ರಾಜ್ಯ ನಾಯಕರ ತೆಕ್ಕೆಯಿಂದ ಸಂಘಟನೆಗೆ ಹೊರಳಿದ ಕಮಲ


Team Udayavani, May 8, 2019, 3:09 AM IST

bjp-logo

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯನ್ನು ಬಿಜೆಪಿ ಈ ಬಾರಿ ಪ್ರಭಾವಿ ನಾಯಕರ ಮುಂದಾಳತ್ವಕ್ಕಿಂತ ಸಂಘಟನೆ ಕೇಂದ್ರಿತವಾಗಿ ಎದುರಿಸಿದೆ. ಆ ಮೂಲಕ ಕೆಲವೇ ನಾಯಕರ ನಿಯಂತ್ರಣದಲ್ಲಿದ್ದಂತಿದ್ದ ಪಕ್ಷವನ್ನು ಮತ್ತೆ ಸಂಘಟನೆಯ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾದಂತಿದೆ. ಚುನಾವಣೆಯ ಫ‌ಲಿತಾಂಶ ಏನೇ ಇದ್ದರೂ ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಇದು ಮಹತ್ತರ ಹೆಜ್ಜೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ದಕ್ಷಿಣ ಭಾರತದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಬಿಜೆಪಿಗೆ ಉತ್ತಮ ನೆಲೆ ಇದೆ. ಒಂದೂವರೆ ದಶಕದಿಂದೀಚೆಗೆ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಹೆಚ್ಚು ಸ್ಥಾನ ಪಡೆಯುತ್ತಿದ್ದು, ಬಿಜೆಪಿಯ ಪ್ರಮುಖ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ. ರಾಜ್ಯದಲ್ಲಿ ಪಕ್ಷ ತಳಮಟ್ಟದಿಂದ ಬೇರೂರಲು ಕೇಂದ್ರ ಸಚಿವರಾಗಿದ್ದ ಅನಂತ ಕುಮಾರ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸೇರಿ ಹಲವು ನಾಯಕರ ಪರಿಶ್ರಮ ದೊಡ್ಡದಿತ್ತು.

ಆ ಕಾರಣಕ್ಕೆ ಇಬ್ಬರು ನಾಯಕರು ರಾಜ್ಯ ಬಿಜೆಪಿಯ ಅಗ್ರ ನಾಯಕರಾಗಿ ಬೆಳೆದು ನಿಂತರು. ಮುಂದೆ ಇದೇ ಕಾರಣಕ್ಕೆ ಇತರ ನಾಯಕರು, ಮುಖಂಡರು ಅನಂತ ಕುಮಾರ್‌ ಹಾಗೂ ಯಡಿಯೂರಪ್ಪ ಗುಂಪುಗಳ ಪೈಕಿ ಒಂದರಲ್ಲಿ ಗುರುತಿಸಿಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಿತ್ತು.

ಎರಡೂ ಗುಂಪುಗಳಲ್ಲಿ ಗುರುತಿಸಿಕೊಳ್ಳದವರು ಸ್ವತಂತ್ರವಾಗಿ ಬೆಳೆಯಲು ಸಾಧ್ಯವೇ ಇಲ್ಲ ಎಂಬಂತಾಗಿತ್ತು. ಕ್ರಮೇಣ ಪಕ್ಷದ ಜತೆಗೆ ನಾಯಕರ ವೈಯಕ್ತಿಕ ವರ್ಚಸ್ಸು, ನಾಯಕತ್ವವೇ ಮುಖ್ಯವಾಗುತ್ತಾ ಬಂದು ಅವರ ನಿಲುವು, ನಿರ್ಧಾರಗಳೇ ನಿರ್ಣಾಯಕ ಎಂಬ ಸ್ಥಿತಿಗೆ ತಲುಪಿತ್ತು ಎನ್ನುತ್ತಾರೆ ಬಿಜೆಪಿಯ ಹಿರಿಯ ನಾಯಕರೊಬ್ಬರು.

