ಬಿಜೆಪಿ ವಿರುದ್ಧ ಹೋರಾಟ: ಚಂದ್ರಶೇಖರ್‌ಗೆ ಉದ್ಧವ್ ಬೆಂಬಲ
Team Udayavani, Feb 16, 2022, 9:33 PM IST
ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ, ಟಿಆರ್‌ಎಸ್ ನಾಯಕ ಕೆ.ಚಂದ್ರಶೇಖರ್ ರಾವ್ ಅವರ ಬಿಜೆಪಿ ವಿರುದ್ಧದ ಹೋರಾಟಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ, ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಪೂರ್ಣ ಬೆಂಬಲ ನೀಡಿದ್ದಾರೆ.
ಬಿಜೆಪಿಯ ಜನವಿರೋಧಿ ನೀತಿಯ ವಿರುದ್ಧ ಹೋರಾಡಲು ತನಗೆ ಬೆಂಬಲ ನೀಡಬೇಕೆಂದು ಚಂದ್ರಶೇಖರ್ ರಾವ್ ಕೇಳಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ತಾವೇ ಖುದ್ದಾಗಿ ಕರೆ ಮಾಡಿದ ಉದ್ಧವ್, ಜನರನ್ನು ಬೇರೆಬೇರೆ ಮಾಡುವ ಬಿಜೆಪಿ ನೀತಿಗಳ ವಿರುದ್ಧ ಹೋರಾಟ ಮಾಡಲು ನಿರ್ಧರಿಸಿರುವುದು ಸಕಾಲಿಕ, ಒಕ್ಕೂಟ ವ್ಯವಸ್ಥೆಯ ಸ್ಫೂರ್ತಿಯನ್ನು ಎತ್ತಿಹಿಡಿಯಬೇಕಾದರೆ ಇದು ಅಗತ್ಯ ಎಂದಿದ್ದಾರೆ.
ಇದನ್ನೂ ಓದಿ:2 ತಿಂಗಳಲ್ಲಿ 4ನೇ ಬಾರಿ ವಿಮಾನ ಇಂಧನ ಬೆಲೆಯೇರಿಕೆ!
ಹಾಗೆಯೇ ಮುಂಬೈಗೆ ಚಂದ್ರಶೇಖರ್‌ರನ್ನು ಆಹ್ವಾನಿಸಿದ್ದಾರೆ, ಅಲ್ಲೇ ಮುಂದಿನ ಹೋರಾಟದ ಮಾರ್ಗವನ್ನು ನಿರ್ಧರಿಸುವುದಾಗಿ ಉದ್ಧವ್ ತಿಳಿಸಿದ್ದಾರೆ. ಇದಕ್ಕೂ ಮುನ್ನ ಮಾಜಿ ಪ್ರಧಾನಿ ದೇವೇಗೌಡರು ಕೂಡ, ಚಂದ್ರಶೇಖರ್‌ಗೆ ಬೆಂಬಲ ನೀಡಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.