Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
ಮನೆಯಿಡೀ ವ್ಯಾಪಿಸಿದ ಬೆಂಕಿ ದುರಂತಕ್ಕೆ ಅನಿಲ ಸೋರಿಕೆ ಕಾರಣ
Team Udayavani, Dec 19, 2024, 7:15 AM IST
ಸುರತ್ಕಲ್: ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿ ಬುಧವಾರ ಮಧ್ಯಾಹ್ನ ಅಡುಗೆ ಮನೆಯ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡು ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ.
ಮನೆಯ ಯಜಮಾನ ವಾಮನ ಅವರ ಪತ್ನಿ ವಸಂತಿ (68) ಮತ್ತು ವಾಮನ ಅವರ ಅಕ್ಕ ಪುಷ್ಪಾ (72) ಗಾಯಾಳುಗಳು. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ಯಾಸ್ ಸೋರಿಕೆಯಾಗಿರುವುದು ಗಮನಕ್ಕೆ ಬಾರದೆ ವಸಂತಿ ಮಧ್ಯಾಹ್ನ ಅಡುಗೆ ಕೋಣೆಗೆ ಹೋಗಿ ಸ್ಟವ್‌ಗೆ ಬೆಂಕಿ ಹಚ್ಚುತ್ತಿದ್ದಂತೆ ಏಕಾಏಕಿ ಬೆಂಕಿ ವ್ಯಾಪಿಸಿಕೊಂಡಿತು. ಅವರು ಸಹಾಯಕ್ಕಾಗಿ ಕೂಗಿದಾಗ ಹೊರಗೆ ಬಟ್ಟೆ ಒಗೆಯುತ್ತಿದ್ದ ಪುಷ್ಪಾ ಧಾವಿಸಿ ಬಂದು ಹೊರಗಿನಿಂದ ಬಾಗಿಲು ತೆರೆಯುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಅವರಿಗೂ ಚಾಚಿತು. ಅವರಿಬ್ಬರ ಕಿರುಚಾಟ ಕೇಳಿ ಅಕ್ಕಪಕ್ಕದವರು ಧಾವಿಸಿ ಇಬ್ಬರನ್ನೂ ಹೊರಗೆಳೆದು ಬೆಂಕಿ ನಂದಿಸಲು ಸಹಾಯ ಮಾಡಿದರು.
ವಸಂತಿ ಧರಿಸಿದ್ದ ಸೀರೆ ಅವರ ಮೈಗೆ ಅಂಟಿಕೊಂಡಿತ್ತು. ಬಳಿಕ ಸೀರೆಯನ್ನು ಕತ್ತರಿಸಿ ತೆಗೆಯಬೇಕಾಯಿತು. ಅದಾಗಲೇ ಕೈ, ಮುಖದ ಭಾಗ ಮತ್ತಿತರ ಕಡೆ ಬೆಂಕಿ ತಗಲಿತ್ತು ಎಂದು ನೆರವಿಗೆ ಧಾವಿಸಿದವರು ತಿಳಿಸಿದ್ದಾರೆ.
ಅಧಿಕಾರಿಗಳಿಂದ ಪರಿಶೀಲನೆ
ಇಂಡೇನ್ ಗ್ಯಾಸ್ ಏಜೆನ್ಸಿಯ ಅಧಿಕಾರಿಗಳು ಆಗಮಿಸಿ ಪರಿಶೀಲಿಸಿದರು. ಗ್ಯಾಸ್ ಪೈಪ್, ರೆಗ್ಯುಲೇಟರ್, ಸಿಲಿಂಡರ್ ತಪಾಸಣೆ ನಡೆಸಿದ್ದು, ರೆಗ್ಯುಲೇಟರ್ ಸಮೀಪ ಪೈಪ್‌ನಿಂದ ಅನಿಲ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸುರತ್ಕಲ್ ಪೊಲೀಸರು ಹಾಗೂ ಫಾರೆನ್ಸಿಕ್ ತಜ್ಞರು ಕೂಡ ಪರಿಶೀಲಿಸಿದ್ದಾರೆ.
ಮನೆ ಯಜಮಾನ ವಾಮನ ಅಯ್ಯಪ್ಪ ವ್ರತಧಾರಿ ಯಾಗಿದ್ದು, ಮನೆ ಬಳಿಯಿರುವ ಸಣ್ಣ ಅಡುಗೆ ಕೋಣೆಯಲ್ಲಿ ಪ್ರತ್ಯೇಕವಾಗಿ ಅಡುಗೆ ಮಾಡಿಕೊಳ್ಳುತ್ತಿದ್ದರು. ಕೋಣೆಯ ಒಳಗೆ ಮತ್ತೆರಡು ಅನಿಲ ಜಾಡಿಗಳಿದ್ದವು. ಆದರೆ ಅಪಾಯ ಸಂಭವಿಸಿಲ್ಲ.
ಸಿಡಿದ ಛಾವಣಿ
ದುರಂತದಲ್ಲಿ ಮನೆಯ ಛಾವಣಿಯ ಶೀಟ್ ಹಾರಿಹೋಗಿ ಸ್ಫೋಟದಂತಹ ಶಬ್ದ ಕೇಳಿಸಿದೆ. ಮನೆಯ ಹೊರಭಾಗಕ್ಕೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿತ್ತು. ಮನೆಯ ಒಳಭಾಗ, ಹೊರಗೆ ಇದ್ದ ಚಪ್ಪಲಿ ಸ್ಟಾಂಡ್, ಬಟ್ಟೆ ಬರೆ, ಕಟ್ಟಿಗೆ, ವಿದ್ಯುತ್ ಸಂಪರ್ಕ ವ್ಯವಸ್ಥೆ, ಸಮೀಪದ ಬಾಳೆ ಗಿಡ ಇತ್ಯಾದಿಗಳೂ ಕರಟಿ ಹೋಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.