ಬಣ ತೊಡಕು; ಅನರ್ಹ ಶಾಸಕರಿಗೆ ಟಿಕೆಟ್ ನೀಡುವ ಗೊಂದಲ
Team Udayavani, Oct 1, 2019, 6:25 AM IST
ಬೆಂಗಳೂರು: ಹದಿನೈದು ಕ್ಷೇತ್ರಗಳಲ್ಲಿ ನಡೆಯುವ ಮುಂದಿನ ಉಪಚುನಾವಣೆಯಲ್ಲಿ ಅನರ್ಹಗೊಂಡ ಶಾಸಕರಿಗೆ ಟಿಕೆಟ್ ಸಿಗುವುದೋ, ಇಲ್ಲವೋ ಎಂಬ ಗೊಂದಲದ ನಡುವೆಯೇ, ಎಲ್ಲರಿಗೂ “ಟಿಕೆಟ್ ಗ್ಯಾರಂಟಿ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಭಯ ನೀಡಿದ್ದಾರೆ. ಆದರೆ ಅನರ್ಹ ಶಾಸಕರು ಬಿಜೆಪಿ ಸೇರಿದ ಅನಂತರವಷ್ಟೇ “ಟಿಕೆಟ್ ವಿಚಾರ’ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳುವುದರೊಂದಿಗೆ ಗೊಂದಲ ಮತ್ತೆ ಮುಂದುವರೆದಿದೆ.
ಇದರಿಂದಾಗಿ ಕಾಂಗ್ರೆಸ್-ಜೆಡಿಎಸ್ ಸರಕಾರ ಪತನಕ್ಕೆ ಕಾರಣ ರಾದ ಮುಖಂಡರು ಈಗ ಅತಂತ್ರಕ್ಕೆ ಸಿಲುಕಿಕೊಂಡಿದ್ದಾರೆ. ಉಪ ಚುನಾವಣೆಯಲ್ಲಿ ಅನರ್ಹರಿಗೆ ಟಿಕೆಟ್ ನೀಡುವ ಬಗ್ಗೆ ನಿರ್ಧಾರ ಆಗಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ ರಾವ್ ಹಾಗೂ ಮಾಜಿ ಸಚಿವ ಉಮೇಶ್ ಕತ್ತಿ ನೀಡಿರುವ ಹೇಳಿಕೆ ಅನರ್ಹ ಶಾಸಕರನ್ನು ಆತಂಕಕ್ಕೆ ದೂಡಿರುವ ನಡುವೆಯೇ, ಶಿಕಾರಿಪುರದಲ್ಲಿ ಸೋಮವಾರ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಎಲ್ಲ ಅನರ್ಹ ಶಾಸಕರಿಗೆ ಟಿಕೆಟ್ ನೀಡುವ ವಾಗ್ಧಾನ ಮಾಡಿದ್ದಾರೆ. “ಯಾರ ಹೇಳಿಕೆಗೂ ತಲೆಕೆಡಿಸಿಕೊಳ್ಳಬೇಡಿ. ಅವರಿಗೆ ಟಿಕೆಟ್ ನೀಡಲು ಪಕ್ಷದ ವರಿಷ್ಠರು ನಿರ್ಧರಿಸಿದ್ದಾರೆ’ ಎಂದರು.
ಇದಾದ ಕೆಲವೇ ಗಂಟೆಗಳಲ್ಲಿ ತುಮಕೂರಿನಲ್ಲಿ ಮಾತ ನಾಡಿದ ಡಿಸಿಎಂ ಸವದಿ, “ಅನರ್ಹ ಶಾಸಕರಿಗೆ ಟಿಕೆಟ್ ನೀಡುವ ಕುರಿತು ಈಗ ಪ್ರಸ್ತಾವ ಇಲ್ಲ, ಸುಪ್ರೀಂ ಕೋರ್ಟ್ ತೀರ್ಪು ಬಂದ ಮೇಲೆ ಅವರು ಯಾವ ಪಕ್ಷಕ್ಕೆ ಹೋಗಬೇಕು ಎಂದು ತೀರ್ಮಾನವಾಗಬೇಕು. ಬಿಜೆಪಿಗೆ ಸೇರಲು ಬಯಸಿದರೆ, ಪಕ್ಷದ ವರಿಷ್ಠರು ಅವರಿಗೆ ಟಿಕೆಟ್ ನೀಡುವ ಕುರಿತು ತೀರ್ಮಾನಿಸುತ್ತಾರೆ’ ಎಂದು ಹೇಳಿದರು.
