ವಾಯುಭಾರ ಕುಸಿತ : ಅರಬಿ ಸಮುದ್ರದಲ್ಲಿ ಏಳಲಿದೆ “ತೌಕ್ತೇ’ ಚಂಡಮಾರುತ
Team Udayavani, May 12, 2021, 7:15 AM IST
ಹೊಸದಿಲ್ಲಿ: ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತ ಏಳುವ ಸಾಧ್ಯತೆಗಳಿವೆ. ಅದಕ್ಕೆ ಮಯನ್ಮಾರ್ “ತೌಕ್ತೇ’ ಎಂದು ಹೆಸರಿಟ್ಟಿದೆ.
ಅದು ಪ್ರಸಕ್ತ ವರ್ಷದ ಮೊದಲ ಚಂಡಮಾರುತವೂ ಹೌದು. 14ರಂದು ಅದು ರೂಪುಗೊಳ್ಳಲು ಶುರುವಾಗಲಿದ್ದು, ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ.
ಕರ್ನಾಟಕದ ಕರಾವಳಿ, ಕೇರಳ, ತಮಿಳುನಾಡು, ಲಕ್ಷದ್ವೀಪಗಳಲ್ಲಿ 16ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಮೇ 20ರಂದು ಗುಜರಾತ್ನ ಕಛ್ ಅಥವಾ ಆ ರಾಜ್ಯದ ಉತ್ತರ ಭಾಗ ವನ್ನು ಹಾದು ಒಮಾನ್ನತ್ತ ಸಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಚಂಡಮಾರುತ ವಿಭಾಗದ ಸುನೀತಾ ದೇವಿ ಹೇಳಿದ್ದಾರೆ. ಪಾಕ್ನ ದಕ್ಷಿಣ ಭಾಗದಲ್ಲೂ ಚಂಡಮಾರುತದ ಪ್ರಕೋಪ ಕಾಣಿ ಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.