Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು

ರಾಜ್ಯದಲ್ಲಿ ಮೊದಲ ಪ್ರಕರಣ: ಸಾಗರದಲ್ಲಿ 24ರ ಯುವಕನಿಗೂ ವೈರಾಣು ಸೋಂಕು ದೃಢ

Team Udayavani, Jul 7, 2024, 7:45 AM IST

Zeeka-Virus
ಶಿವಮೊಗ್ಗ: ಮಲೆನಾಡು ಜಿಲ್ಲೆಯಲ್ಲಿ ಝೀಕಾ ವೈರಸ್‌ ಸೋಂಕಿನಿಂದ ಬಳಲುತ್ತಿದ್ದ 74 ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆದರೆ ಆರೋಗ್ಯ ಇಲಾಖೆ ಝೀಕಾ ಸೋಂಕಿನಿಂದಾಗಿ ಅವರು ಮೃತಪಟ್ಟಿಲ್ಲ ಎಂದು ಸ್ಪಷ್ಟಪಡಿಸಿದೆ.

ರಾಜ್ಯದ ಮೊದಲ ಶಂಕಿತ ಝೀಕಾ ಪ್ರಕರಣ ಇದಾಗಿದ್ದು, ಮಲೆನಾಡು ಜನರಲ್ಲಿ ಆತಂಕ ಸೃಷ್ಟಿಸಿದೆ. ಅಲ್ಲದೆ ಸಾಗರ ತಾಲೂಕಿನ 24 ವರ್ಷದ ಯುವಕನಿಗೂ ಝೀಕಾ ಸೋಂಕು ತಗಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಸೊಳ್ಳೆಯಿಂದ ಹರಡುವ ಕಾಯಿಲೆ ಯಾಗಿರುವ ಇದು ಕೇರಳ, ಮಹಾರಾಷ್ಟ್ರದಲ್ಲಿ ಮಾತ್ರ ಕಾಣಿಸಿಕೊಂಡಿತ್ತು.

ಕೆಲವು ದಿನಗಳ ಹಿಂದೆ ಚಿಕ್ಕ ಬಳ್ಳಾಪುರದ ಸೊಳ್ಳೆಯಲ್ಲಿ ವೈರಸ್‌ ಇರುವುದು ದೃಢಪಟ್ಟಿತ್ತು. ಈಗ ಶಿವಮೊಗ್ಗದಲ್ಲೂ ದೃಢವಾಗಿದೆ. ಶಿವಮೊಗ್ಗದ ಪ್ರಮುಖ ಬಡಾವಣೆ ಯಲ್ಲಿ ವಾಸವಾಗಿದ್ದ ಮೃತ ವೃದ್ಧರನ್ನು ಜೂ. 21ರಂದು ಜ್ವರದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡೆಂಗ್ಯೂ ನೆಗೆಟಿವ್‌ ಬಂದ ಹಿನ್ನೆಲೆಯಲ್ಲಿ ಝೀಕಾ ಪರೀಕ್ಷೆ ಮಾಡಲಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಅವರು ಶನಿವಾರ ಮೃತಪಟ್ಟಿದ್ದಾರೆ. ಝೀಕಾ ವೈರಸ್‌ನಿಂದ ಯಾವುದೇ ವ್ಯಕ್ತಿ ಸಾವಿಗೀಡಾಗುವುದಿಲ್ಲ. ಈ ವೃದ್ಧರು ಬಹು ಅಂಗಾಂಗ ವೈಫಲ್ಯ ದಿಂದ ಬಳಲುತ್ತಿದ್ದರು. ಹಾಗಾಗಿ ಮೃತಪಟ್ಟಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಆರೋಗ್ಯಾ ಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.

ಮೂಲ ಪತ್ತೆಯಾಗಿಲ್ಲ
ಝೀಕಾ ಸೋಂಕಿಗೆ ಈಡಾಗಿರುವ ಶಿವಮೊಗ್ಗದ 74 ವರ್ಷದ ವ್ಯಕ್ತಿ ಹಾಗೂ ಸಾಗರದ 24 ವರ್ಷದ ಯುವಕನಿಗೆ ಯಾವುದೇ ಪ್ರವಾಸದ ಹಿನ್ನೆಲೆ ಇಲ್ಲ. ಝೀಕಾ ವೈರಾಣು ಹೊಂದಿದ್ದ ಸೊಳ್ಳೆ ಕಚ್ಚಿರುವುದರಿಂದ ಕಾಯಿಲೆ ಹರಡಿದೆ. ಆದರೆ ಎರಡೂ ಪ್ರಕರಣಗಳು ಬೇರೆ ಬೇರೆ ತಾಲೂಕುಗಳಲ್ಲಿ ವರದಿಯಾಗಿರುವುದರಿಂದ ಕಾಯಿಲೆ ಮೂಲ ಪತ್ತೆ ಕಷ್ಟಕರವಾಗಿದೆ.

ಗಾಂಧಿನಗರದ 11 ಮಂದಿ ಹಾಗೂ ಸೊಳ್ಳೆಗಳ ಮಾದರಿ, ಸಾಗರದಲ್ಲಿ 20 ಮಂದಿಯ ಮಾದರಿಗಳನ್ನು ಮೆಗ್ಗಾನ್‌ ಲ್ಯಾಬ್‌ ಹಾಗೂ ಬೆಂಗಳೂರಿನ ಎನ್‌ಐವಿ ಲ್ಯಾಬ್‌ನಲ್ಲಿ ಪರೀಕ್ಷೆ ಮಾಡಲಾಗಿದ್ದು, ನೆಗಟಿವ್‌ ಬಂದಿದೆ. ಸಾಗರದಲ್ಲಿ ಸೊಳ್ಳೆಯ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ರೋಗ ಲಕ್ಷಣಗಳೇನು?
ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ದದ್ದುಗಳು, ಕೀಲು ಮತ್ತು ಸ್ನಾಯುಗಳಲ್ಲಿ ನೋವು ಮತ್ತಿತರ ಲಕ್ಷಣಗಳು ಕಾಣಿಸಿ ಕೊಳ್ಳುತ್ತವೆ. ಬಹುತೇಕ ಸೋಂಕು ಪೀಡಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಉಳಿದಂತೆ ರೋಗ ಲಕ್ಷಣಗಳು ಸೌಮ್ಯ ಹಾಗೂ ಸಾಧಾರಣ ಸ್ವರೂಪದಲ್ಲಿದ್ದು, 2-7 ದಿನಗಳ ವರೆಗೆ ಇರುತ್ತವೆ. ಗರ್ಭಿಣಿಗೆ ಈ ಸೋಂಕು ಉಂಟಾದಲ್ಲಿ ಜನಿಸುವ ಶಿಶುವಿನ ತಲೆಯ ಗಾತ್ರದಲ್ಲಿ ವ್ಯತ್ಯಯ (ಮೈಕ್ರೊಸೆಫಾಲಿ) ಕಂಡು ಬರಬಹುದು.
ಏನಿದು ಝೀಕಾ?
ಝೀಕಾ ಎಂಬುದು ವೈರಸ್‌ ಸೋಂಕು.
ಡೆಂಗ್ಯೂ, ಚಿಕೂನ್‌ಗುನ್ಯಾಗಳಂತೆಯೇ ಈಡಿಸ್‌ ಜಾತಿಯ ಸೊಳ್ಳೆ ಗಳಿಂದ ಹರಡುತ್ತದೆ.
ಈ ಸೊಳ್ಳೆಗಳು ಸಾಮಾನ್ಯ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ.

ಟಾಪ್ ನ್ಯೂಸ್

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.