ತಾ.ಪಂ., ಜಿ.ಪಂ. ಕ್ಷೇತ್ರಗಳ ಸಂಖ್ಯೆ ಏರುಪೇರು
Team Udayavani, Jan 5, 2023, 7:35 AM IST
ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳು ಮತ್ತದರ ಭೌಗೋಳಿಕ ಗಡಿಗಳನ್ನು ಹಾಗೂ ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿ ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಕೊನೆಗೂ ಅಧಿಸೂಚನೆ ಹೊರಡಿಸಿದ್ದು, ಕ್ಷೇತ್ರಗಳ ಸಂಖ್ಯೆಯಲ್ಲಿ ಏರುಪೇರು ಆಗಿದೆ.
ಸೀಮಾ ನಿರ್ಣಯ ಆಯೋಗ ಸೋಮವಾರ ಪ್ರಕಟಿಸಿದಂತೆ ಜಿಲ್ಲಾ ಪಂಚಾಯತ್ ಕ್ಷೇತ್ರಗಳು 1,117 ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳು 3,649 ಆಗಿವೆ. 2021ರಲ್ಲಿ ರಾಜ್ಯ ಚುನಾವಣ ಆಯೋಗ ಪ್ರಕಟಿಸಿದ ಪ್ರಕಾರ 1,192 ಜಿ.ಪಂ ಹಾಗೂ 3,298 ತಾ.ಪಂ. ಕ್ಷೇತ್ರಗಳಿದ್ದವು. ಈಗ ಸೀಮಾ ನಿರ್ಣಯ ಆಯೋಗ ಹೊಸ ಅಧಿಸೂಚನೆ ಪ್ರಕಟಿಸಿದ ಮೇಲೆ 75 ಜಿ.ಪಂ. ಕ್ಷೇತ್ರಗಳು ಕಡಿಮೆ ಆಗಿದ್ದು, 351 ತಾ.ಪಂ. ಕ್ಷೇತ್ರಗಳು ಹೆಚ್ಚಾಗಿವೆ. ಆಕ್ಷೇಪಣೆಗಳಿಗೆ 15 ದಿನ ಕಾಲಾವಕಾಶವನ್ನು ಸೀಮಾ ನಿರ್ಣಯ ಆಯೋಗ ಕೊಟ್ಟಿದೆ. ಆಕ್ಷೇಪಣೆಗಳ ಪ್ರಮಾಣ ಹಾಗೂ ಬಗೆ ಹೇಗಿರುತ್ತದೆ ಎಂಬುದರ ಮೇಲೆ ಮುಂದಿನ ಪ್ರಕ್ರಿಯೆ ಅವಲಂಬಿತವಾಗಿದೆ.
ಜನಸಂಖ್ಯೆ ಮತ್ತು ಕಾಯ್ದೆಯಲ್ಲಿರುವ ಅವಕಾಶಗಳನ್ನು ಆಧರಿಸಿ ಕ್ಷೇತ್ರಗಳು ಹಾಗೂ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಲಾಗಿದೆ ಎಂದು ಸೀಮಾ ನಿರ್ಣಯ ಆಯೋಗ ಹೇಳುತ್ತಿದೆ. ಕ್ಷೇತ್ರಗಳು ಮತ್ತು ಸದಸ್ಯರ ಸಂಖ್ಯೆ ಅಂತಿಮಗೊಂಡ ಬಳಿಕ ಮೀಸಲಾತಿ ನಿಗದಿ ಪ್ರಕ್ರಿಯೆ ಪ್ರಾರಂಭಿಸಬೇಕಾಗುತ್ತದೆ. ಒಬಿಸಿ ವರ್ಗಗಳಿಗೆ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಮೀಸಲಾತಿ ನೀಡುವ ಸಂಬಂಧ ರಚಿಸಲಾಗಿರುವ ನ್ಯಾ. ಭಕ್ತವತ್ಸಲ ಆಯೋಗದ ವರದಿಯಂತೆ ತಾ.ಪಂ. ಮತ್ತು ಜಿ.ಪಂ, ಮೀಸಲಾತಿ ನಿಗದಿಪಡಿಸಬೇಕಾಗಿರುವುದರಿಂದ ಸರ್ಕಾರದ ಪಾಲಿಗೆ ಇದು ಸವಾಲಿನ ಕೆಲಸ ಆಗಿದೆ.
