T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?
ಸಂಭ್ರಮಾಚರಣೆಗೆ ಬಿಸಿಸಿಐ ಏನೆಲ್ಲ ವ್ಯವಸ್ಥೆ ಮಾಡಿದೆ, ಇಲ್ಲಿದೆ ಮಾಹಿತಿ...
Team Udayavani, Jul 3, 2024, 8:22 PM IST
ನವದೆಹಲಿ: ಟಿ-೨೦ ವಿಶ್ವಕಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯಗಳಿಸಿ ೧೭ ವರ್ಷ ಬಳಿಕ ಚುಟುಕು ಕ್ರಿಕೆಟ್‌ನಲ್ಲಿ ೨ನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿರುವ ಭಾರತ ಕ್ರಿಕೆಟ್ ತಂಡ ಗುರುವಾರ ಬೆಳಗ್ಗೆ ತವರಿಗೆ ಮರಳಲಿದೆ.
ಟಿ20 ವಿಶ್ವ ಚಾಂಪಿಯನ್ ಭಾರತ ತಂಡ ಬಾರ್ಬಡೋಸ್ನಿಂದ ತವರಿಗೆ ಪ್ರಯಾಣ ಬೆಳೆಸಿದ ಬಗ್ಗೆ ಬಿಸಿಸಿಐ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದು, ಟಿ20 ವಿಶ್ವಕಪ್ ಟ್ರೋಫಿಯ ವಿಡಿಯೊ ಹಾಕಿ ನಾವು ಮರಳುತ್ತಿದ್ದೇವೆ ಎಂದು ಬರೆದುಕೊಂಡಿದೆ. ಬಿಸಿಸಿಐ ವ್ಯವಸ್ಥೆ ಮಾಡಿರುವ ವಿಶೇಷ ವಿಮಾನದಲ್ಲಿ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಭಾರತಕ್ಕೆ ಮರಳಲಿದ್ದಾರೆ.
ಪ್ರಧಾನಿ ಮೋದಿ ಭೇಟಿಯಾಗುವ ಟೀಂ ಇಂಡಿಯಾ
ಗುರುವಾರ (ಜು. 4) ಬೆಳಗ್ಗೆ ಟೀಂ ಇಂಡಿಯಾ ನವದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದು, ಬಳಿಕ ವಿಶ್ವಕಪ್ ಟ್ರೋಫಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಮಾಡಲಿದೆ. ಗುರುವಾರ ಬೆಳಗ್ಗೆ 11 ಗಂಟೆಗೆ ಭಾರತ ತಂಡ, ನರೇಂದ್ರ ಮೋದಿ ನಿವಾಸಕ್ಕೆ ಭೇಟಿ ನೀಡಲಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾಹಿತಿ ನೀಡಿದ್ದಾರೆ.
🏆🇮🇳 Join us for the Victory Parade honouring Team India’s World Cup win! Head to Marine Drive and Wankhede Stadium on July 4th from 5:00 pm onwards to celebrate with us! Save the date! #TeamIndia #Champions @BCCI @IPL pic.twitter.com/pxJoI8mRST
— Jay Shah (@JayShah) July 3, 2024
ಮುಂಬೈಯಲ್ಲಿ ವಿಶೇಷ ಕಾರ್ಯಕ್ರಮ
ನವದೆಹಲಿಯಿಂದ ವಿಶೇಷ ವಿಮಾನ ಮೂಲಕ ಮುಂಬೈಗೆ ಆಗಮಿಸುವ ಭಾರತ ತಂಡ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಾಯಕ ರೋಹಿತ್ ಶರ್ಮಾ ಗೆದ್ದಿರುವ ವಿಶ್ವಕಪ್ ಟ್ರೋಫಿಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾಗೆ ಹಸ್ತಾಂತರಿಸಲಿದ್ದಾರೆ.
ತೆರೆದ ವಾಹನದಲ್ಲಿ ರೋಡ್ ಶೋ
ವಿಶ್ವ ಚಾಂಪಿಯನ್ ಭಾರತ ತಂಡದ ಕ್ರಿಕೆಟಿಗರನ್ನು ತೆರೆದ ವಾಹನದಲ್ಲಿ ಸಂಜೆ ೫ ಗಂಟೆಗೆ ವೈಭವಯುತ ಮೆರವಣಿಗೆಯು ಜರುಗಲಿದೆ ಎಂದು ಜಯ್ ಶಾ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.