ಭಾಸ್ಕರ ರಾವ್ “ನಿಷೇಧಾಜ್ಞೆ’ ಆದೇಶ ಕಾನೂನು ಬಾಹಿರ ಎಂದ ಹೈಕೋರ್ಟ್
Team Udayavani, Feb 13, 2020, 8:52 PM IST
ಬೆಂಗಳೂರು: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ 2019ರ ಡಿಸೆಂಬರ್ 18ರಿಂದ ಮೂರು ದಿನಗಳ ಕಾಲ ಬೆಂಗಳೂರು ನಗರದಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತರು ಹೊರಡಿಸಿದ್ದ ಆದೇಶ “ಕಾನೂನು ಬಾಹಿರ’ ಎಂದು ಹೈಕೋರ್ಟ್ ಗುರುವಾರ ಮಹತ್ವದ ಆದೇಶ ನೀಡಿದೆ.
ಈ ಕುರಿತು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಪ್ರೊ. ರಾಜೀವಗೌಡ, ಶಾಸಕಿ ಸೌಮ್ಯ ರೆಡ್ಡಿ, ಪಿಯುಸಿಎಲ್ ಸಂಘಟನೆ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಹೇಮಂತ್ ಚಂದನಗೌಡರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿತು.
ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಭಾಸ್ಕರ ರಾವ್ ಹೊರಡಿಸಿರುವ ಆದೇಶ “ಕಾನೂನು ಬಾಹಿರ’ವಾಗಿದೆ. ಅಷ್ಟೇ ಇಲ್ಲ. ಆಯುಕ್ತರ ಈ ಆದೇಶ “ಕಾನೂನು ಪರಿಶೀಲನೆ ಎದುರು ನಿಲ್ಲುವುದಿಲ್ಲ’. ಆದರೆ, ನಿಷೇಧಾಜ್ಞೆ ಜಾರಿಗೊಳಿಸಿದ್ದ ಅವಧಿ ಈಗಾಗಲೇ ಮುಕ್ತಾಯಗೊಂಡಿರುವುದರಿಂದ ಆಯುಕ್ತರ ಆದೇಶವನ್ನು ರದ್ದುಗೊಳಿಸಬೇಕು ಎಂಬ ಅರ್ಜಿದಾರರ ಮನವಿಯನ್ನು ಹೊರತುಪಡಿಸಿ, ಆಯಕ್ತರ ಆದೇಶ ಕಾನೂನು ಬಾಹಿರ ಮತ್ತು ಅಕ್ರಮ ಎಂದಷ್ಟೇ ಹೇಳಿ ಅರ್ಜಿಗಳನ್ನು ನ್ಯಾಯಪೀಠ ಭಾಗಶ: ಮಾನ್ಯ ಮಾಡಿತು.
ಸಿಆರ್‌ಪಿಸಿ ಸೆಕ್ಷನ್ 144 ಜಾರಿಗೆ ಪೊಲೀಸ್ ಆಯುಕ್ತರಿಗೆ ಎಲ್ಲಾ ಅಕಾರವಿದೆ. ಆದರೆ ಆದೇಶಕ್ಕೂ ಮುನ್ನ ಸೂಕ್ತ ವಿಚಾರಣೆ ನಡೆಸಬೇಕು ಮತ್ತು ಅಗತ್ಯ ಅಭಿಪ್ರಾಯಗಳನ್ನು ಸಂಗ್ರಹಿಸಬೇಕಿತ್ತು. ಆದರೆ ಇಲ್ಲಿ ಅವರೆಡನ್ನೂ ಮಾಡಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಅಲ್ಲದೆ, ನಿಷೇಧಾಜ್ಞೆ ಆದೇಶದಲ್ಲಿ ಸರಿಯಾದ ಕಾರಣವನ್ನು ನಮೂದಿಸಬೇಕಾಗಿತ್ತು, ಆ ಕೆಲಸವನ್ನು ಆಯುಕ್ತರು ಮಾಡಿಲ್ಲ ಎಂದ ನ್ಯಾಯಪೀಠ, ಸುಪ್ರೀಂಕೊರ್ಟ್ ರಾಮ್‌ಲೀಲಾ ಮೈದಾನ ಮತ್ತು ಅನುರಾಧ ಬಸಿನ್ ಪ್ರಕರಣದಲ್ಲಿ ನೀಡಿರುವ ತೀರ್ಪಿನಂತೆ ಆದೇಶ ನ್ಯಾಯಾಂಗದ ಪರಾಮರ್ಶೆಯಲ್ಲಿ ನಿಲ್ಲುವಂತಿರಬೇಕು ಎಂದು ಅಭಿಪ್ರಾಯಪಟ್ಟಿದೆ.
