![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 17, 2019, 10:57 AM IST
ನವದೆಹಲಿ: ಕಾಂಗ್ರೆಸ್-ಜೆಡಿಎಸ್ ನ 17 ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್ ಆದೇಶದ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ.ಇದರಿಂದ ಅನರ್ಹ ಶಾಸಕರ ಕಾನೂನು ಹೋರಾಟಕ್ಕೆ ಭಾರೀ ಹಿನ್ನಡೆಯಾದಂತಾಗಿದೆ.
ಅನರ್ಹ ಶಾಸಕರ ಅರ್ಜಿ ವಿಚಾರಣೆಯಿಂದ ನ್ಯಾ. ಮೋಹನ್ ಶಾಂತನಗೌಡರ್ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಈಗ ಬೇರೆ ನ್ಯಾಯಮೂರ್ತಿಗಳು ಪೀಠಕ್ಕೆ ನೇಮಕವಾಗಬೇಕಾಗಿದೆ.
ನ್ಯಾ.ಶಾಂತನ ಗೌಡರ್ ಅವರು ಕರ್ನಾಟಕದ ಮೂಲದವರಾಗಿದ್ದರಿಂದ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.
ನ್ಯಾ.ಮೋಹನ್ ಶಾಂತನಗೌಡರ್ ಮತ್ತು ಅನರ್ಹ ಶಾಸಕ ಬಿಸಿ ಪಾಟೀಲ್ ಒಂದೇ ಜಿಲ್ಲೆಯವರು. ಹೀಗಾಗಿ ಸ್ವಜನ ಪಕ್ಷಪಾತದ ಆರೋಪಕ್ಕೆ ಎಡೆಮಾಡಿ ಕೊಡಬಹುದು ಎಂಬ ನಿಟ್ಟಿನಲ್ಲಿ ವಿಚಾರಣೆಯಿಂದ ಹಿಂದೆ ಸರಿದಿರುವುದಾಗಿ ವರದಿ ತಿಳಿಸಿದೆ.
You seem to have an Ad Blocker on.
To continue reading, please turn it off or whitelist Udayavani.