Electoral Bonds: ಏನಿದು ಚುನಾವಣಾ ಬಾಂಡ್‌, ರಾಜಕೀಯ ಪಕ್ಷಗಳಿಗೆ ಬಂದ ದೇಣಿಗೆ ಎಷ್ಟು?

2024ರ ಮಾರ್ಚ್‌ 31ರೊಳಗೆ ವೆಬ್‌ ಸೈಟ್‌ ನಲ್ಲಿ ಸಾರ್ವಜನಿಕವಾಗಿ ಪ್ರಕಟಿಸಬೇಕು

Team Udayavani, Feb 15, 2024, 11:51 AM IST

Electoral Bonds: ಏನಿದು ಚುನಾವಣಾ ಬಾಂಡ್‌, ರಾಜಕೀಯ ಪಕ್ಷಗಳಿಗೆ ಬಂದ ದೇಣಿಗೆ ಎಷ್ಟು?

ಚುನಾವಣಾ ಬಾಂಡ್‌ ಗಳ ಕಾನೂನು ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌ ನ ಪಂಚಸದಸ್ಯ ಸಾಂವಿಧಾನಿಕ ಪೀಠ, ಗುರುವಾರ (ಫೆ.15) ಮಹತ್ವದ ತೀರ್ಪನ್ನು ಪ್ರಕಟಿಸಿದೆ. ಚುನಾವಣಾ ಬಾಂಡ್‌ ಗಳು ಸಂವಿಧಾನ ಬಾಹಿರ ಎಂದಿರುವ ಸುಪ್ರೀಂಕೋರ್ಟ್‌, ಚುನಾವಣಾ ಬಾಂಡ್‌ ಗಳನ್ನು ನಿಷೇಧಿಸಿ ತೀರ್ಪನ್ನು ನೀಡಿದೆ.

ಚುನಾವಣಾ ಬಾಂಡ್‌ ಗಳ ವ್ಯಾಲಿಡಿಟಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌ ನ ಸಿಜೆಐ ಡಿ.ವೈ.ಚಂದ್ರಚೂಡ್‌ ನೇತೃತ್ವದ ಪಂಚ ಸದಸ್ಯರ ಸಾಂವಿಧಾನಿಕ ಪೀಠವು ಕಳೆದ ವರ್ಷ ನವೆಂಬರ್‌ 2ರಂದು ತೀರ್ಪನ್ನು ಕಾಯ್ದಿರಿಸಿತ್ತು.

ಅರ್ಜಿದಾರರ ವಾದವೇನು?

ಚುನಾವಣಾ ಬಾಂಡ್‌ ಗಳ ಯೋಜನೆಯು ಸಂವಿಧಾನದ 19(1)(ಎ) ವಿಧಿಯ ಅಡಿಯಲ್ಲಿ ಮೂಲಭೂತ ಹಕ್ಕಾಗಿರುವ ರಾಜಕೀಯ ಪಕ್ಷಗಳ ದೇಣಿಗೆಯ ಮೂಲವನ್ನು ತಿಳಿಸುವ ನಾಗರಿಕರ ಹಕ್ಕನ್ನು ಕಸಿದುಕೊಂಡಂತಾಗಲಿದೆ ಎಂಬುದು ಅರ್ಜಿದಾರರ ವಾದವಾಗಿದೆ.

ಸುಪ್ರೀಂಕೋರ್ಟ್‌ ಹೇಳಿದ್ದೇನು:

