ಕುಂದಗೋಳದಲ್ಲಿ ಅನುಕಂಪ v/s ಅನುಕಂಪ


Team Udayavani, Apr 29, 2019, 3:07 AM IST

kundagola

ಹುಬ್ಬಳ್ಳಿ: ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಅಖಾಡ ಸಜ್ಜುಗೊಂಡಿದೆ. ಸದ್ಯದ ರಾಜಕೀಯ ಸ್ಥಿತಿ ಗಮನಿಸಿದರೆ ಕ್ಷೇತ್ರದಲ್ಲಿ ಅನುಕಂಪ ವರ್ಸಸ್‌ ಅನುಕಂಪ ಎಂಬ ಪರಿಸ್ಥಿತಿ ಸೃಷ್ಟಿಯಾಗಿದ್ದು, ಇದೇ ಆಧಾರದಲ್ಲಿ ಮತಬೇಟೆ ನಡೆಯುವ ಸಾಧ್ಯತೆ ಅಧಿಕವಾಗಿದೆ.

ಕಾಂಗ್ರೆಸ್‌-ಜೆಡಿಎಸ್‌ನ ಮೈತ್ರಿ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಹಾಗೂ ಬಿಜೆಪಿಯ ಎಸ್‌.ಐ.ಚಿಕ್ಕನಗೌಡ್ರ ಇಬ್ಬರೂ ಅನುಕಂಪ ಗಿಟ್ಟಿಸಿಕೊಳ್ಳಲು, ಆ ಮೂಲಕವೇ ಮತದಾರರ ಮೇಲೆ ಪ್ರಭಾವ ಬೀರುವ ಮೂಲಕ ಮತಬೇಟೆಗೆ ಮುಂದಾಗಲು ಯೋಜಿಸಿದ್ದಾರೆ.

ಕುಂದಗೋಳ ಕ್ಷೇತ್ರದಲ್ಲಿ ತನ್ನ ಅಧಿಪತ್ಯ ಮುಂದುವರಿಸಲು ಕಾಂಗ್ರೆಸ್‌, ಮತ್ತೆ ಹಿಡಿತ ಹೊಂದಲು ಬಿಜೆಪಿ ತೀವ್ರ ಸೆಣೆಸಾಟಕ್ಕಿಳಿದಿವೆ. ಎರಡು ರಾಷ್ಟ್ರೀಯ ಪಕ್ಷಗಳು ಅನೇಕ ವಿಷಯ, ಆರೋಪ-ಪ್ರತ್ಯಾರೋಪಗಳ ಶಸ್ತ್ರಗಳನ್ನು ಸಜ್ಜುಗೊಳಿಸಿಕೊಂಡಿವೆಯಾದರೂ ಪ್ರಮುಖವಾಗಿ ಅನುಕಂಪದ ಅಸ್ತ್ರವನ್ನು ಪ್ರಯೋಗಿಸಲು ಎರಡೂ ಕಡೆಯ ಅಭ್ಯರ್ಥಿಗಳು ಸನ್ನದ್ಧರಾಗಿದ್ದಾರೆ.

ಕಾಂಗ್ರೆಸ್‌ ಅಸ್ತ್ರ: ಪತಿಯನ್ನು ಕಳೆದುಕೊಂಡು ಆಘಾತಕ್ಕೊಳಗಾಗಿರುವ ಕುಸುಮಾವತಿ ಶಿವಳ್ಳಿ ಅವರು, ಪತಿ ಸಿ.ಎಸ್‌.ಶಿವಳ್ಳಿ ಅವರ ಅನುಕಂಪದ ಅಲೆಯನ್ನು ಮತಗಳನ್ನಾಗಿಸಿಕೊಳ್ಳುವ ನಿಟ್ಟಿನಲ್ಲಿ ತೀವ್ರ ಯತ್ನ ನಡೆಸುವ ಸಾಧ್ಯತೆ ಇದೆ. ಶಿವಳ್ಳಿ ಅವರು ಶಾಸಕರಾಗಿರಲಿ, ಇಲ್ಲದಿರಲಿ ಜನರೊಂದಿಗೆ ನೇರ ಸಂಪರ್ಕದಲ್ಲಿರುತ್ತಿದ್ದರು.

