ಶಿಕ್ಷಕರ ನೇಮಕಾತಿ: ನಾಳೆಯಿಂದ ಮೂಲ ದಾಖಲೆಗಳ ಪರಿಶೀಲನೆ
Team Udayavani, May 16, 2023, 7:22 AM IST
ಮಂಗಳೂರು/ ಉಡುಪಿ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಮೂಲ ದಾಖಲೆಗಳ ನೈಜತೆ ಪರಿಶೀಲನೆಗಾಗಿ ಅಭ್ಯರ್ಥಿಗಳು ಮೂಲ ಪ್ರಮಾಣ ಪತ್ರಗಳನ್ನು ಮೇ 17ರಿಂದ 19ರ ವರೆಗೆ ಸ್ವೀಕರಿಸಲಾಗುತ್ತದೆ.
ಮೇ 17ರಂದು ಸಮಾಜ ವಿಜ್ಞಾನ, 18ರಂದು ಗಣಿತ ವಿಜ್ಞಾನ, 19ರಂದು ಆಂಗ್ಲ ಹಾಗೂ ಜೀವಶಾಸ್ತ್ರ ವಿಷಯಕ್ಕೆ ಸಂಬಂಧಿಸಿದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಮೂಲ ದಾಖಲೆಗಳ ನೈಜತೆ ಪರಿಶೀಲನೆ ಬೆಳಗ್ಗೆ 10 ಗಂಟೆಗೆ ನಗರದ ಲೇಡಿಹಿಲ್ ವಿಕ್ಟೋರಿಯಾ ಪ್ರೌಢಶಾಲೆಯಲ್ಲಿ ನಡೆಯಲಿದೆ. ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಎಲ್ಲ ಪ್ರಮಾಣ ಪತ್ರಗಳ ದೃಢೀಕೃತ ಪ್ರತಿಯನ್ನು ದ್ವಿಪ್ರತಿಯಲ್ಲಿ ಹಾಜರು ಪಡಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಆರಂಭ
ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ 258 ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕಚೇರಿಯಲ್ಲಿ ಮೇ 15ರಿಂದಲೇ ಆರಂಭವಾಗಿದೆ.
ಮುಂದಿನ ಮೂರು ದಿನಗಳ ಕಾಲ ನಡೆಯಲಿದೆ. ಅಭ್ಯರ್ಥಿಗಳ ಮೂಲ ದಾಖಲೆ ಪರಿಶೀಲನೆ ಪ್ರಕ್ರಿಯೆ ಇದಾಗಿದ್ದು, ಅವರಿಂದ ಮಾಹಿತಿ ಜತೆಗೆ ದಾಖಲೆಯ ಮೂಲ ಪ್ರತಿ ಪಡೆಯುತ್ತಿದ್ದೇವೆ ಎಂದು ಡಿಡಿಪಿಐ ಗಣಪತಿ ಅವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chennai: ಲಾಟರಿ ಕಿಂಗ್ ಮಾರ್ಟಿನ್ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.