ಕೇಡರ್‌ ಆಧಾರಿತ ಪಕ್ಷ: ಬಿಜೆಪಿಯು ಕೇಡರ್‌ ಆಧಾರಿತ ಪಕ್ಷ. ವ್ಯಕ್ತಿಗಿಂತ ಪಕ್ಷ ಮುಖ್ಯ ಎಂಬುದು ಬಿಜೆಪಿ ಸಿದ್ಧಾಂತ. ಇಷ್ಟಾದರೂ ಪಕ್ಷ ಸಂಘಟನೆ, ರಾಜಕೀಯ ಉನ್ನತಿಗಾಗಿ ರಾಜ್ಯದಲ್ಲಿ ಕೆಲ ನಾಯಕರು ಸ್ವತಂತ್ರ ನಿರ್ಧಾರಗಳನ್ನು ಕೈಗೊಂಡರೂ ಹಲವು ಸಂದರ್ಭದಲ್ಲಿ ಪುರಸ್ಕರಿಸಲಾಗುತ್ತಿತ್ತು. ಇದರಿಂದ ಇತರ ನಾಯಕರು ಹಿಂಬಾಲಕರಾಗಿಯೇ ಗುರುತಿಸಿಕೊಳ್ಳಲಾರಂಭಿಸಿದ್ದರು. ಇದು ಬಿಜೆಪಿಯ ಜಾಯಮಾನಕ್ಕೆ ಒಪ್ಪುವ ಬೆಳವಣಿಗೆಯಾಗಿರಲಿಲ್ಲ. ಅಲ್ಲದೇ ಸಂಘಟನೆ ಸೊರಗುವ ಆತಂಕವೂ ಇತ್ತು.

ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸುತ್ತಿದ್ದ ವರಿಷ್ಠರು, ರಾಜ್ಯದಲ್ಲಿ ಪಕ್ಷವನ್ನು ಮತ್ತೆ ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದರು. ಈ ನಡುವೆ ಅನಂತ ಕುಮಾರ್‌ ಅಕಾಲಿಕವಾಗಿ ನಿಧನರಾದರು. ನಂತರ ಅವರ ಪತ್ನಿ ತೇಜಸ್ವಿನಿ ಅನಂತ ಕುಮಾರ್‌ ಬೆಂಗಳೂರು ದಕ್ಷಿಣ ಕ್ಷೇತ್ರ ಅಭ್ಯರ್ಥಿ ಎಂದು ನಿರೀಕ್ಷಿಸಲಾಗಿತ್ತು. ತೇಜಸ್ವಿನಿ ಸಹ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ರಾಜ್ಯ ಕೋರ್‌ ಕಮಿಟಿಯೂ ಅವರ ಹೆಸರನ್ನು ಶಿಫಾರಸು ಮಾಡಿತ್ತು.

ಆದರೂ, ವರಿಷ್ಠರು ಅಂತಿಮವಾಗಿ ತೇಜಸ್ವಿ ಸೂರ್ಯ ಅವರನ್ನು ಕಣಕ್ಕಿಳಿಸಿದರು. ಬಳಿಕ ತೇಜಸ್ವಿನಿ ಅವರನ್ನು ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ನೇಮಿಸಲಾಯಿತು. ಅಂದರೆ ಸಾಮಾನ್ಯ ಕಾರ್ಯಕರ್ತರಂತೆ ಸಂಘಟನೆಯಲ್ಲಿ ತೊಡಗಿಸಿಕೊಂಡು ಅದರ ಆಧಾರದ ಮೇಲೆ ಸ್ಥಾನಮಾನ ಪಡೆಯಲಿ ಎಂಬ ಸಂದೇಶವನ್ನು ವರಿಷ್ಠರು ಸ್ಪಷ್ಟವಾಗಿ ರವಾನಿಸಿದ್ದಾರೆ ಎಂಬುದು ರಾಜ್ಯ ಬಿಜೆಪಿ ಹಿರಿಯ ನಾಯಕರೊಬ್ಬರ ಅನಿಸಿಕೆ.

