ಸ್ವಿಸ್ ಬ್ಯಾಂಕ್‌ಗಳಲ್ಲಿನ ಭಾರತೀಯ ಹಣ ಗಣನೀಯ ಹೆಚ್ಚಳ: ಎಸ್‌ಎನ್‌ಬಿ ವರದಿ
2020ರಲ್ಲಿ ಒಟ್ಟು ಠೇವಣಿ ಮೊತ್ತ 20,707 ಕೋಟಿ ರೂ.ಗಳಿಗೆ ಏರಿಕೆ
Team Udayavani, Jun 17, 2021, 9:07 PM IST
ದೆಹಲಿ/ಜ್ಯೂರಿಚ್: ಸ್ವಿಜರ್ಲೆಂಡ್‌ನ ಬ್ಯಾಂಕ್‌ಗಳಲ್ಲಿರುವ ಭಾರತೀಯ ವ್ಯಕ್ತಿಗಳ ಹಾಗೂ ಸಂಸ್ಥೆಗಳ ಖಾತೆಗಳಲ್ಲಿರುವ ಹಣದ ಮೊತ್ತ ಕಳೆದ ವರ್ಷ 20,707 ಕೋಟಿ ರೂ.ಗಳಿಗೆ ಏರಿಕೆಯಾಗಿದೆ ಎಂದು ಸ್ವಿಸ್ ನ್ಯಾಷನಲ್ ಬ್ಯಾಂಕ್ (ಎಸ್‌ಎನ್‌ಬಿ) ನೀಡಿರುವ ವಾರ್ಷಿಕ ವರದಿಯಲ್ಲಿ ಉಲ್ಲೇಖೀಸಲಾಗಿದೆ.
ಷೇರು ಮಾರುಕಟ್ಟೆಗಳಲ್ಲಿ ಈ ವ್ಯಕ್ತಿಗಳು ಹಾಗೂ ಸಂಸ್ಥೆಗಳ ಷೇರು ವ್ಯವಹಾರಗಳಲ್ಲಿ ಬಂದಿರುವ ಅಪಾರ ಲಾಭವನ್ನು ಆ ಸಂಸ್ಥೆಗಳು ಹಾಗೂ ವ್ಯಕ್ತಿಗಳು ಸ್ವಿಸ್ ಬ್ಯಾಂಕ್‌ನಲ್ಲಿಟ್ಟಿದ್ದಾರೆ. ಆದರೆ, ಇದೇ ಅವಧಿಯಲ್ಲಿ ಸ್ವಿಸ್ ಬ್ಯಾಂಕುಗಳ ಗ್ರಾಹಕರ ಖಾತೆಗಳಲ್ಲಿನ ಹಣ ಕಡಿಮೆಯಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
“2019ರಲ್ಲಿ ಸ್ವಿಸ್ ಬ್ಯಾಂಕುಗಳಲ್ಲಿ ಭಾರತೀಯರಿಗೆ ಸಂಬಂಧಿಸಿದ ಹಣದ ಮೊತ್ತ 6,625 ಕೋಟಿ ರೂ. ಇತ್ತು. ಆದರೆ, ಇದು ಕ್ರಮೇಣ ಏರಿಕೆಯಾಗಿ, ಈಗ 20,707 ಕೋಟಿ ರೂ.ಗಳಿಗೆ ಮುಟ್ಟಿದೆ. ಈ ಮಟ್ಟದ ಏರಿಕೆಯಾಗಿರುವುದು ಕಳೆದ 13 ವರ್ಷಗಳಲ್ಲಿ ಇದೇ ಮೊದಲು. 2006ರಲ್ಲಿ ಸ್ವಿಸ್ ಬ್ಯಾಂಕ್‌ಗಳಲ್ಲಿದ್ದ ಭಾರತೀಯರ ಹಣ ಗಣನೀಯವಾಗಿ ಏರಿತ್ತು. ಆದರೆ, ಆನಂತರದ ವರ್ಷಗಳಲ್ಲಿ ಈ ಠೇವಣಿ ಇಳಿಕೆಯ ಹಾದಿಯಲ್ಲಿ ಸಾಗಿತ್ತು. 2011, 2013 ಹಾಗೂ 2017ರಲ್ಲಿ ಖಾತೆಗಳಲ್ಲಿನ ಹಣ ಗಣನೀಯವಾಗಿ ಇಳಿಕೆಯಾಗಿತ್ತು. ಕಳೆದ ವರ್ಷ ಏರಿಕೆಯಾಗಿರುವ 20,707 ಕೋಟಿ ರೂ. ಹಣದಲ್ಲಿ 4,000 ಕೋಟಿ ರೂ.ಗಳಷ್ಟು ಹಣ ಕಸ್ಟಮರ್ ಡೆಪಾಸಿಟ್ ರೂಪದಲ್ಲಿದೆ. 16.5 ಕೋಟಿ ರೂ.ಗಳು ಭಾರತದ ಸಂಸ್ಥೆಗಳ ರೂಪದಲ್ಲಿವೆ” ಎಂದು ವರದಿಯಲ್ಲಿ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.