“”ಪೊಲೀಸ್ ಮಹಾನಿರ್ದೇಶಕರ ಪತ್ರ ಆಧರಿಸಿ ಆಯುಕ್ತರು ಸೆಕ್ಷನ್ 144 ಜಾರಿಗೊಳಿಸಿ¨ªಾರೆ. ಆದೇಶ ಜಾರಿಗೊಳಿಸುವಾಗ ನಗರ ಪೊಲೀಸ್ ಆಯುಕ್ತರು ಜಿಲ್ಲಾ ಮ್ಯಾಜಿಸ್ಟ್ರೇಟ್ ರೀತಿ ಕಾರ್ಯ ನಿರ್ವಹಿಸಬೇಕು, ಸೆಕ್ಷನ್ ಜಾರಿಗೊಳಿಸಬೇಕೋ ಬೇಡವೋ ಎಂಬ ಬಗ್ಗೆ ಸ್ವತಃ ನಿರ್ಧರಿಸಬೇಕು. ನಗರದ ಡಿಸಿಪಿಗಳ ವರದಿ ಆಧರಿಸಿ ಆಯುಕ್ತರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಆದರೆ ವರದಿ ಬಗ್ಗೆ ಪೊಲೀಸ್ ಆಯುಕ್ತರು ಸೂಕ್ತ ವಿಚಾರಣೆ ನಡೆಸಿಲ್ಲ. ಕೆಲ ಡಿಸಿಪಿಗಳು ಪ್ರತಿಭಟನೆಗೆ ಅನುಮತಿ ನೀಡಿದ್ದರು. ಆದರೆ ನಂತರ ಸೆಕ್ಷನ್ 144 ಜಾರಿ ಮಾಡುವಂತೆ ವರದಿ ನೀಡಿದ್ದಾರೆ. ನಿಷೇಧಾಜ್ಞೆ ಜಾರಿಗೆ ಆಯುಕ್ತರು ಸಮರ್ಥ ಕಾರಣಗಳನ್ನು ಕೊಟ್ಟಿಲ್ಲ. ಯಾಂತ್ರಿಕವಾಗಿ ಆದೇಶ ಹೊರಡಿಸಲಾಗಿದೆ’ ಎಂದು ನ್ಯಾಯಪೀಠ ಆದೇಶದಲ್ಲಿ ಉಲ್ಲೇಖೀಸಿದೆ.
ರಾಮ್‌ಲೀಲಾ ಮೈದಾನದ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಅವಕಾಶವಿದೆ. ಅದು ಮೂಲಭೂತ ಹಕ್ಕು ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳ ನೀತಿ ನಿರ್ಧಾರಗಳ ವಿರುದ್ಧ ಶಾಂತಿಯುತ ಪ್ರತಿಭಟನೆ, ಬಂದ್, ರಾಸ್ತಾರೋಕೊ, ಮೆರವಣಿಗೆ ನಡೆಸುವ ಎಲ್ಲ ಅ ಧಿಕಾರ ಜನರಿಗೆ ಇದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ಆದರಂತೆ, ಬೆಂಗಳೂರು ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗಳನ್ನು ನಡೆಸಲು ಅನುಮತಿ ನೀಡಿದ ಪೊಲೀಸರು ನಂತರ ಆ ಅನುಮತಿಗಳನ್ನು ಹತ್ತಿಕ್ಕಲು ನಿಷೇಧಾಜ್ಞೆ ಜಾರಿಗೊಳಿಸುವ ಮೂಲಕ ಪ್ರತಿಭಟನಾಕಾರರ ಮೂಲಭೂತ ಹಕ್ಕು ಕಸಿದುಕೊಂಡಿದ್ದಾರೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.