ಕಣಿವೆಗೆ ಪ್ರಾಂತ್ಯ ಮರುವಿಂಗಡಣಾ ಆಯೋಗ ಭೇಟಿ
6 ತಿಂಗಳಿಗೊಮ್ಮೆ ಸ್ಥಳಾಂತರಗೊಳ್ಳುತ್ತಿತ್ತು. ಹಾಗಾಗಿ, ಎರಡೂ ಕಡೆ ಅಧಿಕಾರಿಗಳಿಗೆ ವಸತಿ ಸೌಕರ್ಯ ನೀಡಲಾಗಿತ್ತು.
Team Udayavani, Jul 1, 2021, 10:36 AM IST
ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಸದ್ಯದಲ್ಲೇ ಪ್ರಾಂತ್ಯಗಳ ಮರುವಿಂಗಡಣಾ ಕಾರ್ಯ ಆರಂಭವಾಗಲಿರುವ ಹಿನ್ನೆಲೆ ಯಲ್ಲಿ ನವದೆಹಲಿಯಲ್ಲಿರುವ ಪ್ರಾಂತ್ಯ ಮರುವಿಂಗಡಣಾ ಆಯೋಗದ ಸದಸ್ಯರು ಜು. 6ರಿಂದ 9ರವರೆಗೆ ಆ ರಾಜ್ಯಕ್ಕೆ ನಾಲ್ಕು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ.
ಈ ವೇಳೆ, ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ರಾಜಕೀಯ ನಾಯಕರು, ಜಿಲ್ಲಾ ಮಟ್ಟದ ಚುನಾವಣಾಧಿಕಾರಿಗಳು ಅಥವಾ ಜಿಲ್ಲಾಧಿಕಾರಿ ಗಳನ್ನು ಹಾಗೂ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ, ಸಲಹೆ ಹಾಗೂ ಅಭಿಪ್ರಾಯಗಳನ್ನು ಪಡೆಯಲಿದ್ದಾರೆ. ಅವೆಲ್ಲವನ್ನೂ ಸಮೀಕ್ಷೆಯ ಪ್ರಾಥಮಿಕ ವರದಿಗಳ ರೂಪದಲ್ಲಿ ಪರಿಗಣಿಸಿ, ಹೊಸ ವಿಧಾನಸಭಾ ಕ್ಷೇತ್ರಗಳನ್ನು ರಚಿಸಲಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.
ವಸತಿ ತೆರವಿಗೆ ಗಡುವು: ಕಣಿವೆ ರಾಜ್ಯದಲ್ಲಿ 149 ವರ್ಷ ಗಳಿಂದ ಜಾರಿಯಲ್ಲಿದ್ದ ದರ್ಬಾರ್ ಸ್ಥಳಾಂತರ ಪದ್ಧತಿಗೆ ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತಿಲಾಂ ಜಲಿ ನೀಡಿದ್ದಾರೆ. ಹಾಗಾಗಿ, ಇಲ್ಲಿನ ಎರಡು ರಾಜಧಾನಿಗಳಾದ ಜಮ್ಮು, ಶ್ರೀನಗರದಲ್ಲಿ ನೀಡಲಾಗಿರುವ ವಸತಿಗಳನ್ನು 3 ವಾರ ದಲ್ಲಿ ತೆರವುಗೊಳಿಸುವಂತೆ ಎಲ್ಲಾ ಸಚಿವಾಲಯಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ರಾಜ್ಯದ ರಾಜಧಾನಿ 6 ತಿಂಗಳಿಗೊಮ್ಮೆ ಜಮ್ಮುವಿನಿಂದ ಶ್ರೀನಗರಕ್ಕೆ ಹಾಗೂ ಶ್ರೀನಗರದಿಂದ ಜಮ್ಮು ವಿಗೆ ಸ್ಥಳಾಂತರಗೊಳ್ಳುತ್ತಿತ್ತು. ಅಧಿಕಾರಿ ವರ್ಗವೂ 6 ತಿಂಗಳಿಗೊಮ್ಮೆ ಸ್ಥಳಾಂತರಗೊಳ್ಳುತ್ತಿತ್ತು. ಹಾಗಾಗಿ, ಎರಡೂ ಕಡೆ ಅಧಿಕಾರಿಗಳಿಗೆ ವಸತಿ ಸೌಕರ್ಯ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.