ಪಕ್ಷದ ಒಂದು ಬಣದಲ್ಲಿ, ಅನರ್ಹ ಶಾಸಕರ ಬಗ್ಗೆ ಹೊಸ ರೀತಿಯ ವಾದ ಕೇಳಿ ಬರುತ್ತಿದ್ದು, ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ಬಿಟ್ಟು ಹೊರಗೆ ಬಂದಿದ್ದು, ಯಾವುದೇ ಪಕ್ಷದ ಹಂಗಿನಲ್ಲಿಲ್ಲ. ಅವರು ಬಿಜೆಪಿ ಸೇರಿದರೆ ಅವರಿಗೆ ಟಿಕೆಟ್ ನೀಡುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಬಹುದೇ ಹೊರತು ಅದಕ್ಕೆ ಮೊದಲು ಟಿಕೆಟ್ ನೀಡಬಾರದು ಎನ್ನುವುದು ಈ ಬಣದ ವಾದ.
ಖಾತರಿಗಾಗಿ ಪಟ್ಟು
ಬಿಜೆಪಿ ನಾಯಕರ ಹೇಳಿಕೆಗಳಿಂದ ಗೊಂದಲಕ್ಕೆ ಸಿಲುಕಿರುವ ಅನರ್ಹ ಶಾಸಕರು ಸೋಮವಾರ ರಮೇಶ್ ಜಾರಕಿಹೊಳಿ ಅವರ ನಿವಾಸದಲ್ಲಿ ಸಭೆ ಸೇರಿದರು. ಅಲ್ಲಿ ಉಪ ಮುಖ್ಯಮಂತ್ರಿ ಡಾ| ಅಶ್ವತ್ಥ್ ನಾರಾಯಣ ಅವರೂ ಭಾಗವಹಿಸಿದ್ದರು. ತಮ್ಮ ಬಗ್ಗೆ ಬಿಜೆಪಿ ನಾಯಕರು ಆಡುತ್ತಿರುವ ಮಾತುಗಳಿಗೆ ಕಡಿವಾಣ ಹಾಕುವಂತೆ ಮುಖ್ಯಮಂತ್ರಿಗೆ ತಿಳಿಸಲು ಆಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಅನರ್ಹರ ಶಾಸಕರ ಪ್ರಕಾರ ಮಹೇಶ್ ಕುಮಠಳ್ಳಿ, ಬೈರತಿ ಬಸವರಾಜ್ ಹಾಗೂ ಎಚ್. ವಿಶ್ವನಾಥ್ ಅವರಿಗೆ ಟಿಕೆಟ್ ನೀಡುವ ಬಗ್ಗೆ ಬಿಜೆಪಿಯಲ್ಲಿ ಅಪಸ್ವರ ಇದೆ ಎಂದು ಹೇಳಲಾಗುತ್ತಿದೆ. ಅದೇ ಕಾರಣಕ್ಕಾಗಿ ಎಲ್ಲರಿಗೂ ಟಿಕೆಟ್ ನೀಡುವ ಬಗ್ಗೆ ಮೊದಲೇ ಖಚಿತ ಪಡಿಸಬೇಕು ಎನ್ನುವ ಬೇಡಿಕೆಯನ್ನೂ ಅನರ್ಹರು ಮುಂದಿಟ್ಟಿದ್ದಾರೆ ಎನ್ನಲಾಗುತ್ತಿದೆ. ಅನರ್ಹರ ವಾದವನ್ನು ಸಿಎಂ ಗಮನಕ್ಕೆ ತಂದು ಸರಿಪಡಿಸುವುದಾಗಿ ಉಪ ಮುಖ್ಯಮಂತ್ರಿ ಡಾ| ಅಶ್ವತ್ಥ್ ನಾರಾಯಣ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಪಕ್ಷ ಸೇರುವುದು ಕಷ್ಟ: ಅನರ್ಹ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ಅನರ್ಹತೆ ಪ್ರಕರಣ ಇತ್ಯರ್ಥವಾಗದೆ ಬಿಜೆಪಿ ಸೇರಲು ತಾಂತ್ರಿಕ ವಾಗಿ ಸಮಸ್ಯೆಯಾಗುವ ಸಾಧ್ಯತೆ ಇದೆ ಎಂಬ ಗೊಂದಲದಲ್ಲಿದ್ದಾರೆ. ತಾವು ಬಿಜೆಪಿ ಜತೆಗೆ ಕೈ ಜೋಡಿಸಿ ಮೈತ್ರಿ ಸರಕಾರ ಉರುಳಿಸಿಲ್ಲ. ಸರಕಾರದ ನಡವಳಿಕೆಯಿಂದ ಬೇಸತ್ತು ರಾಜೀನಾಮೆ ನೀಡಿ ದ್ದೇವೆ ಎಂದು ತಮ್ಮ ರಾಜೀನಾಮೆಗೆ ಕಾರಣ ನೀಡುತ್ತಿರುವ ಅನರ್ಹರು, ಒಂದು ವೇಳೆ ಪ್ರಕರಣ ಇತ್ಯರ್ಥ ವಾಗುವ ಮೊದಲೇ ಬಿಜೆಪಿ ಜತೆಗೆ ಅಧಿಕೃತವಾಗಿ ಗುರುತಿಸಿಕೊಂಡರೆ, ಕಾಂಗ್ರೆಸ್ ಹಾಗೂ ಜೆಡಿಎಸ್ ಅದನ್ನೇ ಕೋರ್ಟ್ ಮುಂದೆ ಪ್ರಮುಖ ದಾಖಲೆಯಾಗಿ ಸಲ್ಲಿಸಿ ಸ್ಪೀಕರ್ ತೀರ್ಪಿಗೆ ಬಲವಾದ ಕಾರಣ ನೀಡುವ ಸಾಧ್ಯತೆ ಇದೆ ಎನ್ನುವ ಕಾರಣಕ್ಕೆ ಅನರ್ಹರು ಬಹಿರಂಗವಾಗಿ ಬಿಜೆಪಿ ಜತೆಗೆ ಗುರುತಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ.
ಅದೇ ಕಾರಣಕ್ಕೆ ತಾವು ಬಿಜೆಪಿ ಟಿಕೆಟ್ ಕೇಳಿಲ್ಲ. ಬಿಜೆಪಿ ಸೇರುವ ಬಗ್ಗೆ ನಿರ್ಧರಿಸಿಲ್ಲ ಎಂದು ಬಹಿರಂಗವಾಗಿ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಆದರೆ ಅವರ ಈ ನಡೆಯೇ ಅವರಿಗೆ ಮೂಲ ಬಿಜೆಪಿಯವರ ತಿರಸ್ಕಾರಕ್ಕೆ ಕಾರಣವಾಗುತ್ತಿದ್ದು, ಈ ಗೊಂದಲ ನಿವಾರಣೆಗಾಗಿ ಕಸರತ್ತು ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿ ಬಗ್ಗೆ ಚರ್ಚೆ ಇಲ್ಲ : ಬಿ.ಸಿ. ಪಾಟೀಲ್
ಅ.22ರಂದು ನಮ್ಮ ಅನರ್ಹತೆ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರುವುದರಿಂದ ಆ ಕುರಿತು ವಕೀಲರ ಜತೆ ಚರ್ಚಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ನಾವು ಬಿಜೆಪಿಯವರ ಬಗ್ಗೆ ಚರ್ಚೆ ಮಾಡುವುದಿಲ್ಲ ಎಂದು ಅನರ್ಹ ಶಾಸಕ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಅನರ್ಹ ಶಾಸಕರ ಸಭೆಯ ಅನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವೀಗ ಅನರ್ಹರು. ಅರ್ಹರಾಗುವ ಬಗ್ಗೆ ಗಮನ ಹರಿಸುತ್ತೇವೆ. ನಮ್ಮ ಪ್ರಕರಣ ಇತ್ಯರ್ಥವಾಗುವವರೆಗೂ ಬಿಜೆಪಿ ಬಗ್ಗೆ ಯಾವುದೇ ಚರ್ಚೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಅನರ್ಹಗೊಂಡ ಶಾಸಕರ ಪರ ನಾವಿದ್ದೇವೆ. ಅನರ್ಹಗೊಂಡ ಶಾಸಕರ ಜತೆ ನಾವಿದ್ದೇವೆ. ಉಮೇಶ್ ಕತ್ತಿ ಅವರು ಯಾವ ಅರ್ಥದಲ್ಲಿ ಯಾಕೆ ಹೇಳಿದರೋ ಗೊತ್ತಿಲ್ಲ. ಆದರೆ ಒಂದಂತೂ ಸತ್ಯ ಅನರ್ಹಗೊಂಡ ಶಾಸಕರಿಗೆ ಒಳ್ಳೆಯದಾಗುತ್ತದೆ.
– ಆರ್. ಅಶೋಕ್, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.