ಕಾಯ್ದೆಗೆ ತಿದ್ದುಪಡಿ ತರಲಾಗಿತ್ತು:
ತಾ.ಪಂ. ಹಾಗೂ ಜಿ.ಪಂ. ಕ್ಷೇತ್ರಗಳ ಜನಸಂಖ್ಯೆ ಬಗ್ಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಗೆ 2022ರ ಡಿಸೆಂಬರ್‌ನಲ್ಲಿ ತಿದ್ದುಪಡಿ ತರಲಾಗಿತ್ತು. ಸೆಕ್ಷನ್ 119ರಿಂದ 121 ಮತ್ತು ಸೆಕ್ಷನ್ 160ರಿಂದ 164ಕ್ಕೆ ತಿದ್ದುಪಡಿ ತಂದು 7 ಲಕ್ಷ ಜನಸಂಖ್ಯೆಗೆ ಕನಿಷ್ಠ 25 ಜಿ.ಪಂ. ಸದಸ್ಯರು, 7ರಿಂದ 9.5 ಲಕ್ಷ ಜನಸಂಖ್ಯೆಗೆ ಕನಿಷ್ಠ 28 ಜಿ.ಪಂ ಸದಸ್ಯರು ಇರಬೇಕು. ಅದೇ ರೀತಿ 2.30 ಲಕ್ಷ ಗ್ರಾಮೀಣ ಜನಸಂಖ್ಯೆಗೆ ಕನಿಷ್ಠ 12 ತಾ.ಪಂ ಸದಸ್ಯರು ಇರಬೇಕು ಎಂಬ ಆಂಶ ತರಲಾಗಿತ್ತು. ಸೆಕ್ಷನ್ 121 ಪ್ರಕಾರ 2 ಲಕ್ಷ ಗ್ರಾಮೀಣ ಜನಸಂಖ್ಯೆ ಹೊಂದಿರುವ ತಾಲೂಕುಗಳಲ್ಲಿ ಪ್ರತಿ 12 ಸಾವಿರಕ್ಕೆ ಕಡಿಮೆಯಿಲ್ಲದ ಜನಸಂಖ್ಯೆಗೆ ಒಬ್ಬ ತಾ.ಪಂ. ಸದಸ್ಯ ಇರಬೇಕು.
ಅದೇ ರೀತಿ 1 ಲಕ್ಷ ಮೀರಿದ ಹಾಗೂ 2 ಲಕ್ಷ ಮೀರದ ಗ್ರಾಮೀಣ ಜನಸಂಖ್ಯೆ ಹೊಂದಿರುವ ತಾಲೂಕುಗಳಲ್ಲಿ ಪ್ರತಿ 10 ಸಾವಿರ ಜನಸಂಖ್ಯೆಗೆ ಒಬ್ಬ ತಾ.ಪಂ. ಸದಸ್ಯರಂತೆ ಕನಿಷ್ಠ 11 ಚುನಾಯಿತ ಸದಸ್ಯರು ಇರಬೇಕು. 50ರಿಂದ 1 ಲಕ್ಷ ಜನಸಂಖ್ಯೆಗೆ ಒಂಭತ್ತು ಸದಸ್ಯರು. 50 ಸಾವಿರಕ್ಕಿಂತ ಕಡಿಮೆ ಜನಸಂಖ್ಯೆಗೆ ಏಳು ಮಂದಿ ಸದಸ್ಯರು ಇರಬೇಕು. ಅದೇ ರೀತಿ ಸೆಕ್ಷನ್ 160 ಪ್ರಕಾರ ಒಂದು ಜಿಲ್ಲೆಯಲ್ಲಿ 35ರಿಂದ 45 ಸಾವಿರ ಜನಸಂಖ್ಯೆಗೆ ಒಬ್ಬರಂತೆ ಒಂದು ಜಿÇÉೆಯಲ್ಲಿ 20 ಜಿ.ಪಂ. ಸದಸ್ಯರು ಇರಬೇಕು ಎಂದು ತಿದ್ದುಪಡಿ ತರಲಾಗಿತ್ತು. ಅದನ್ನು ಆಧರಿಸಿಯೇ ಈಗ ಕ್ಷೇತ್ರಗಳ ಗಡಿ ಮತ್ತು ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಲಾಗಿದೆ.
ಜಿ.ಪಂ. ತಾ.ಪಂ. ಕ್ಷೇತ್ರಗಳ ಭೌಗೋಳಿಕ ಪ್ರದೇಶ ಹಾಗೂ ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗಿದೆ. ಸಾರ್ವಜನಿಕರಿಂದ ಬರುವ ಆಕ್ಷೇಪಣೆಗಳನ್ನು ಆಲಿಸಿ ಅಂತಿಮ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗುವುದು. ಅದಾದ ಬಳಿಕ ಸರ್ಕಾರ ಮೀಸಲಾತಿ ನಿಗದಿಪಡಿಸಲಿದೆ.– ಎಂ. ಲಕ್ಷ್ಮೀನಾರಾಯಣ, ಸೀಮಾ ನಿರ್ಣಯ ಆಯೋಗ ಅಧ್ಯಕ್ಷ
ಸೀಮಾ ನಿರ್ಣಯ ಆಯೋಗ ಹೊರಡಿಸಿರುವ ಅಧಿಸೂಚನೆ ಪರಿಶೀಲಿಸಲಾಗುತ್ತಿದೆ. ಅಂತಿಮ ಮೀಸಲಾತಿ ಪ್ರಕಟಿಸಿದ ಬಳಿಕ ಚುನಾವಣ ಆಯೋಗದ ಕೆಲಸ ಪ್ರಾರಂಭವಾಗುತ್ತದೆ. ಮೀಸಲಾತಿ ಅಂತಿಮ ಯಾವಾಗ ಆಗುತ್ತದೆ, ಅದಾದ ನಂತರ ಪರಿಸ್ಥಿತಿ ಹೇಗಿರುತ್ತದೆ ಎಂದು ನೋಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. – ಎಸ್. ಹೊನ್ನಾಂಬ, ರಾಜ್ಯ ಚುನಾವಣ ಆಯೋಗ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
MUST WATCH
ಹೊಸ ಸೇರ್ಪಡೆ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.