Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
ವಿಜಯೇಂದ್ರನ ನಾನು ಒಪ್ಪಲ್ಲ ಎಂದಿದ್ದ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ, ನನ್ನ ರಾಜ್ಯಾಧ್ಯಕ್ಷನಾಗಿ ಘೋಷಿಸಿದ್ದು ಹೈಕಮಾಂಡ್
Team Udayavani, Sep 16, 2024, 11:04 PM IST
ಶಿವಮೊಗ್ಗ: ʼರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರನನ್ನು ನಾನು ಎಂದೂ ಒಪ್ಪುವುದಿಲ್ಲ’ ಎಂದು ತಮ್ಮದೇ ಪಕ್ಷದ ನಾಯಕನ ವಿರುದ್ಧ ಅಸಮಾಧಾನ ಹೊರಹಾಕಿದ್ದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಯಾರು ಏನೇ ಹೇಳಿದರೂ ಕಾರ್ಯಕರ್ತರು ನನ್ನನ್ನು ಒಪ್ಪಿದ್ದಾರೆ. ನಾನು ರಾಜ್ಯಾಧ್ಯಕ್ಷನಾಗಿ ನನ್ನ ಕರ್ತವ್ಯ ನಿರ್ವಹಿಸುತ್ತಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ.
ನನ್ನನ್ನು ನಾನು ಯಾವತ್ತೂ ನಾಯಕ ಎಂದು ಗುರುತಿಸಿಕೊಳ್ಳುವ ಪ್ರಯತ್ನ ಮಾಡುತ್ತಿಲ್ಲ. ಯಾರು ಒಪ್ಪಿಕೊಳ್ಳಲಿ ಬಿಡಲಿ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಹಿರಿಯರು ಕೊಟ್ಟ ಜವಾಬ್ದಾರಿ ಯಶಸ್ವಿಯಾಗಿ ನಿರ್ವಹಿಸುತ್ತಿದ್ದೇನೆ. ಯಾರು ಏನೇ ಮಾತನಾಡಿದರೂ ನನ್ನ ಜವಾಬ್ದಾರಿ ನಿರ್ವಹಿಸುವ ಜೊತೆಗೆ ನಾನೇ ರಾಜ್ಯಾಧ್ಯಕ್ಷ ಎಂಬುದಂತೂ ಸತ್ಯ. ನನ್ನ ರಾಜ್ಯಾಧ್ಯಕ್ಷನಾಗಿ ಘೋಷಿಸಿದ್ದು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ, ಪಕ್ಷದ ಹೈಕಮಾಂಡ್ ಎಂದು ಬಿ.ವೈ ವಿಜಯೇಂದ್ರ ಸೋಮವಾರ ಪ್ರತಿಕ್ರಿಯೆ ನೀಡಿದ್ದಾರೆ.
ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ:
ಈ ವೇಳೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂ ವಿರೋಧಿ ಮನಸ್ಥಿತಿ ಬಂದಿದೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ನಡೆದಿದೆ. ಪೆಟ್ರೋಲ್ ಬಾಂಬ್ ಹಾಕಿ ಅಂಗಡಿಗಳ ಸುಟ್ಟು ಹಾಕಿದ್ದಾರೆ. ಪಾಂಡವಪುರದಲ್ಲಿನ ಆರ್ಎಸ್ಎಸ್ ಕಚೇರಿ ಮೇಲೆ ಪೊಲೀಸರ ದಾಳಿ ನಡೆದಿದೆ. ಸರ್ಕಾರದ ಕುಮ್ಮಕ್ಕಿನಿಂದ ಪೊಲೀಸರು ಹೀಗೆ ಮಾಡುತ್ತಿದ್ದಾರೆ. ಇದು ರಣಹೇಡಿ ಸರ್ಕಾರ ಎಂದು ಬಿ.ವೈ. ವಿಜಯೇಂದ್ರ ಹರಿಹಾಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindi ಹೇರಿದರೆ ಗೋಕಾಕ್ ಮಾದರಿ ಹೋರಾಟ: ಸಾ.ರಾ.ಗೋವಿಂದು
Virtual university ಸ್ಥಾಪಿಸಿ: ಚಿದಾನಂದ ಗೌಡ ಒತ್ತಾಯ..ಏನಿದು?
Distribution: ಕೆಎಸ್ಸಾರ್ಟಿಸಿ ನಿವೃತ್ತ ಸಿಬಂದಿಗೆ 224 ಕೋಟಿ ರೂ. ಪಾವತಿ
C.T.Ravi Case: ನಕ್ಸಲರು ರವಿಗೆ ಗುಂಡು ಹೊಡೆಯಲಿ ಎಂದು ಕರೆದೊಯ್ದರೇ?: ಆರ್.ಅಶೋಕ್
Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.