ರಾಜಕೀಯ ಪಕ್ಷಗಳಿಗೆ ಚುನಾವಣಾ ಬಾಂಡ್‌ ಗಳ ಮೂಲಕ ಎಷ್ಟು ದೇಣಿಗೆ ಬಂದಿದೆ ಎಂಬುದನ್ನು ಎಸ್‌ ಬಿಐ ಮಾಹಿತಿ ನೀಡಬೇಕೆಂದು ಸುಪ್ರೀಂಕೋರ್ಟ್‌ ಸಾಂವಿಧಾನಿಕ ಪೀಠ ಸೂಚನೆ ನೀಡಿದೆ. ಮಾರ್ಚ್‌ 6ರೊಳಗೆ ಎಸ್‌ ಬಿಐ ಎಲ್ಲಾ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಬೇಕು. ಚುನಾವಣಾ ಆಯೋಗ ಮಾಹಿತಿಯನ್ನು 2024ರ ಮಾರ್ಚ್‌ 31ರೊಳಗೆ ವೆಬ್‌ ಸೈಟ್‌ ನಲ್ಲಿ ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ನಿರ್ದೇಶನ ನೀಡಿದೆ.

ಇನ್ಮುಂದೆ ಎಸ್‌ ಬಿಐ ಚುನಾವಣಾ ಬಾಂಡ್‌ ಗಳನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಸುಪ್ರೀಂ ಪೀಠ ಹೇಳಿದೆ. ಎಲೆಕ್ಟ್ರಾಲ್‌ ಬಾಂದ್‌ ಸ್ಕೀಮ್‌ ಅಸಂವಿಧಾನಿಕವಾಗಿದೆ. ಅನಾಮಧೇಯ ಚುನಾವಣಾ ಬಾಂಡ್‌ ಗಳು ಮಾಹಿತಿ ಹಕ್ಕು ಮತ್ತು ಆರ್ಟಿಕಲ್‌ 19(1) ಅನ್ನು ಉಲ್ಲಂಘಿಸುತ್ತದೆ. ಬಾಂಡ್‌ ಗಳ ಮೂಲಕ ದೇಣಿಗೆ ನೀಡುವ ಮೂಲಕ ರಾಜಕೀಯ ಪ್ರವೇಶಕ್ಕೆ ಅವಕಾಶವಾಗಲಿದ್ದು, ಇದು ಹಣ ಮತ್ತು ಮತದಾನದ ನಡುವಿನ ನಂಟಾಗಲಿದೆ ಎಂದು ಸುಪ್ರೀಂಕೋರ್ಟ್‌ ತೀರ್ಪಿನಲ್ಲಿ ವಿಶ್ಲೇಷಿಸಿದೆ.

ದೇಣಿಗೆಯನ್ನು ಅನಾಮಧೇಯಗೊಳಿಸುವ ಕೇಂದ್ರ ಸರ್ಕಾರದ ಆದಾಯ ತೆರಿಗೆ ಕಾಯಿದೆ ಮತ್ತು ಜನಪ್ರತಿನಿಧಿ ಕಾಯಿದೆಗೆ ಮಾಡಿದ ತಿದ್ದುಪಡಿಯನ್ನು ಸುಪ್ರೀಂಕೋರ್ಟ್‌ ರದ್ದುಗೊಳಿಸಿದೆ.

ಏನಿದು ಚುನಾವಣಾ ಬಾಂಡ್?‌

2018ರ ಜನವರಿ 29ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ ಡಿಎ ಸರ್ಕಾರ ಚುನಾವಣಾ ಬಾಂಡ್‌ ಸ್ಕೀಮ್‌ ಅನ್ನು ಜಾರಿಗೆ ತಂದಿತ್ತು. ಚುನಾವಣಾ ಬಾಂಡ್‌ ಅಂದರೆ ಇದು ಪ್ರಾಮಿಸರಿ ನೋಟ್‌ ನಂತಿದ್ದು, ಇದನ್ನು ದೇಶದ ಯಾವುದೇ ಪ್ರಜೆ ಅಥವಾ ಕಂಪನಿಯು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಯಾವುದೇ ಶಾಖೆಗಳಿಂದ ಖರೀದಿಸಬಹುದು. ಅಲ್ಲದೇ ಈ ಬಾಂಡ್‌ ಗಳನ್ನು ತಮ್ಮ ಆಯ್ಕೆ ಯಾವುದೇ ರಾಜಕೀಯ ಪಕ್ಷಗಳಿಗೆ ದೇಣಿಗೆಯಾಗಿ ನೀಡಬಹುದಾಗಿದೆ.