ಸಚಿವರಾದ ನಂತರವೂ ಜನರೊಂದಿಗಿನ ನಂಟು ಬದಲಾಗಿರಲಿಲ್ಲ. ನೆರವು ಬೇಡಿ ಬಂದ ಜನರಿಗೆ ಕೈಲಾದ ಮಟ್ಟಿಗೆ ನೆರವು ನೀಡುತ್ತಿದ್ದರು ಎಂಬುದು ಕ್ಷೇತ್ರದ ಅನೇಕರ ಅನಿಸಿಕೆ. ಈ ಬಾಂಧವ್ಯವೇ ತನ್ನ ಪಕ್ಷದ ಅಭ್ಯರ್ಥಿಗೆ ಅನುಕೂಲವಾಗಬಹುದು ಎಂಬ ನಿರೀಕ್ಷೆಯನ್ನು ಕಾಂಗ್ರೆಸ್‌ ಹೊಂದಿದೆ.

ಈ ಕಾರಣಕ್ಕಾಗಿಯೇ ಶಿವಳ್ಳಿ ಅವರ ಪತ್ನಿ ಕುಸುಮಾವತಿ ಶಿವಳ್ಳಿಗೆ ಟಿಕೆಟ್‌ ನೀಡಲು ಕಾಂಗ್ರೆಸ್‌ ನಿರ್ಧರಿಸಿತ್ತು. ಕಾಂಗ್ರೆಸ್‌ನಿಂದ ಸುಮಾರು 18 ಜನರು ಟಿಕೆಟ್‌ ಆಕಾಂಕ್ಷಿಗಳಾಗಿದ್ದರೂ ಕಾಂಗ್ರೆಸ್‌ ವರಿಷ್ಠರು ಶಿವಳ್ಳಿ ಅವರ ಪತ್ನಿಯನ್ನು ಅಭ್ಯರ್ಥಿಯಾಗಿಸಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒತ್ತಾಸೆ, ಧಾರವಾಡ ಜಿಲ್ಲೆಯ ಕಾಂಗ್ರೆಸ್‌ ಮುಖಂಡರ ಒತ್ತಾಸೆಯೂ ಇದರ ಹಿಂದೆ ಬಹುದೊಡ್ಡ ರೀತಿಯಲ್ಲಿ ಕೆಲಸ ಮಾಡಿದೆ.

ಬಿಜೆಪಿ ಅಸ್ತ್ರ: ಕಾಂಗ್ರೆಸ್‌ ಅಭ್ಯರ್ಥಿ ಅನುಕಂಪವನ್ನು ಹೆಚ್ಚಿನ ರೀತಿಯಲ್ಲಿ ನೆಚ್ಚಿಕೊಂಡಿದ್ದರಿಂದ ಇದಕ್ಕೆ ಪ್ರತಿಯಾಗಿ ಬಿಜೆಪಿ ಅಭ್ಯರ್ಥಿ ಎಸ್‌.ಐ.ಚಿಕ್ಕನಗೌಡ್ರ ಸಹ ಅನುಕಂಪದ ಅಸ್ತ್ರವನ್ನೇ ಬಳಸಿಕೊಳ್ಳಲು ಮುಂದಾಗಿದ್ದಾರೆ. ಸತತ ಎರಡು ಬಾರಿ ಸೋಲುಂಡಿದ್ದು, ತಮ್ಮ ಕೈ ಹಿಡಿಯುವ ಮೂಲಕ ರಾಜಕೀಯ ಪುನರ್ಜನ್ಮ ನೀಡುವಂತೆ ಮತದಾರರ ಮೇಲೆ ಅನುಕಂಪದ ಅಸ್ತ್ರ ಪ್ರಯೋಗಿಸಲು ತೀವ್ರ ಯತ್ನ ನಡೆಸಿದ್ದಾರೆ.

ಕಲಘಟಗಿ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಎಸ್‌.ಐ.ಚಿಕ್ಕನಗೌಡ್ರ, ಕ್ಷೇತ್ರ ಪುನರ್‌ವಿಂಗಡಣೆಯಿಂದಾಗಿ 2008ರಲ್ಲಿ ಕುಂದಗೋಳ ಕ್ಷೇತ್ರಕ್ಕೆ ವಲಸೆ ಬಂದಿದ್ದರು. ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ಗೆಲುವು ಸಾಧಿಸಿದ್ದರು. 2013ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ, ಸಿ.ಎಸ್‌.ಶಿವಳ್ಳಿ ಎದುರು ಸೋತಿದ್ದರೂ, ಎರಡನೇ ಸ್ಥಾನ ಪಡೆಯುವ ಮೂಲಕ ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ತಳ್ಳುವಂತೆ ಮಾಡಿದ್ದರು.

