ವಿಶ್ವಕಪ್ ಕದನ: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
Team Udayavani, Jun 27, 2019, 2:38 PM IST
ಮ್ಯಾಂಚೆಸ್ಟರ್: ವಿಶ್ವಕಪ್ ಕೂಟದ 34ನೇ ಪಂದ್ಯಕ್ಕೆ ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್ ಮೈದಾನ ಸಜ್ಜಾಗಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಈ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದೆ.
ಭಾರತ ತಂಡ ಈ ಪಂದ್ಯಕ್ಕೆ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಕಳೆದ ಪಂದ್ಯಕ್ಕೆ ಆಡಿದ ತಂಡವನ್ನೇ ಇಲ್ಲಿ ಕಣಕ್ಕಿಳಿಸಲಾಗಿದೆ. ಆದರೆ ವಿಂಡೀಸ್ ಎರಡು ಬದಲಾವಣೆ ಮಾಡಿದೆ. ಇವಿನ್ ಲೂಯಿಸ್ ಬದಲು ಸುನೀಲ್ ಆಂಬ್ರಿಸ್ ಸ್ಥಾನ ಪಡೆದರೆ, ಆಶ್ಲೆ ನರ್ಸ್ ಬದಲು ಫ್ಯಾಭಿನ್ ಅಲೆನ್ ತಂಡ ಸೇರಿದ್ದಾರೆ.
ಭಾರತ ಈ ಪಂದ್ಯ ಗೆದ್ದರೆ ತನ್ನ ಸೆಮಿ ಹಾದಿಯನ್ನು ಇನ್ನಷ್ಟು ಸುಲಭಗೊಳಿಸಲಿದೆ. ಆದರೆ ವೆಸ್ಟ್ ಇಂಡೀಸ್ ಈ ಪಂದ್ಯ ಸೋತರೆ ಸೆಮಿ ರೇಸ್ ನಿಂದಲೇ ಹೊರ ಬೀಳಲಿದೆ.
ಈ ವಿಶ್ವಕಪ್ ಕೂಟದಲ್ಲಿ ಈ ಮೈದಾನದಲ್ಲಿ ಇದುವರೆಗೆ ಮೂರು ಪಂದ್ಯಗಳು ನಡೆದಿದ್ದು, ಮೂರು ಹೈ ಸ್ಕೋರಿಂಗ್ ಪಂದ್ಯಗಳಾಗಿವೆ. ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು 336, 397 ಮತ್ತು 291 ರನ್ ಗಳಿಸಿವೆ. ವಿಶೇಷವೇನೆಂದರೆ ಈ ಮೂರು ಪಂದ್ಯಗಳನ್ನು ಮೊದಲು ಬ್ಯಾಟಿಂಗ್ ಮಾಡಿದ ತಂಡವೇ ಜಯಿಸಿವೆ.
ತಂಡಗಳು
ಭಾರತ: ಲೋಕೇಶ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ (ನಾ), ವಿಜಯ್ ಶಂಕರ್, ಮಹೇಂದ್ರ ಸಿಂಗ್ ಧೋನಿ, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಯುಜುವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ.
ವೆಸ್ಟ್ ಇಂಡೀಸ್: ಕ್ರಿಸ್ ಗೇಲ್, ಸುನೀಲ್ ಆಂಬ್ರಿಸ್, ಶಾಯ್ ಹೋಪ್, ನಿಕೋಲಸ್ ಪೂರನ್, ಶಿಮ್ರನ್ ಹೆತ್ಮೈರ್, ಜೇಸನ್ ಹೋಲ್ಡರ್ (ನಾ), ಕಾರ್ಲೊಸ್ ಬ್ರಾಥ್ ವೇಟ್, ಫ್ಯಾಭಿನ್ ಆಲೇನ್, ಕೆಮರ್ ರೋಚ್, ಶೆಲ್ಡನ್ ಕಾಟ್ರೆಲ್, ಒಶಾನೆ ಥೋಮಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.