ಚುನಾವಣಾ ಬಾಂಡ್‌ ಗಳ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವವರ ಹೆಸರು ಮತ್ತು ಗುರುತನ್ನು ಗೌಪ್ಯವಾಗಿಡಲಾಗುತ್ತದೆ. ದೇಶದ ಯಾವುದೇ ಪ್ರಜೆ ಅಥವಾ ಕಂಪನಿಗಳು ಬಾಂಡ್‌ ಗಳನ್ನು ಖರೀದಿಸಬಹುದಾಗಿದೆ. ಈ ಬಾಂಡ್‌ ಗಳು 1,000 ರೂಪಾಯಿಯಿಂದ ಒಂದು ಕೋಟಿ ರೂ. ಮೊತ್ತದವರೆಗೂ ಇದೆ. ಈ ದೇಣಿಗೆಗಳು ಬಡ್ಡಿ ರಹಿತವಾಗಿರುತ್ತದೆ.

ಬಾಂಡ್‌ ಗಳ ಮೂಲಕ ರಾಜಕೀಯ ಪಕ್ಷಗಳು ಪಡೆದ ಹಣವೆಷ್ಟು?

ಪಿಟಿಐ ವರದಿ ಪ್ರಕಾರ, 2022-23ನೇ ಸಾಲಿನಲ್ಲಿ ಭಾರತೀಯ ಜನತಾ ಪಕ್ಷ ಚುನಾವಣಾ ಬಾಂಡ್‌ ಗಳ ಮೂಲಕ ಅಂದಾಜು 1,300 ಕೋಟಿ ರೂಪಾಯಿ ದೇಣಿಗೆ ಪಡೆದಿದೆ. 2021-22ನೇ ಸಾಲಿನಲ್ಲಿ ಬಿಜೆಪಿ ಚುನಾವಣಾ ಬಾಂಡ್‌ ಮುಖೇನ 1,775 ಕೋಟಿ ರೂ. ದೇಣಿಗೆ ಪಡೆದಿತ್ತು. ಒಟ್ಟಾರೆಯಾಗಿ 2022-23ನೇ ಸಾಲಿನಲ್ಲಿ ಭಾರತೀಯ ಜನತಾ ಪಕ್ಷ ಪಡೆದ ಒಟ್ಟು ದೇಣಿಗೆ 2,360.8 ಕೋಟಿ ರೂಪಾಯಿ ಎಂದು ವಿವರಿಸಿದೆ.

ಅದೇ ರೀತಿ ಕಾಂಗ್ರೆಸ್‌ ಪಕ್ಷ 2022-23ನೇ ಸಾಲಿನಲ್ಲಿ ಚುನಾವಣಾ ಬಾಂಡ್‌ ಗಳ ಮೂಲಕ ಪಡೆದ ಮೊತ್ತ 171 ಕೋಟಿ ರೂಪಾಯಿ. 2021-22ನೇ ಸಾಲಿನಲ್ಲಿ ಕಾಂಗ್ರೆಸ್‌ ಪಕ್ಷ 236 ಕೋಟಿ ರೂಪಾಯಿ ದೇಣಿಗೆ ಪಡೆದಿತ್ತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

BGT: ವಿರಾಟ್‌ ಬಗ್ಗೆ ಆಸೀಸ್‌ ಜನರಿಗೆ ಯಾಕಿಷ್ಟು ಕುತೂಹಲ; ಇಂದು ಕಿಂಗ್‌ ಸಾಮ್ರಾಜ್ಯದ ಕಥೆ

BGT: ವಿರಾಟ್‌ ಬಗ್ಗೆ ಆಸೀಸ್‌ ಜನರಿಗೆ ಯಾಕಿಷ್ಟು ಕುತೂಹಲ; ಇದು ಕಿಂಗ್‌ ಸಾಮ್ರಾಜ್ಯದ ಕಥೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.