2018ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಸ್‌.ಐ.ಚಿಕ್ಕನಗೌಡ್ರ, ಸಿ.ಎಸ್‌.ಶಿವಳ್ಳಿ ಅವರ ವಿರುದ್ಧ ಕೇವಲ 634 ಮತಗಳ ಅಂತರದಿಂದ ಸೋಲು ಕಂಡಿದ್ದರು. ಎಸ್‌.ಐ.ಚಿಕ್ಕನಗೌಡ್ರ ಸತತ ಎರಡು ಬಾರಿ ಸೋಲುಂಡಿದ್ದರೆ, ಸಿ.ಎಸ್‌.ಶಿವಳ್ಳಿಯವರು ಸುಮಾರು 56 ವರ್ಷಗಳ ನಂತರ ಸತತ ಎರಡು ಬಾರಿ ಗೆದ್ದ ಮೊದಲ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಇದೀಗ ಮತ್ತೆ ಬಿಜೆಪಿ ಅಭ್ಯರ್ಥಿಯಾಗಿರುವ ಎಸ್‌.ಐ.ಚಿಕ್ಕನಗೌಡ್ರ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೇವಲ 634 ಮತಗಳ ಅಂತರದ ಸೋಲು ಕಂಡಿದ್ದೇನೆ. ನನಗೆ ಈ ಬಾರಿ ಗೆಲುವು ನೀಡಿ ಎಂಬ ಅನುಕಂಪದ ದಾಳ ಉರುಳಿಸಲು ಮುಂದಾಗಿದ್ದಾರೆ.

ಬಗೆಹರಿಯದ ಅಸಮಾಧಾನ: ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಟಿಕೆಟ್‌ ಹಂಚಿಕೆ ಬಗೆಗಿನ ಅಸಮಾಧಾನ ಇನ್ನೂ ಪೂರ್ಣ ಪ್ರಮಾಣದಲ್ಲಿ ಬಗೆಹರಿದಿಲ್ಲ. ಬಿಜೆಪಿಯವರಾದ ಎಸ್‌.ಐ.ಚಿಕ್ಕನಗೌಡ್ರ, ಎಂ.ಆರ್‌.ಪಾಟೀಲರ ಬೆಂಬಲಿಗರ ನಡುವೆ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆಗಳ ಸಮರ ನಡೆದಿದೆ.

ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯಕಾರಿ ಸದಸ್ಯರೊಬ್ಬರು ಕುಂದಗೋಳ ಕ್ಷೇತ್ರದ ಟಿಕೆಟ್‌ ನೀಡಿಕೆ ಕುರಿತಾಗಿ ಪಕ್ಷದ ನಿಲುವ ಪ್ರಶ್ನಿಸುವ, ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ನೇರವಾಗಿ ವಾಗ್ಧಾಳಿ ನಡೆಸುವ ಕಾರ್ಯ ನಡೆಸಿದ್ದಾರೆ. ಆದರೆ, ಇದುವರೆಗೂ ಅವರ ವಿರುದ್ಧ ಒಂದೇ ಒಂದು ಸಣ್ಣ ಶಿಸ್ತು ಕ್ರಮ ಕೈಗೊಳ್ಳದಿರುವುದು ಶಿಸ್ತಿನ ಪಕ್ಷದಲ್ಲಿ ಇಂತಹ ಅಶಿಸ್ತುಗೆ ಅಸ್ತು ಎನ್ನಲಾಗಿದೆಯೋ ಅಥವಾ ಇದರ ಹಿಂದೆ ಯಾವುದಾದರೂ ಬಲವಾದ ಶಕ್ತಿ ಕಾರ್ಯ ನಿರ್ವಹಿಸುತ್ತಿದೆಯೋ ಎಂಬ ಅನುಮಾನ ಕಾಣುತ್ತಿದೆ.

* ಅಮರೇಗೌಡ ಗೋನವಾರ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.