನೀಡಿರುವುದಾಗಿ ವರದಿ ವಿವರಿಸಿದೆ.
ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬಾಲಕಿಯ ತಾಯಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಮೆಡಿಕಲ್ ಟರ್ಮಿನೇಶನ್ ಆಫ್ ಪ್ರೆಗ್ನೇನ್ಸಿ ಕಾಯ್ದೆ(MTP)ಯ ಪ್ರಕಾರ, ಗರಿಷ್ಠ 24 ವಾರಗಳ ಗರ್ಭಿಣಿಗೆ ಗರ್ಭಪಾತ ಮಾಡಲು ಅವಕಾಶ ನೀಡಲಾಗುತ್ತದೆ. ವಿವಾಹಿತ ಅಥವಾ ಅತ್ಯಾಚಾರ, ಅಪ್ರಾಪ್ತೆಯಂತಹ ಪ್ರಕರಣಗಳಿಗೆ ಇದು ಅನ್ವಯವಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.