Teachers Village: ಚನ್ನಪಟ್ಟಣದ ಚಕ್ಕೆರೆಯಲ್ಲಿ ಮನೆಗೊಬ್ಬ ಶಿಕ್ಷಕರು!
ನಿವೃತ್ತರಾಗಿರುವ 200ಕ್ಕೂ ಹೆಚ್ಚು ಶಿಕ್ಷಕರು ಗ್ರಾಮದಲ್ಲಿ ವಾಸ
Team Udayavani, Sep 4, 2024, 11:57 PM IST
ರಾಮನಗರ: ಇಬ್ಬರು ಕುಲಪತಿಗಳು, ಹತ್ತಾರು ಪ್ರಾಧ್ಯಾಪಕರು, ನೂರಾರು ಶಿಕ್ಷಕರನ್ನು ಕೊಡುಗೆ ನೀಡುವ ಮೂಲಕ “ಶಿಕ್ಷಕರ ಗ್ರಾಮ’ಎಂಬ ಖ್ಯಾತಿಗೆ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮ ಭಾಜನವಾಗಿದೆ.
ಮೈಸೂರು ಮಾನಸ ಗಂಗೋತ್ರಿ ವಿ.ವಿ.ಯ ಕುಲಪತಿ ಆಗಿದ್ದ ಡಾ| ದೇ. ಜವರೇಗೌಡ ಮತ್ತು ಅವರ ಪುತ್ರ ಶಶಿಧರ್ ಪ್ರಸಾದ್ ಅವರ ಹುಟ್ಟೂರಾಗಿರುವ ಚಕ್ಕೆರೆ ಗ್ರಾಮ ಬಹುತೇಕ ಮನೆಗೊಬ್ಬ ಶಿಕ್ಷಕರನ್ನು ಹೊಂದಿದೆ. ಸ್ವಾತಂತ್ರ್ಯ ಪೂರ್ವದಿಂದಲೂ ಗ್ರಾಮದ ಜನತೆ ಶಿಕ್ಷಕ ವೃತ್ತಿಯಲ್ಲಿ ತೊಡಗಿದ್ದಾರೆ. ಗ್ರಾಮದ ಶೇ. 70 ಕುಟುಂಬ ಶಿಕ್ಷಕರಾಗಿದ್ದರೆ, ಶೇ. 30 ಕುಟುಂಬಗಳು ಕೃಷಿ ಸೇರಿ ಇತರ ಕ್ಷೇತ್ರಗಳಲ್ಲಿ ತೊಡಗಿವೆ.
ಪ್ರಮುಖ ಶಿಕ್ಷಕರು
ದೇ. ಜವರೇಗೌಡ, ಅವರ ಪುತ್ರ ಶಶಿಧರ್ ಪ್ರಸಾದ್, ಜಾನಪದ ವಿದ್ವಾಂಸ ಡಾ| ಚಕ್ಕೆರೆ ಶಿವಶಂಕರ್, ಸಿ.ಪಿ. ನಾಗರಾಜು ಸೇರಿದಂತೆ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವವರ ಪಟ್ಟಿ ಸಾಕಷ್ಟಿದೆ. ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ತಂದೆ ಪುಟ್ಟಮಾದೇಗೌಡರು ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಇವರೊಂದಿಗೆ ನಿವೃತ್ತರಾಗಿರುವ 200ಕ್ಕೂ ಹೆಚ್ಚು ಶಿಕ್ಷಕರು ಗ್ರಾಮದಲ್ಲಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳಾಗಿ ಸೇವೆ ಸಲ್ಲಿಸಿದವರು, ಸೇವೆ ಸಲ್ಲಿಸುತ್ತಿರುವವರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ.
“ನಮ್ಮ ಊರು ಶಿಕ್ಷಕರ ಐಕಾನ್ ಎನಿಸಿದೆ. ಗ್ರಾಮದಲ್ಲಿ ಸಾಕಷ್ಟು ಮಂದಿ ಶಿಕ್ಷಕರಾಗಿದ್ದಾರೆ. ಕೇವಲ ಶಿಕ್ಷಕರಷ್ಟೆ ಅಲ್ಲ ಬೇರೆ ಬೇರೆ ಕ್ಷೇತ್ರಕ್ಕೂ ಈ ಗ್ರಾಮ ಕೊಡುಗೆ ಕೊಟ್ಟಿದೆ. ಗ್ರಾಮದಲ್ಲಿ ಡಿಇಡಿ, ಬಿಇಡಿ, ಎಂಎ, ಎಂಫಿಲ್, ಪಿಎಚ್‌ಡಿ, ಎಂ.ಇಡಿ ಮೊದಲಾದ ಸ್ನಾತಕೋತ್ತರ ಪದವಿ ಪಡೆದುಕೊಂಡವರ ದಂಡೇ ಇದೆ.” -ಯೋಗೇಶ್ ಚಕ್ಕೆರೆ, ಶಿಕ್ಷಣ ಸಂಯೋಜಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.