ಅಧ್ಯಕ್ಷ ಸ್ಥಾನದಲ್ಲಿ ಸಕ್ರಿಯರಾಗಿರಲು ಹೈಕಮಾಂಡ್ ಸೂಚಿಸಿಲ್ಲ : ದಿನೇಶ್‌ಗುಂಡೂರಾವ್
Team Udayavani, Jan 28, 2020, 8:15 PM IST
ಬೆಂಗಳೂರು:ಕೆಪಿಸಿಸಿ ಅಧ್ಯಕ್ಷರ ನೇಮಕ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಚುಟುವಟಿಕೆಗಳಲ್ಲಿ ಸಕ್ರೀಯರಾಗುವಂತೆ ಹೈಕಮಾಂಡ್ ಸೂಚಿಸಿದ ಹಿನ್ನೆಲೆಯಲ್ಲಿ ದಿನೇಶ್ ಗುಂಡೂರಾವ್ ಮಂಗಳವಾರ ಪಕ್ಷದ ಕಚೇರಿಯಲ್ಲಿ ಅಧಿಕೃತ ಸಭೆ ನಡೆಸಿದರು.
ರಾಜ್ಯಾದ್ಯಂತ ಕಾಂಗ್ರೆಸ್ ಆಸ್ತಿ ಪಾಸ್ತಿಯ ವಾಸ್ತವ ಸ್ಥಿತಿಗತಿ ಕುರಿತು ಎಐಸಿಸಿ ವತಿಯಿಂದ ಮಾಹಿತಿ ನೀಡುವಂತೆ ಸೂಚಿಸಿರುವುದರಿಂದ ಬೆಂಗಳೂರು ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಪಕ್ಷದ ಆಸ್ತಿಯ ಬಗ್ಗೆ ಮಾಹಿತಿ ಪಡೆಯಲು ಜಿಲ್ಲಾಧ್ಯಕ್ಷರುಗಳ ಸಭೆ ನಡೆಸಿದರು.
ಸಭೆಯ ನಂತರ ಮಾತನಾಡಿದ ದಿನೇಶ್ ಗುಂಡೂರಾವ್, ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವಂತೆ ಹೈಕಮಾಂಡ್‌ನಿಂದ ಯಾವುದೇ ಸೂಚನೆ ಇಲ್ಲ.
ಹೈಕಮಾಂಡ್ ಅಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರ ನೇಮಕವನ್ನು ಆದಷ್ಟು ಬೇಗ ಮಾಡಬೇಕು. ನಾಯಕತ್ವದ ಬಗ್ಗೆ ಯಾವುದೇ ನಾಯಕರು ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ. ಶಾಸಕಾಂಗ ನಾಯಕ ಹಾಗೂ ಪ್ರತಿಪಕ್ಷದ ನಾಯಕನ ಸ್ಥಾನ ವಿಭಜಿಸುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುವವರೆಗೂ ಈ ರೀತಿಯ ಹೇಳಿಕೆಗಳು ಸಹಜ ಎಂದು ಹೇಳಿದರು.
ಇದೇ ವೇಳೆ, ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ವಿಳಂಬದ ಬಗ್ಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಿಜೆಪಿಯ ಆಂತರಿಕ ವಿಚಾರವಾಗಿದ್ದರೂ, ಅದು ಸರ್ಕಾರಕ್ಕೆ ಸಂಬಂಧಿಸಿರುವುದರಿಂದ ರಾಜ್ಯದ ಜನತೆಗೆ ಸಂಬಂಧಿಸಿದ್ದಾಗಿದೆ. ಸಂಪುಟ ವಿಸ್ತರಣೆ ವಿಳಂಬವಾಗುವುದರಿಂದ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಾಗುವುದಿಲ್ಲ. ಇದರಿಂದ ಆಡಳಿತದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.
ಪರಿಷತ್‌ಗೆ ಅಭ್ಯರ್ಥಿ ಇಲ್ಲ: ರಿಜ್ವಾನ್ ಅರ್ಷದ್ ಅವರಿಂದ ತೆರವಾಗಿರುವ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ವಿಧಾನಸಭೆಯಲ್ಲಿ ಸಂಖ್ಯಾ ಬಲದ ಕೊರತೆ ಇರುವುದರಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ ಎಂದು ಹೇಳಿದರು.
ಸಂಪುಟ ವಿಳಂಬಕ್ಕೆ ಮೋದಿ-ಶಾ ನಡುವೆ ಭಿನ್ನಾಭಿಪ್ರಾಯ:ಖಂಡ್ರೆ
ರಾಜ್ಯ ಸಚಿವ ಸಂಪುಟ ವಿಸ್ತರಣೆಯ ವಿಷಯವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ನಡುವೆ ಭಿನ್ನಾಭಿಪ್ರಾಯ ಇರುವುದರಿಂದ ವಿಸ್ತರಣೆ ವಿಳಂಬವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದಿದೆ. ಆಡಳಿತ ಯಂತ್ರ ಸಂಪೂರ್ಣ ಕುಸಿದು ಹೋಗಿದೆ. ರಾಜ್ಯದ ಅಭಿವೃದ್ಧಿ ಶೂನ್ಯ ಸ್ಥಿತಿ ತಲುಪಿದೆ. ಚುನಾವಣೆ ಸಂದರ್ಭದಲ್ಲಿ ಅಭಿವೃದ್ಧಿ ಸಲುವಾಗಿ ಸಚಿವರನ್ನಾಗಿ ಮಾಡುತ್ತೇವೆ ಎಂದು ಹೇಳಿದ್ದ ಬಿಜೆಪಿಯವರು ಈಗ ಸಂಪುಟ ವಿಸ್ತರಣೆ ಮಾಡದೇ ದಿನ ದೂಡುತ್ತಿದ್ದಾರೆ. ರಾಜೀನಾಮೆ ಕೊಡಿಸುವಾಗ ಎಲ್ಲರನ್ನು ಸಚಿವರನ್ನಾಗಿ ಮಾಡುವುದಾಗಿ ಹೇಳಿ ಈಗ ಎಲ್ಲರನ್ನು ಸಚಿವರನ್ನಾಗಿ ಮಾಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಅವರನ್ನು ಕರೆದುಕೊಂಡು ಹೋಗುವಾಗ ಇದು ಗೊತ್ತಿರಲಿಲ್ಲವೇ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಹಲವಾರು ಯೋಜನೆಗಳು ನೆನೆಗುದಿಗೆ ಬಿದ್ದಿವೆ. ರಾಜ್ಯದಲ್ಲಿ ನೆರೆ ಪೀಡಿತ ಪ್ರದೇಶದ ಜನರಿಗೆ ಸರಿಯಾದ ಪರಿಹಾರ ವಿತರಣೆಯಾಗಿಲ್ಲ. ಆರ್ಥಿಕ ಸಂಕಷ್ಟದಿಂದ ಅನೇಕ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ. ಈ ಬಗ್ಗೆ ಮಾತನಾಡುವ ಬದಲು ಭಾವನಾತ್ಮಕ ವಿಷಯ ಮುಂದಿಟ್ಟು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.