Suvarna Soudha: ಅನುಭವ ಮಂಟಪದ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ
ಬಿಳಿನೆಲೆ ಕೈಕಂಬ ಶಾಲಾ ಮಕ್ಕಳ ಪ್ರವಾಸ
Team Udayavani, Dec 17, 2024, 7:31 AM IST
ಸುಬ್ರಹ್ಮಣ್ಯ: ಶಾಲಾ ಪ್ರವಾಸ ಅಂಗವಾಗಿ ಬೆಳಗಾವಿ ಸುವರ್ಣಸೌಧಕ್ಕೆ ಭೇಟಿ ನೀಡಿದ್ದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಬಿಳಿನೆಲೆ ಕೈಕಂಬ ಸರಕಾರಿ ಪ್ರಾಥಮಿಕ ಶಾಲೆಯ ಸಹಿತ ಇತರ ವಿದ್ಯಾರ್ಥಿಗಳಿಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಭವ ಮಂಟಪದ ಬಗ್ಗೆ ಪಾಠ ಮಾಡಿದರು.
ಬಿಳಿನೆಲೆ ಕೈಕಂಬ ಶಾಲೆಯಿಂದ ಸುಮಾರು 33 ಮಕ್ಕಳು ಶಾಲಾ ಪ್ರವಾಸಕ್ಕಾಗಿ ಶಿಕ್ಷಕರೊಂದಿಗೆ ತೆರಳಿದ್ದರು. ಬೆಳಗಾವಿ ಸುವರ್ಣಸೌಧಕ್ಕೆ ಭೇಟಿ ನೀಡಿದ್ದ ಅವರು ಮೊದಲಿಗೆ ಸಭಾಪತಿ ಯು.ಟಿ. ಖಾದರ್ ಅವರೊಂದಿಗೆ ಸಂವಾದ ನಡೆಸಿದರು. ಈ ವೇಳೆ ಶಾಲಾ ಮಕ್ಕಳು ನೋಡದೇ (ಬಾಯಿ ಪಾಠ) ಸಂವಿಧಾನ ಪೀಠಿಕೆಯನ್ನು ಯು.ಟಿ.ಖಾದರ್ ಎದುರು ವಾಚಿಸಿದರು. ಇದಕ್ಕೆ ಮೆಚ್ಚುಗೆ ಸೂಚಿಸಿದ ಖಾದರ್ ಅವರು ಮಕ್ಕಳನ್ನು ಮುಖ್ಯಮಂತ್ರಿಗಳ ಭೇಟಿಗೆ ಅವಕಾಶ ಮಾಡಿದರು.
ಶಾಲಾ ಪ್ರವಾಸಕ್ಕೆಂದು ಬೆಳಗಾವಿಯ ಸುವರ್ಣಸೌಧಕ್ಕೆ ಭೇಟಿನೀಡಿದ ಮಕ್ಕಳಿಗೆ ಹನ್ನೆರಡನೆಯ ಶತಮಾನದಲ್ಲಿಯೇ ಪ್ರಜಾಪ್ರಭುತ್ವ ಪರಿಕಲ್ಪನೆಯ ಮೇಲೆ ರೂಪುಗೊಂಡಿದ್ದ ಅನುಭವ ಮಂಟಪದ ಬಗ್ಗೆ ವಿವರಿಸಿದೆ.
ಅಂದು ಶರಣರು ಸಾರಿದ ಸಮಾನತೆ, ಜಾತ್ಯತೀತತೆ, ಸಹಬಾಳ್ವೆ, ವ್ಯಕ್ತಿ ಸ್ವಾತಂತ್ರ್ಯ ಘನತೆಯ ಬದುಕಿನ ಹಕ್ಕುಗಳು ಇಂದು ನಮ್ಮ ಸಂವಿಧಾನದ ಆಶಯಗಳಾಗಿವೆ.… pic.twitter.com/6wAY8QHhLF
— Siddaramaiah (@siddaramaiah) December 16, 2024
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೆದರೂ ಮಕ್ಕಳು ನೋಡದೆ ಸಂವಿಧಾನ ಪೀಠಿಕೆ ವಾಚಿಸಿದರು. ಇದಕ್ಕೆ ಸಿಎಂ ಮೆಚ್ಚುಗೆ ಸೂಚಿಸಿ ಮಕ್ಕಳು, ಶಿಕ್ಷಕರನ್ನು ಶ್ಲಾಘಿಸಿದರು. ಆ ಬಳಿಕ ಸಿದ್ದರಾಮಯ್ಯ ಅವರು ಮಕ್ಕಳು ಸೇರಿದಂತೆ ಶಾಲಾ ಪ್ರವಾಸಕ್ಕೆ ಅಲ್ಲಿಗೆ ಆಗಮಿಸಿದ್ದ ವಿದ್ಯಾರ್ಥಿಗಳಿಗೆ 12ನೇಯ ಶತಮಾನದಲ್ಲಿಯೇ ಪ್ರಜಾಪ್ರಭುತ್ವ ಪರಿಕಲ್ಪನೆಯ ಮೇಲೆ ರೂಪುಗೊಂಡಿದ್ದ ಅನುಭವ ಮಂಟಪದ ಬಗ್ಗೆ ವಿವರಿಸಿದರು. ಶಾಲಾ ಮುಖ್ಯ ಶಿಕ್ಷಕಿ ಪವಿತ್ರಾ, ಎಸ್‌ಡಿಎಂಸಿ ಅಧ್ಯಕ್ಷ ನವೀನ್, ಶಿಕ್ಷಕಿ ವನಿತಾ ಮತ್ತಿತರರು ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!
BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ
Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ
ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ
Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.