ಶೇವ್, ಗಡ್ಡ ಟ್ರಿಮ್ಗೆ ನಿಷೇಧ; ಅಫ್ಘಾನಿಸ್ಥಾನದ ತಾಲಿಬಾನ್ ಆಡಳಿತ ಹೊಸ ಆದೇಶ
Team Udayavani, Sep 28, 2021, 7:30 AM IST
ಕಾಬೂಲ್: ಅಫ್ಘಾನಿಸ್ಥಾನ ವಶಪಡಿಸಿಕೊಂಡ ತಾಲಿಬಾನ್ ಉಗ್ರರು ಈಗಾಗಲೇ ಅನಾಗರಿಕ ನಿಯಮಗಳನ್ನು ಜಾರಿಗೊಳಿಸಿದ್ದಾರೆ. ಅದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಹೆಲ್ಮಂಡ್ ಪ್ರಾಂತ್ಯದಲ್ಲಿ ಪುರುಷರು ಗಡ್ಡ ತೆಗೆಯುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಗಡ್ಡ ತೆಗೆಯುವುದು, ಟ್ರಿಮ್ ಮಾಡುವುದು ಇಸ್ಲಾಂ ಧರ್ಮದ ನಿಯಮಗಳ ಅನ್ವಯ ನಿಷೇಧ ಎನ್ನುವುದು ತಾಲಿಬಾನ್ ಆಡಳಿತದ ವಾದ. ಅದನ್ನು ಮೀರುವವರಿಗೆ ಉಗ್ರ ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಅಫ್ಘಾನ್ ರಾಜಧಾನಿ ಕಾಬೂಲ್ನ ಕೆಲವು ಕ್ಷೌರದ ಅಂಗಡಿ ಮಾಲಕರಿಗೂ ಇದೇ ಮಾದರಿಯ ತಾಕೀತು ಮಾಡಲಾಗಿದೆ.
ಸೆಲ್ಫಿಗೆ ನಿಷೇಧ: ಮತ್ತೊಂದು ನಗೆಪಾಟಲಿನ ಕ್ರಮದಲ್ಲಿ ತಾಲಿಬಾನಿಗಳು ಸೆಲ್ಫಿ ತೆಗೆದುಕೊಳ್ಳುವುದರ ಮೇಲೆ ನಿಷೇಧ ಹೇರಿದ್ದಾರೆ. ಇತ್ತೀಚೆಗೆ ವೈರಲ್ ಆಗಿರುವ ವೀಡಿಯೋ, ಫೋಟೋಗಳಲ್ಲಿ ತಾಲಿಬಾನಿಗಳು ಮನಸೋ ಇಚ್ಛೆ ವರ್ತಿಸುತ್ತಿದ್ದದ್ದು ಕಂಡುಬಂದಿದೆ. ಹೀಗಾಗಿ ರಕ್ಷಣ ಸಚಿವ ಮೌಲಾವಿ ಮೊಹ್ಮದ್ ಯಕೂಬ್ ಖಡಕ್ ಎಚ್ಚರಿಕೆ ನೀಡಿ, ನಮ್ಮ ಸೈನಿಕರು ಯಾರೂ ಸೆಲ್ಫಿಗಳನ್ನು ತೆಗೆದುಕೊಳ್ಳಬಾರದು. ಅವರಿಗೆ ವಹಿಸಿದ ಕೆಲಸವನ್ನಷ್ಟೇ ಮಾಡಬೇಕು. ಬೇರಾವುದೇ ಕೆಲಸ ಮಾಡಿ ತಾಲಿಬಾನ್ ಸರಕಾರಕ್ಕೆ ಅವಮಾನವಾಗುವಂತೆ ಮಾಡಬಾರದು ಎಂದು ಎಚ್ಚರಿಸಿದ್ದಾನೆ.
ಇದನ್ನೂ ಓದಿ:ಎರಡು ಗುಂಪುಗಳ ಗಲಾಟೆಯಲ್ಲಿ ʼಬಸವʼ ಬಡವಾಯ್ತು
ಇನ್ನೊಂದೆಡೆ ವಿವಿಗಳಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಪ್ರತ್ಯೇಕವಾಗಿ ಕೂರಿಸಿ ತರಗತಿಗಳನ್ನು ನಡೆಸಲು ಸಮಸ್ಯೆ ಉಂಟಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇರುವುದರಿಂದ ವಿದ್ಯಾರ್ಥಿನಿಯರನ್ನು ಇತರ ಸ್ಥಳಕ್ಕೆ ವರ್ಗಾಯಿಸುವ ಅನಿವಾರ್ಯತೆ ಉಂಟಾಗಿದೆ. ಖಾಸಗಿ ಕಾಲೇಜುಗಳಲ್ಲಿ ಉತ್ತಮ ವ್ಯವಸ್ಥೆ ಇರುವುದರಿಂದ ಈ ಸಮಸ್ಯೆ ಕಂಡು ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.