ಅಭ್ಯರ್ಥಿ ಆಯ್ಕೆಯಲ್ಲೂ ದಿಟ್ಟ ನಿಲುವು: ಇನ್ನೊಂದೆಡೆ, ಯಡಿಯೂರಪ್ಪ ಅವರು ಪ್ರಭಾವಿ ನಾಯಕರಾಗಿ ಮುಂದುವರಿದಿದ್ದರೂ ಅವರ ಎಲ್ಲ ನಿರ್ಧಾರಗಳನ್ನು ಹೈಕಮಾಂಡ್‌ ಒಪ್ಪುವುದಿಲ್ಲ ಎಂಬ ಸಂದೇಶವನ್ನು ಆಗಾಗ್ಗೆ ರವಾನಿಸುತ್ತಿತ್ತು. ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಆಯ್ಕೆ ವೇಳೆ ಇದು ಸ್ಪಷ್ಟವಾಗಿತ್ತು. ಯಡಿಯೂರಪ್ಪ ನೇತೃತ್ವದ ಕೋರ್‌ ಕಮಿಟಿ ಶಿಫಾರಸು ಮಾಡಿದ್ದ ಬಹುತೇಕರಿಗೆ ಟಿಕೆಟ್‌ ನೀಡಿದರೂ ಕೆಲವರಿಗೆ ನಿರಾಕರಿಸಲಾಗಿತ್ತು. ರಾಜ್ಯದ ಹಾಲಿ ಸಂಸದರಿಗೆಲ್ಲಾ ಟಿಕೆಟ್‌ ಕೊಟ್ಟರೂ, ಕೊಪ್ಪಳ ಸಂಸದ ಕರಡಿ ಸಂಗಣ್ಣ ಹೆಸರು ಮೊದಲ ಪಟ್ಟಿಯಲ್ಲಿರಲಿಲ್ಲ.

ಕೆಲ ದಿನಗಳ ಬಳಿಕ ಟಿಕೆಟ್‌ ಅಂತಿಮಗೊಳಿಸಲಾಗಿತ್ತು. ಚಿಕ್ಕೋಡಿ ಕ್ಷೇತ್ರದಿಂದ ಮಾಜಿ ಸಚಿವ ಉಮೇಶ್‌ ಕತ್ತಿ ಸಹೋದರ ರಮೇಶ್‌ ಕತ್ತಿಗೆ ಟಿಕೆಟ್‌ ನೀಡಬೇಕು ಎಂಬ ಯಡಿಯೂರಪ್ಪ ಒತ್ತಡದ ಹೊರತಾಗಿಯೂ ಅಣ್ಣಾ ಸಾಹೇಬ ಜೊಲ್ಲೆಗೆ ಟಿಕೆಟ್‌ ನೀಡಿದ್ದರು. ನಂತರ, ಯಡಿಯೂರಪ್ಪ ಅವರು ರಮೇಶ್‌ ಕತ್ತಿ, ಉಮೇಶ್‌ ಕತ್ತಿ ಅವರನ್ನು ಸಮಾಧಾನಪಡಿಸಬೇಕಾಯಿತು.

ಲೋಕಸಭಾ ಚುನಾವಣೆಗೆ ಮೋದಿ ಪ್ರಚಾರ ಸಭೆ ಹಾಗೂ ಅಮಿತ್‌ ಶಾ ಪ್ರಚಾರದ ಹೊರತಾಗಿ ಉಳಿದ ನಾಯಕರ ಪ್ರಚಾರಕ್ಕೆ ವಿಶೇಷ ಆದ್ಯತೆ ಇರಲಿಲ್ಲ. ಯಡಿಯೂರಪ್ಪ ನೇತೃತ್ವದಲ್ಲಿ ಪ್ರಚಾರ ಎಂಬಂತೆ ಎಲ್ಲಿಯೂ ಬಿಂಬಿತವಾಗಲಿಲ್ಲ. ಬದಲಿಗೆ ರಾಜ್ಯಾಧ್ಯಕ್ಷರಾಗಿ ಅವರು ಎಲ್ಲೆಡೆ ಪ್ರಚಾರ ನಡೆಸಿದರು. ಇತರ ನಾಯಕರು ತಮಗೆ ಗೊತ್ತುಪಡಿಸಿದ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಸೀಮಿತರಾದರು. ಈ ಎಲ್ಲ ದಿಟ್ಟ ನಿಲುವುಗಳ ಮೂಲಕ ವರಿಷ್ಠರು ವ್ಯಕ್ತಿಗಿಂತ ಪಕ್ಷ ಸಂಘಟನೆ ಮುಖ್ಯ ಎಂಬ ಸಂದೇಶವನ್ನು ಸ್ಪಷ್ಟವಾಗಿ ಸಾರಿದ್ದಾರೆ.

