ISRO ವಿಜ್ಞಾನಿ ಎಂದು ಮಾಧ್ಯಮಗಳಿಗೆ ಸಂದರ್ಶನ ನೀಡಿದ ಟ್ಯೂಷನ್ ಶಿಕ್ಷಕನ ಬಂಧನ!
ತನಿಖೆಯಲ್ಲಿ ತ್ರಿವೇದಿಗೂ ಇಸ್ರೋ ಸಂಸ್ಥೆಗೂ ಯಾವ ಸಂಬಂಧವೂ ಇಲ್ಲ ಎಂಬುದು ತಿಳಿದು ಬಂದಿದೆ
Team Udayavani, Aug 30, 2023, 12:57 PM IST
ಸೂರತ್(ಗುಜರಾತ್): ಇಸ್ರೋದ ವಿಜ್ಞಾನಿ ಎಂದು ಸುಳ್ಳು ಹೇಳಿ ಗುರುತಿಸಿಕೊಳ್ಳುತ್ತಿದ್ದ ವ್ಯಕ್ತಿಯೊಬ್ಬನನ್ನು ಸೂರತ್ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಚಂದ್ರಯಾನ-3ರ ಲ್ಯಾಂಡರ್ ಮಾಡ್ಯೂಲ್ ಅನ್ನು ವಿನ್ಯಾಸಗೊಳಿಸಿರುವುದಾಗಿ ಸೂರತ್ ನ ಮಾಧ್ಯಮಗಳಿಗೆ ಈತ ಸಂದರ್ಶನ ನೀಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:BRT ಹುಲಿ ರಕ್ಷಿತಾ ಅರಣ್ಯ ಪ್ರದೇಶದಲ್ಲಿ ಹೆಣ್ಣು ಹುಲಿಯ ಮೃತದೇಹ ಪತ್ತೆ
ಆರೋಪಿ ಮಿಥುಲ್ ತ್ರಿವೇದಿ (30ವರ್ಷ) ಎಂಬಾತ ಗುಜರಾತ್ ನ ಸೂರತ್ ನಗರದಲ್ಲಿ ತನ್ನ ಟ್ಯೂಷನ್ ತರಗತಿಗಳಿಗೆ ಹಚ್ಚಿನ ವಿದ್ಯಾರ್ಥಿಗಳನ್ನು ಸೆಳೆಯುವ ನಿಟ್ಟಿನಲ್ಲಿ ಇಸ್ರೋ ವಿಜ್ಞಾನಿಯ ಸೋಗು ಹಾಕಿದ್ದು, ಈತನನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಗಸ್ಟ್ 23ರಂದು ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡ್ ಆದ ನಂತರ ತ್ರಿವೇದಿ ಸ್ಥಳೀಯ ಮಾಧ್ಯಮಗಳಿಗೆ ಸಂದರ್ಶನಗಳನ್ನು ನೀಡಿದ್ದ. ಬಳಿಕ ತ್ರಿವೇದಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವುದಾಗಿ ವರದಿ ವಿವರಿಸಿದೆ.
ತಾನು ಇಸ್ರೋದ ಏನ್ಸಿಯಂಟ್ ಸೈನ್ಸ್ ಆಪ್ಲಿಕೇಶನ್ ಡಿಪಾರ್ಟ್ ಮೆಂಟ್ ನ ಅಸಿಸ್ಟೆಂಟ್ ಚೆಯರ್ ಮೆನ್ ಎಂದು ಹೇಳಿಕೊಂಡಿದ್ದ. ಅಷ್ಟೇ ಅಲ್ಲ 2022ರ ಫೆಬ್ರವರಿ 26ರಂದು ತಾನು ನೇಮಕಗೊಂಡಿರುವುದಾಗಿ ನಕಲಿ ಅಪಾಯಿಂಟ್ ಮೆಂಟ್ ಲೆಟರ್ ಅನ್ನು ತೋರಿಸುತ್ತಿದ್ದ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತನಿಖೆಯಲ್ಲಿ ತ್ರಿವೇದಿಗೂ ಇಸ್ರೋ ಸಂಸ್ಥೆಗೂ ಯಾವ ಸಂಬಂಧವೂ ಇಲ್ಲ ಎಂಬುದು ತಿಳಿದು ಬಂದಿದೆ. ಈತ ಜನರ ಹಾದಿ ತಪ್ಪಿಸುವ ನಿಟ್ಟಿನಲ್ಲಿ ಇಸ್ರೋ ವಿಜ್ಞಾನಿ ಎಂದು ಸೋಗು ಹಾಕಿ ಇಸ್ರೋ ಸಂಸ್ಥೆಯ ಘನತೆಗೆ ಧಕ್ಕೆ ತಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹವಾಮಾನ ಹಣಕಾಸು ಪ್ಯಾಕೇಜ್ ತಿರಸ್ಕರಿಸಿದ ಭಾರತ
Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.