ಕೋವಿಡ್ ರಣಕೇಕೆ : ತುರ್ತು ಪರಿಸ್ಥಿತಿ ಘೋಷಣೆ ಮಾಡಿದ ಜಪಾನ್ ಸರ್ಕಾರ
Team Udayavani, Apr 24, 2021, 11:47 AM IST
ಟೋಕಿಯೊ(ಜಪಾನ್) : ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಟೋಕಿಯೊದ ಜೊತೆಗೆ ಕ್ಯೋಟೋ, ಒಸಾಕಾ ಮತ್ತು ಹ್ಯೋಗೊದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಲಾಗಿದೆ ಎಂದು ಜಪಾನ್ ಪ್ರಧಾನಿ ಯೋಶಿಹಿಡಾ ಸುಗಾ ಖಚಿತಪಡಿಸಿದ್ದಾರೆ.
ಕ್ಯೋಟೋ, ಒಸಾಕಾ ಮತ್ತು ಹ್ಯೋಗೊದಲ್ಲಿ ಪ್ರದೇಶದಲ್ಲಿನ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಏಪ್ರಿಲ್ 25 ರಿಂದ ಮೇ 11 ರವರೆಗೆ ಈ ಸ್ಥಳಗಳಲ್ಲಿ ತುರ್ತು ಪರಿಸ್ಥಿತಿ ಮುಂದುವರಿಯಲಿದೆ ಎಂದು ವರದಿಯಾಗಿದೆ. ಕಳೆದ ಜನವರಿಯಲ್ಲಿ ದೇಶದ ಅನೇಕ ಸ್ಥಳಗಳಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಅದಕ್ಕೆ ಹೋಲಿಸಿದ್ರೆ ಈ ಬಾರಿಯ ತುರ್ತು ಪರಿಸ್ಥಿತಿ ತುಂಬಾ ಕಠಿಣ ಎನ್ನಲಾಗುತ್ತಿದೆ.
ಜಪಾನ್ ದೇಶದಲ್ಲಿ ಕೋವಿಡ್ ಸೋಂಕಿನಿಂದ 10000 ಜನ ಮಾತ್ರ ಸಾವನ್ನಪ್ಪಿದ್ದಾರೆ. ಕಳೆದ ಬಾರಿ ತುರ್ತು ಪರಿಸ್ಥಿತಿ ವೇಳೆ ಸೋಂಕಿನ ಸಂಖ್ಯೆ ಕಡಿಮೆ ಇತ್ತು. ನಂತರ ತುರ್ತು ಪರಿಸ್ಥಿತಿ ತೆಗೆದೆ ಮೇಲೆ ಮತ್ತೆ ಸೋಂಕಿನ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಜಪಾನ್ ಸರ್ಕಾರ ತುರ್ತು ಪರಿಸ್ಥಿತಿಯನ್ನು ಜಾರಿ ಮಾಡಿದೆ.
ಟೋಕಿಯೊದಲ್ಲಿ ಮಾತ್ರ ಶುಕ್ರವಾರ 759 ಪ್ರಕರಣಗಳು ದಾಖಲಾಗಿವೆ. ಒಸಾಕಾದಲ್ಲಿ ಹೊಸದಾಗಿ 1162 ಪ್ರಕರಣಗಳು ದಾಖಲಾಗಿವೆ. ಒಸಾಕಾದಲ್ಲಿ ಅನಾರೋಗ್ಯದ ರೋಗಿಗಳಿಗೆ ಈಗ ಹಾಸಿಗೆಗಳು ಕಡಿಮೆಯಾಗುತ್ತಿವೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.