ಇದರ ಸುಳಿವು ಸಿಕ್ಕಿದೆ ಎಂಬಂತೆ ಯಡಿಯೂರಪ್ಪ ಅವರು ಪ್ರತಿಪಕ್ಷ ಹಾಗೂ ರಾಜ್ಯಾಧ್ಯಕ್ಷ ಎರಡೂ ಜವಾಬ್ದಾರಿ ನಿರ್ವಹಿಸುವುದು ಕಷ್ಟ ಎಂದು ಹೇಳಿದ್ದಾರೆ. ಆ ಮೂಲಕ ರಾಜ್ಯಾಧ್ಯಕ್ಷ ಸ್ಥಾನ ಬಿಟ್ಟು ಕೊಡುವ ಇಂಗಿತ ತೋರಿದ್ದಾರೆ. ಇವೆಲ್ಲಾ ಬೆಳವಣಿಗೆಗಳು ಸಂಘಟನೆ ಕೇಂದ್ರಿತವಾಗಿ ಪಕ್ಷ ಬೆಳವಣಿಗೆಗೆ ಹೊಂದಲು ಸಹಕಾರಿಯಾಗಲಿದೆ ಎಂದು ಉನ್ನತ ನಾಯಕರೊಬ್ಬರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರೆಡ್ಡಿ ಸಹೋದರರ ಪ್ರಭಾವಳಿ ಗೌಣ: ದಶಕದ ಹಿಂದೆ ಉಚ್ಛಾ†ಯ ಸ್ಥಿತಿಯಲ್ಲಿದ್ದ ಮಾಜಿ ಸಚಿವರಾದ ಜನಾರ್ಧನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಸಹೋದರರ ಪ್ರಭಾವಳಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಂಪೂರ್ಣ ಗೌಣವಾಗಿತ್ತು. ಎಲ್ಲ ನಾಯಕರು ಪಕ್ಷದ ಕಾರ್ಯಕರ್ತರಂತೆ ಕಾರ್ಯ ನಿರ್ವಹಿಸಿದರೆ ಹೊರತು ಎಲ್ಲಿಯೂ ಪ್ರಧಾನವಾಗಿ ಕಾಣಿಸಿಕೊಳ್ಳಲಿಲ್ಲ. ಮಾಜಿ ಸಚಿವ ಬಿ.ಶ್ರೀರಾಮುಲು ಸಹ ತಾರಾ ಪ್ರಚಾರಕ್ಕಷ್ಟೇ ಸೀಮಿತರಾದರು. ಆ ಮೂಲಕ ಬಳ್ಳಾರಿ ಹಾಗೂ ಸುತ್ತಮುತ್ತಲ ಪ್ರದೇಶಗಳ ಮೇಲಿದ್ದ ಅವರ ಹಿಡಿತ ತಪ್ಪಿಸುವುದರ ಜತೆಗೆ ಪಕ್ಷದಲ್ಲೂ ಕೆಲ ಚಟುವಟಿಕೆಗಷ್ಟೇ ಸೀಮಿತಗೊಳಿಸಿದ್ದು ಗಮನಾರ್ಹ ಬೆಳವಣಿಗೆ.

* ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.