ಪ್ರತಿ ಮನೆಗೂ ನಳ್ಳಿ ನೀರು ! “ಉದಯವಾಣಿ’ ಸಂವಾದದಲ್ಲಿ ಸಚಿವ ಈಶ್ವರಪ್ಪ ಘೋಷಣೆ
Team Udayavani, Jan 28, 2020, 6:45 AM IST
ಬೆಂಗಳೂರು: ರಾಜ್ಯದ ಪ್ರತಿ ಗ್ರಾಮಕ್ಕೂ ನಳ್ಳಿ ಮೂಲಕ ಕುಡಿಯುವ ನೀರು ಪೂರೈಕೆ ಮಾಡುವ “ಮನೆ ಮನೆಗೆ ಗಂಗೆ’ ಯೋಜನೆ ಕೇಂದ್ರ ಸರಕಾರದ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಈ ಮೂಲಕ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾ ರಿಸ ಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
“ಉದಯವಾಣಿ’ ಬೆಂಗಳೂರು ಆವೃತ್ತಿ ಕಚೇರಿಯಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಪಾಲ್ಗೊಂಡಿದ್ದ ಅವರು, ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆ ಜಾರಿಯಲ್ಲಿರುವ ಗ್ರಾಮಗಳಲ್ಲಿ “ಮನೆ ಮನೆಗೆ ಗಂಗೆ’ ಅನುಷ್ಠಾನ ಸುಲಭವಾಗಲಿದೆ. ಬಹುಗ್ರಾಮ ಕುಡಿಯುವ ನೀರು ಯೋಜನೆ ಜಾರಿಯಾಗದ ಗ್ರಾಮಗಳಲ್ಲಿ ಆದಷ್ಟು ಬೇಗ ಇದನ್ನು ಜಾರಿ ಗೊಳಿಸಲಾಗುವುದು ಎಂದರು.
ಕುಡಿಯುವ ನೀರಿನ ಘಟಕ ಖಾಸಗಿಗೆ
ಶುದ್ಧ ಕುಡಿಯುವ ನೀರಿನ ಘಟಕಗಳ ಅನುಷ್ಠಾನದಲ್ಲಿ ಅವ್ಯವಹಾರ ಆರೋಪ ಹಾಗೂ ನಿರ್ವಹಣೆ ಸರಿಯಾಗಿ ಆಗದೆ ಘಟಕಗಳು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ರಾಜ್ಯ ಸರಕಾರದಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸುವುದಿಲ್ಲ. ಬದಲಿಗೆ ಖಾಸಗಿ ಏಜೆನ್ಸಿಗೆ ವಹಿಸಲಾಗುವುದು. ಈಗಿರುವ ಘಟಕಗಳ ನಿರ್ವಹಣೆಗೂ ಹೊಸ ವ್ಯವಸ್ಥೆ ರೂಪಿಸಲಾಗುವುದು ಎಂದು ಹೇಳಿದರು. ಕಲುಷಿತ ನೀರು ಪೂರೈಕೆಯಾಗುತ್ತಿರುವ ಕಡೆ ಮಾತ್ರ ಶುದ್ಧ ಕುಡಿ ಯುವ ನೀರಿನ ಘಟಕ ಸ್ಥಾಪನೆ ಮಾಡ ಬೇಕು, ಎಲ್ಲ ಕಡೆ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಬಾರದು ಎಂದು ಸುಪ್ರೀಂ ಕೋರ್ಟ್ ಸಹ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.